

ಬೆಂಗಳೂರು: ಬಾಗೇಪಲ್ಲಿ ಶಾಸಕ ಸ್ಥಾನದಿಂದ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ ಬೆನ್ನಲ್ಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ .ಅಶೋಕ್ ಕಿಡಿ ಕಾರಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅಶೋಕ್, ವೋಟ್ ಚೋರಿ ಕಹಾ ಹೈ?ಕಾಂಗ್ರೆಸ್ ಪಾರ್ಟಿ ಮೇ ಹೈ! ರಾಹುಲ್ ಗಾಂಧಿ ಅವರು ಈಗ ಬಾಗೇಪಲ್ಲಿಗೆ ಬಂದು ವೋಟ್ ಚೋರಿ, ಎಲೆಕ್ಷನ್ ಚೋರಿ ವಿರುದ್ಧ ಪ್ರತಿಭಟನೆ ಮಾಡ್ತಾರಾ? ಎಂದು ಪ್ರಶ್ನಿಸಿದ್ದಾರೆ. ನಮ್ಮ ದೇಶದಲ್ಲಿ ಮತಗಳ್ಳತನ, ಚುನಾವಣಾ ಅಕ್ರಮಕ್ಕೆ ಯಾರಾದರೂ ಪಿತಾಮಹ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರ ಪೂರ್ವಜರು ಎಂದು ಲೇವಡಿ ಮಾಡಿದ್ದಾರೆ
2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಎಸ್‌ಎನ್ ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರವು ದೋಷದಿಂದ ಕೂಡಿದ್ದು, ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಅಭ್ಯರ್ಥಿ ಮುನಿರಾಜು ಅವರು ಹೈಕೋರ್ಟ್‌ಗೆ ಅರ್ಜಿಸಲ್ಲಿಸಿದ್ದರು.
ನಾನು ಕಳೆದ ಮೂರು ವರ್ಷಗಳಿಂದ ಕಾನೂನುಬದ್ಧವಾಗಿ ಪ್ರಕರಣದ ವಿರುದ್ಧ ಹೋರಾಡುತ್ತಿದ್ದೇನೆ. ನ್ಯಾಯಾಲಯದ ತೀರ್ಪನ್ನು ನಾನು ಸ್ವಾಗತಿಸುತ್ತೇನೆ ಮತ್ತು ಬಾಗೇಪಲ್ಲಿಗೆ ಈ ಕ್ಷಣದಿಂದ ಶಾಸಕ ಇಲ್ಲ. ನ್ಯಾಯಾಲಯವು ನನ್ನನ್ನು ವಿಜೇತ ಎಂದು ಘೋಷಿಸಲಿಲ್ಲ ಆದರೆ ಸುಳ್ಳು ಮಾಹಿತಿ ನೀಡಿದ ಮತ್ತು ವಿವರಗಳನ್ನು ಮರೆಮಾಡಿದ ಭ್ರಷ್ಟ ಶಾಸಕನ ವಿರುದ್ಧ ನಾನು ಹೋರಾಡಿದೆ. ರೆಡ್ಡಿ ಕೋರಿಕೆಯಂತೆ ನ್ಯಾಯಾಲಯವು 30 ದಿನಗಳವರೆಗೆ ಆದೇಶಕ್ಕೆ ತಡೆ ನೀಡಲಿಲ್ಲ ಎಂದು ಮುನಿರಾಜು ಹೇಳಿದರು.
Advertisement