2028ಕ್ಕೆ ಕರ್ನಾಟಕದಲ್ಲಿ ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರುತ್ತದೆ: ಬಿ ಎಸ್ ಯಡಿಯೂರಪ್ಪ ವಿಶ್ವಾಸ

82 ವರ್ಷದ ಬಿಜೆಪಿ ನಾಯಕ ಯಡಿಯೂರಪ್ಪ, ಮುಂದಿನ ಆರು ವರ್ಷಗಳಿಗೂ ಹೆಚ್ಚಿನ ಅವಧಿಗೆ ಕೆಲಸ ಮಾಡುವ ಶಕ್ತಿಯು ತಮ್ಮಲ್ಲಿದೆ. ದೇವರ ಇಚ್ಛೆಯಿದ್ದರೆ ರಾಜ್ಯದ ಎಲ್ಲೆಡೆ ಪ್ರವಾಸ ಮಾಡಲು ನಾನು ಸಿದ್ಧನಿದ್ದೇನೆ. ನಿಮ್ಮ ಪ್ರದೇಶಕ್ಕೂ ನಾನು ಬರುತ್ತೇನೆ ಎಂದು ಹೇಳಿದರು.
B S Yediyurappa being felicitated by BJP leaders for his 50 years of public service
ಬಿಜೆಪಿ ನಾಯಕರು ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷದ ಸಾರ್ವಜನಿಕ ಸೇವೆಯನ್ನು ಸ್ಮರಿಸಿ ಅವರನ್ನು ಗೌರವಿಸಿದರು.
Updated on

ಬೆಂಗಳೂರು: ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ಭ್ರಷ್ಟ ಸರ್ಕಾರವನ್ನು ಅಧಿಕಾರದಿಂದ ದೂರ ಮಾಡುವ ಅಗತ್ಯವಿದೆ ಎಂದು ಹೇಳಿದರು. ನಾವು ಮನಸ್ಸು ಮಾಡಿಟ್ಟು ಬದ್ಧತೆಯಿಂದ ಕೆಲಸ ಮಾಡಿದರೆ ಇದನ್ನು ಸಾಧಿಸಬಹುದು ಎಂದು ಹೇಳಿದರು.

82 ವರ್ಷದ ಬಿಜೆಪಿ ನಾಯಕ ಯಡಿಯೂರಪ್ಪ, ಮುಂದಿನ ಆರು ವರ್ಷಗಳಿಗೂ ಹೆಚ್ಚಿನ ಅವಧಿಗೆ ಕೆಲಸ ಮಾಡುವ ಶಕ್ತಿಯು ತಮ್ಮಲ್ಲಿದೆ. ದೇವರ ಇಚ್ಛೆಯಿದ್ದರೆ ರಾಜ್ಯದ ಎಲ್ಲೆಡೆ ಪ್ರವಾಸ ಮಾಡಲು ನಾನು ಸಿದ್ಧನಿದ್ದೇನೆ. ನಿಮ್ಮ ಪ್ರದೇಶಕ್ಕೂ ನಾನು ಬರುತ್ತೇನೆ ಎಂದು ಹೇಳಿದರು.

B S Yediyurappa being felicitated by BJP leaders for his 50 years of public service
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ 6 ನಿರ್ಣಯ ಮಂಡನೆ

ಈ ವರ್ಷ ತಮ್ಮ ರಾಜಕೀಯ ಜೀವನದ 50 ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ಗಜೇಂದ್ರ ಸಿಂಗ್ ಶೇಖಾವತ್ ಅವರು ಸನ್ಮಾನಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ ಯಡಿಯೂರಪ್ಪ, ಪ್ರಧಾನಮಂತ್ರಿ ನಮ್ಮ ಆದರ್ಶ ವ್ಯಕ್ತಿ. ಅವರ ನೇತೃತ್ವದಲ್ಲಿ ಅವರಂತೆ ಕೆಲಸ ಮಾಡಿದರೆ ಗುರಿ ಸಾಧಿಸುವುದು ಕಷ್ಟವಲ್ಲ ಎಂದು ಹೇಳಿದರು.

B S Yediyurappa being felicitated by BJP leaders for his 50 years of public service
ಸದಾ ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡುವ ಬದಲು, ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತುವ ಧೈರ್ಯ ತೋರಿ..!

ಗಜೇಂದ್ರ ಸಿಂಗ್ ಶೇಖಾವತ್ ಅವರು 2047ರೊಳಗೆ ಭಾರತವು ಅಭಿವೃದ್ಧಿಶೀಲ ರಾಷ್ಟ್ರವಾದ ವಿಕಸಿತ ಭಾರತ ಆಗಬೇಕು ಎಂದರು. ಇದಕ್ಕಾಗಿ 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಭ್ರಷ್ಟ, ದಿವಾಳಿಯಾದ ಮತ್ತು ಹಗರಣಗಳಿಂದ ಕೂಡಿರುವ ಕರ್ನಾಟಕ ಸರ್ಕಾರವನ್ನು ಟೀಕಿಸಿದ ಅವರು, ಈ ವಿಚಾರಗಳನ್ನು ಮನೆಮನೆಗೆ ತೆರಳಿ ಜನರಿಗೆ ತಿಳಿಸಲು ಕಾರ್ಯಕರ್ತರಿಗೆ ಸೂಚಿಸಿದರು.

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com