ತಿಹಾರ್ ಜೈಲಿನಲ್ಲಿದ್ದಾಗ 'ಹಿತ' ಕಾಯುವ ಭರವಸೆ ನೀಡಿದ್ದೀರಿ- ಸೋನಿಯಾ ಮುಂದೆ ಡಿಕೆಶಿ ಅಳಲು: ರಾಹುಲ್ ಭೇಟಿ ಬಳಿಕ ಹಸನ್ಮುಖರಾಗಿ ಹೊರಬಂದ DCM!

ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ಹೆಣೆಯಲು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಶಿವಕುಮಾರ್ ಭಾಗಿಯಾದರು. ಈ ವೇಳೆ, ರಾಹುಲ್‌ ಹಾಗೂ ಪ್ರಿಯಾಂಕಾ ಅವರೊಂದಿಗೆ ರಾಜ್ಯ ಕಾಂಗ್ರೆಸ್‌ನ ಅಧಿಕಾರ ಹಸ್ತಾಂತರ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದರು.
Dk Shivakumar, rahul gandhi And sonia gandhi
ಡಿಕೆ ಶಿವಕುಮಾರ್, ರಾಹುಲ್ ಮತ್ತು ಸೋನಿಯಾ ಗಾಂಧಿ ( ಸಂಗ್ರಹ ಚಿತ್ರ)
Updated on

ಬೆಂಗಳೂರು: ಮುಖ್ಯಮಂತ್ರಿ ಪಟ್ಟಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ಮುಂದೆ ಪ್ರಬಲ ದಾಳ ಉರುಳಿಸಿದ್ದಾರೆ. ದೆಹಲಿ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭೇಟಿಯಾಗಿದ್ದ ಡಿಕೆಶಿ ಪಕ್ಷದ ವರಿಷ್ಠೆ ಸೋನಿಯಾಗಾಂಧಿ, ರಾಹುಲ್ ಗಾಂಧಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ಹೆಣೆಯಲು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಶಿವಕುಮಾರ್ ಭಾಗಿಯಾದರು. ಈ ವೇಳೆ, ರಾಹುಲ್‌ ಹಾಗೂ ಪ್ರಿಯಾಂಕಾ ಅವರೊಂದಿಗೆ ರಾಜ್ಯ ಕಾಂಗ್ರೆಸ್‌ನ ಅಧಿಕಾರ ಹಸ್ತಾಂತರ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದರು. ಶೀಘ್ರದಲ್ಲೇ ಇಬ್ಬರಿಗೂ (ಸಿದ್ದರಾಮಯ್ಯ ಹಾಗೂ ಶಿವಕುಮಾರ್‌) ಬುಲಾವ್‌ ನೀಡಿ ಗೊಂದಲ ನಿವಾರಿಸುತ್ತೇವೆ ಎಂದು ರಾಹುಲ್‌ ಅಭಯ ನೀಡಿದರು ಎಂದು ಮೂಲಗಳು ತಿಳಿಸಿವೆ.

ತಿಹಾರ್ ಜೈಲಿನಲ್ಲಿದ್ದಾಗ ಹಿತ ಕಾಯುವ ಭರವಸೆ ನೀಡಿದ್ದ ಸೋನಿಯಾ ಗಾಂಧಿ ಎದುರು ಪಕ್ಷ ನಿಷ್ಠೆ, ನೆಹರೂ ಕುಟುಂಬದ ನಿಷ್ಠೆಯ ದಾಳ ಉರುಳಿಸಿದ್ದಾರೆ. ಕೊಟ್ಟ ಮಾತಿನಂತೆ ಅಧಿಕಾರ ಹಂಚಿಕೆಗೆ ಮುಂದಾಗಬೇಕೆಂದು ಡಿಕೆ ಕೇಳಿಕೊಂಡಿದ್ಧಾರೆ ಎನ್ನಲಾಗಿದೆ

