ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ಯಾರು? ಮುನಿಯಪ್ಪ ಸಮಾಜ ಕಲ್ಯಾಣ ಖಾತೆ ಪಡೆದಿದ್ದು ಹೇಗೆ ಗೊತ್ತಾ; ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ

ಆರಂಭದಲ್ಲಿ ನಾಲ್ಕೈದು ಜನರನ್ನು ಡಿಸಿಎಂ ಮಾಡುವ ಯೋಜನೆಯಿತ್ತು. ಆದರೆ, ಒಬ್ಬರಿಗಷ್ಟೇ ಡಿಸಿಎಂ ಹುದ್ದೆ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಿ ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿಸಿದ್ದು ನಾನೇ.
Siddaramaiah
ಸಿದ್ದರಾಮಯ್ಯ
Updated on

ಬೆಂಗಳೂರು: ಪರಮೇಶ್ವರ್ ಅವರನ್ನು ಉಪ ಮುಖ್ಯಮಂತ್ರಿ ಮಾಡಿದ್ದು ಯಾರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಗಾಂಧಿ ಭವನದಲ್ಲಿ ನಡೆದ ‘ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಕಾರ್ಯಕ್ರಮದಲ್ಲಿ ಸಭಿಕರೊಬ್ಬರು ದಲಿತ ಸಿಎಂ ವಿಚಾರವನ್ನು ಪ್ರಸ್ತಾಪಿಸಿದರು. ಇದರಿಂದ ಕೊಂಚ ಭಾವೋದ್ವೇಗಕ್ಕೊಳಗಾದ ಸಿದ್ದರಾಮಯ್ಯ, ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ಯಾರು? ಆರಂಭದಲ್ಲಿ ನಾಲ್ಕೈದು ಜನರನ್ನು ಡಿಸಿಎಂ ಮಾಡುವ ಯೋಜನೆಯಿತ್ತು. ಆದರೆ, ಒಬ್ಬರಿಗಷ್ಟೇ ಡಿಸಿಎಂ ಹುದ್ದೆ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಿ ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿಸಿದ್ದು ನಾನೇ ಎಂದು ನೇರವಾಗಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಕಾರ್ಯಕ್ರಮಕ್ಕೆ ಇಬ್ಬರು ಮಂತ್ರಿಗಳನ್ನು ಆಹ್ವಾನಿಸಿದ್ದೆ, ಅವರಿಬ್ಬರು ಬಂದಿಲ್ಲ ಎಂದು ಕೊಂಚ ಗರಂ ಆದರು. ಇನ್ನೂ ಕೆ.ಎಚ್ ಮುನಿಯಪ್ಪ ಅವರ ಬಳಿ ಸಮಾಜ ಕಲ್ಯಾಣ ಖಾತೆಯಿದೆ, ಆದರೆ ಅದನ್ನು ಅವರು ಹೋರಾಟ ಮಾಡಿ ತೆಗೆದುಕೊಂಡಿದ್ದಾರೆ. ಅವರಿಗೆಲ್ಲಾ ಶಕ್ತಿ ತುಂಬುವ ಕೆಲಸ ಮಾಡಬೇಕು. ಯಾರಿಗೂ ಅನ್ಯಾಯ ಆಗಬಾರದು. ಎಲ್ಲರಿಗೂ ನ್ಯಾಯ ಸಿಗಬೇಕು ಎಂದರು.

Siddaramaiah
ಹಳೆಯ ತಂಡಕ್ಕೆ ಗುಡ್‌ಬೈ, ಹೊಸ ಮುಖಗಳಿಗೆ ಮಣೆ: ಅಹಿಂದ ವೇದಿಕೆ ಪುನಶ್ಚೇತನಕ್ಕೆ ಸಿದ್ದರಾಮಯ್ಯ ಸಜ್ಜು..?

ನೀವು ಪಾರ್ಲಿಮೆಂಟ್ ನಲ್ಲಿ ಮಾತನಾಡಬೇಕು, ಮುುಂದಿನ ಪ್ರಧಾನಿಯಾಗಬೇಕು ಎಂದು ಅಭಿಮಾನಿಯೊಬ್ಬರು ಹೇಳಿದ ಮಾತಿಗೆ ಉತ್ತರಿಸಿದ ಸಿದ್ದರಾಮಯ್ಯ ನಾನು ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ, ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com