

ದಾವಣಗೆರೆ: ಕರ್ನಾಟಕ ಕಾಂಗ್ರೆಸ್ ನಲ್ಲಿ ಮತ್ತೆ ನಾಯಕತ್ವ ಬದಲಾವಣೆ ಸುದ್ದಿಯಾಗುತ್ತಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ನೀಡಿದ್ದರು.
ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ, ಅಧಿಕಾರ ಹಂಚಿಕೆ ಕುರಿತ ಒಪ್ಪಂದ ಈಗಾಗಲೇ ಆಗಿದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ ಎಂದಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್‌ನ ಎಲ್ಲಾ 139 ಶಾಸಕರ ಬೆಂಬಲವಿದೆ. ಇದಕ್ಕೂ ಮೀರಿ ನಮ್ಮಂತಹ 40-50 ಯುವ ಶಾಸಕರು ಡಿಕೆಶಿ ಏನೇ ಹೇಳಿದರೂ ಮಾಡಲು ಸಿದ್ಧರಾಗಿದ್ದೇವೆ. ಅಗತ್ಯವಿದ್ದರೆ ಪ್ರಾಣ ಕೊಡಲೂ ಸಿದ್ಧ ಎಂದರು.
ಅಧಿಕಾರ ಹಂಚಿಕೆ ಕುರಿತು ಒಪ್ಪಂದ ಆಗಿರುವ ಬಗ್ಗೆ ನನಗೆ ಸ್ಪಷ್ಟ ಮಾಹಿತಿ ಇದೆ. ಈ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು. ಯತೀಂದ್ರ ಸಿದ್ದರಾಮಯ್ಯ ಪದೇಪದೇ ನಾಯಕತ್ವ ವಿಚಾರವಾಗಿ ಹೇಳಿಕೆ ನೀಡುತ್ತಿರುವುದು ಪಕ್ಷದ ಒಳಚರ್ಚೆಗೆ ಕಾರಣವಾಗಿದೆ. ಯತೀಂದ್ರ ಹೇಳಿಕೆ ಬಗ್ಗೆ ಪಕ್ಷದ ಹೈಕಮಾಂಡ್‌ವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
Advertisement