ಸಿಎಂ ಕುರ್ಚಿ ಕದನ: ಸಮಸ್ಯೆ ಪರಿಹಾರವಾಗಲಿದೆ ಎಂಬ ಖರ್ಗೆ ಭರವಸೆ ಸಂತಸ ತಂದಿದೆ; ಡಿ.ಕೆ.ಶಿವಕುಮಾರ್

ನಿರಂತರ ಸಭೆಗಳ ಬಳಿಕ ಅಸ್ಸಾಂನಿಂದ ಶುಕ್ರವಾರ ತಡರಾತ್ರಿ ನಾನು ಬೆಂಗಳೂರಿಗೆ ಮರಳಿದ್ದೇನೆ. ಬಹಳ ಆಯಾಸವಾಗಿದೆ. ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ.
DK Shivakumar
ಡಿ.ಕೆ.ಶಿವಕುಮಾರ್
Updated on

ಬೆಂಗಳೂರು: ಪಕ್ಷದೊಳಗಿನ ನಾಯಕತ್ವ ಸಮಸ್ಯೆ ಪರಿಹಾರವಾಗಲಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭರವಸೆ ಸಂತಸ ತಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ದೆಹಲಿಯಲ್ಲಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷರು ನಾಯಕತ್ವ ಗೊಂದಲ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂಬ ಸತೀಶ್‌ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ‘ಗೊಂದಲ ಬಗೆಹರಿಸುವುದಾದರೆ ಬಹಳ ಸಂತೋಷ’ ಎಂದು ಹೇಳಿದರು.

ಸಾಮಾಜಿಕ ನ್ಯಾಯಕ್ಕೆ ಸಂಬಂಧಪಟ್ಟಂತೆ ಸೋಷಿಯಲ್‌ ಮೀಡಿಯಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ‘ಈ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದಷ್ಟೇ ಹೇಳಿದರು.

ಬಾಗಲಕೋಟೆ ಗಲಭೆ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ, ನಿರಂತರ ಸಭೆಗಳ ಬಳಿಕ ಅಸ್ಸಾಂನಿಂದ ಶುಕ್ರವಾರ ತಡರಾತ್ರಿ ನಾನು ಬೆಂಗಳೂರಿಗೆ ಮರಳಿದ್ದೇನೆ. ಬಹಳ ಆಯಾಸವಾಗಿದೆ. ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಸ್ಪಷ್ಟಪಡಿಸಿದರು.

ಅಲ್ಲಿಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ದು ಪರಿಹಾರ ನೀಡಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಅಧಿಕಾರಿಗಳು ನಮಗೆ ವರದಿ ನೀಡಲಿದ್ದು, ನಂತರ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

DK Shivakumar
Watch | ಸಿ.ಜೆ ರಾಯ್ ಸಾವು ಪ್ರಕರಣದ ತನಿಖೆಯಾಗಲಿ: ಡಿಕೆಶಿ, ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ಈ ನಡುವೆ ಶಿವಕುಮಾರ್ ಬೆಂಬಲಿಗ ಹಾಗೂ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು, ಫೆಬ್ರವರಿ 26ರಂದು ಶಿವಕುಮಾರ್ ಅವರನ್ನು ನವದೆಹಲಿಗೆ ಕರೆಸಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ತೀರ್ಮಾನ ಕೈಗೊಳ್ಳಲು ಹೈಕಮಾಂಡ್ ಕರೆ ನೀಡಿದೆ ಎಂದು ಹೇಳಿದ್ದಾರೆ.

ನಾನು ಸೇರಿದಂತೆ ಎಲ್ಲಾ 140 ಕಾಂಗ್ರೆಸ್ ಶಾಸಕರು ನಾಯಕತ್ವ ಬದಲಾವಣೆ ಬಯಸುತ್ತಾರೆ. ಇದರಲ್ಲಿ ಯಾವುದೇ ಗುಂಪು ರಾಜಕೀಯ ಅಥವಾ ವೈಯಕ್ತಿಕ ಹಿತಾಸಕ್ತಿಗಳಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಶನಿವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಸ್ಥಾನ ಬದಲಾವಣೆ ಸಾಧ್ಯತೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಣ ವಿವಿಧ ತಂತ್ರಗಳನ್ನು ರೂಪಿಸುತ್ತಿದ್ದು, ಪ್ರತಿರೋಧಕ್ಕೆ ಸಿದ್ಧತೆ ನಡೆಸುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com