ಸುಮಾರು 30 ನಿಮಿಷ ಮಾತುಕತೆ ವೇಳೆ, ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಅಂತ ಸೋನಿಯಾಗಾಂಧಿ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ಇಬ್ಬರನ್ನೂ ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸುವುದಾಗಿಯೂ ರಾಹುಲ್ ಗಾಂಧಿ ಹೇಳಿರುವುದಾಗಿ ದೆಹಲಿ ಮೂಲಗಳು ತಿಳಿಸಿವೆ

Dk Shivakumar, rahul gandhi And sonia gandhi
Watch | ದೆಹಲಿಗೆ ಬಂದಿರೋದೆ ರಾಜಕಾರಣ ಮಾಡೋದಕ್ಕೆ! ಬರೀ ಗಾಳಿ ಕುಡ್ಕೊಂಡು ಹೋಗೋದಿಕ್ಕಲ್ಲ!

ಪಕ್ಷದ ಸಂಕಷ್ಟದ ದಿನಗಳಲ್ಲಿ ನೆರವಿಗೆ ನಿಂತಿದ್ದು, ಐಟಿ, ಇಡಿ, ಸಿಬಿಐ ದಾಳಿಯಿಂದ ತಿಹಾರ್ ಜೈಲು ಸೇರಿದ್ದೆ. ತಿಹಾರ್ ಜೈಲಿಗೆ ನೀವೇ ಬಂದು ಭರವಸೆ ಕೊಟ್ಟಿದ್ದೀರಿ. ಕೊಟ್ಟ ಮಾತನ್ನು ನೀವು ಈಡೇರಿಸುವುದು ಯಾವಾಗ ಎಂದು ಕೇಳಿದ್ದಾರೆ.

ಈ ವೇಳೆ ಮಾತನಾಡಿರುವ ಸೋನಿಯಾ ಈಗ ನೀವು ತಾಳ್ಮೆಯಿಂದ ಇರಬೇಕು. ನಿಮಗೆ ಕೊಟ್ಟ ಭರವಸೆಯನ್ನು ಈಡೇರಿಸುತ್ತೇವೆ. ರಾಜ್ಯದ ಪರಿಸ್ಥಿತಿ ನೋಡಿಕೊಂಡು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಹಾಗೂ ನಿಮ್ಮೊಂದಿಗೆ ಮಾತುಕತೆ ನಡೆಸುತ್ತೇವೆ. ಯಾವಾಗ ಮಾತುಕತೆ ಎನ್ನುವುದನ್ನು ಮುಂದೆ ತೀರ್ಮಾನಿಸುತ್ತೇವೆ.ಸಿಎಂ ಹಾಗೂ ನಿಮ್ಮನ್ನು ದೆಹಲಿಗೆ ಕರೆಸಿಕೊಳ್ಳುತ್ತೇವೆ. ಶೀಘ್ರದಲ್ಲೇ ಎಲ್ಲವೂ ನಿರ್ಧಾರ ಆಗಲಿದೆ ಎಂದು ಸಂಸದ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್‌ ಅಧಿವೇಶನದ ಮೊದಲ ಹಂತ ಶುಕ್ರವಾರ ಮುಗಿಯಲಿದೆ. ಎರಡನೇ ಹಂತದ ಅಧಿವೇಶನ ಮಾರ್ಚ್‌ 9 ರಿಂದ ನಡೆಯಲಿದೆ. ರಾಜ್ಯ ಬಜೆಟ್‌ ಅಧಿವೇಶನ ಮಾರ್ಚ್ ಮೊದಲ ವಾರದಲ್ಲಿ ಶುರುವಾಗುವ ನಿರೀಕ್ಷೆ ಇದೆ. ಹೀಗಾಗಿ, ಈ ತಿಂಗಳಲ್ಲೇ ಇಬ್ಬರು ನಾಯಕರ ಜತೆಗೆ ವರಿಷ್ಠರು ಚರ್ಚೆ ನಡೆಸಿ ಬಿಕ್ಕಟ್ಟು ಬಗೆಹರಿಸಬಹುದು ಎಂದು ಶಿವಕುಮಾರ್ ಬಣ ವಿಶ್ವಾಸ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com