ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ತಿರುವು: HDK ಭೇಟಿಯಾದ ಡಾ.ಜಿ. ಪರಮೇಶ್ವರ್; ಹೆಚ್ಚಿದ ಕುತೂಹಲ

ಶನಿವಾರ ಖಾಸಗಿ ಹೋಟೆಲ್ ನಲ್ಲಿ ಕುಮಾರಸ್ವಾಮಿಯವರುನ್ನು ಪರಮೇಶ್ವರ್ ಅವರು ಭೇಟಿ ಮಾಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
Parameshwar and H.D. Kumaraswamy (File photo)
ಪರಮೇಶ್ವರ್ ಹಾಗೂ ಹೆಚ್.ಡಿ.ಕುಮಾರಸ್ವಾಮಿ (ಸಂಗ್ರಹ ಚಿತ್ರ)
Updated on

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವ ವಿಚಾರ ಕುರಿತ ಚರ್ಚೆಗಳು ತೀವ್ರಗೊಳ್ಳುತ್ತಿರುವ ನಡುವೆಯೇ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದು, ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಶನಿವಾರ ಖಾಸಗಿ ಹೋಟೆಲ್ ನಲ್ಲಿ ಕುಮಾರಸ್ವಾಮಿಯವರುನ್ನು ಪರಮೇಶ್ವರ್ ಅವರು ಭೇಟಿ ಮಾಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಇದೇ ವೇಳೆ ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೂಡ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಭೇಟಿಗಳು ನಡೆದ ಸಮಯದಲ್ಲಿ, ಸಚಿವ ಸತೀಶ್ ಜಾರಕಿಹೊಳಿ ಮತ್ತು ಮಾಜಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಇದು ರಾಜಕೀಯ ವಲಯದಲ್ಲಿ ಚರ್ಚೆಗಳು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

Parameshwar and H.D. Kumaraswamy (File photo)
ರಾಜ್ಯ ಬಜೆಟ್ ಸಿದ್ಧತೆ ನಡುವಲ್ಲೇ ಸೈಲೆಂಟಾಗಿದ್ದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನಲೆಗೆ..!

ದಲಿತ ಮುಖ್ಯಮಂತ್ರಿ ವಿಚಾರ ಮತ್ತೆ ಮುನ್ನೆಲೆಗೆ

ಮಾಜಿ ಸಚಿವ ಕೆಎನ್. ರಾಜಣ್ಣ ಅವರು, “ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ತ್ಯಜಿಸುವುದು ಅನಿವಾರ್ಯವಾದರೆ, ದಲಿತ ಸಮುದಾಯದ ನಾಯಕನಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಆ ಸ್ಥಾನಕ್ಕೆ ಡಾ.ಜಿ. ಪರಮೇಶ್ವರ್ ಅವರನ್ನು ಪರಿಗಣಿಸಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಇದಕ್ಕೆ ಮತ್ತೊಂದು ಆಯಾಮವಾಗಿ, ಮಡಿಕೇರಿಯಲ್ಲಿ ಮಾತನಾಡಿದ ಸಾಮಾಜಿಕ ನ್ಯಾಯ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರು, “ಸಿದ್ದರಾಮಯ್ಯ ಅವರು ಮುಂದುವರಿಯಬೇಕು, ಆದರೆಸ ನಂತರದ ಮುಖ್ಯಮಂತ್ರಿ ದಲಿತ ಸಮುದಾಯದವರಾಗಬೇಕು ಎಂದು ಹೇಳಿಕೆ ನೀಡಿದ್ದಾರೆ. ಮೂಲಗಳ ಪ್ರಕಾರ, ಮಹದೇವಪ್ಪ ಕೂಡ ಮುಖ್ಯಮಂತ್ರಿ ಸ್ಥಾನಕ್ಕಾಗಿ ಆಕಾಂಕ್ಷಿಯಾಗಿದ್ದಾರೆಂದು ತಿಳಿದುಬಂದಿದೆ.

ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬೆಂಬಲಿಗರು, ಪಕ್ಷದ ಹೈಕಮಾಂಡ್ ಶೀಘ್ರದಲ್ಲೇ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿ ಅಧಿಕಾರ ಹಸ್ತಾಂತರ ಕುರಿತು ತೀರ್ಮಾನ ಕೈಗೊಳ್ಳಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 6ರಿಂದ ಆರಂಭವಾಗುವ ಬಜೆಟ್ ಅಧಿವೇಶನಕ್ಕೂ ಮುನ್ನವೇ ಈ ಕುರಿತು ತೀರ್ಮಾನವಾಗಬಹುದು ಎಂಬ ಚರ್ಚೆಗಳು ಪಕ್ಷದೊಳಗೆ ನಡೆಯುತ್ತಿವೆ.

Parameshwar and H.D. Kumaraswamy (File photo)
CM ಕುರ್ಚಿ ಕದನ: ಬಾಯಿ ಮುಚ್ಚಿಕೊಂಡರಿ; ಬೆಂಬಲಿಗರಿಗೆ ಡಿಕೆ.ಶಿವಕುಮಾರ್ ಖಡಕ್ ಎಚ್ಚರಿಕೆ

ಡಿಕೆ.ಶಿವಕುಮಾರ್ ಸ್ಪಷ್ಟನೆ

ಈ ನಡುವೆ ಡಾ.ಜಿ. ಪರಮೇಶ್ವರ ಮತ್ತು ಹೆಚ್.ಡಿ ಕುಮಾರಸ್ವಾಮಿ ಭೇಟಿಯ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರು, ಇದು ರಾಜಕೀಯ ಉದ್ದೇಶದ ಭೇಟಿಯಲ್ಲ ಎಂದು ಹೇಳಿ ವಿವಾದಕ್ಕೆ ತೆರೆ ಹಾಕಲು ಪ್ರಯತ್ನಿಸಿದ್ದಾರೆ.

ಪರಾಮೇಶ್ವರ ಅವರು ತಮ್ಮ ಕ್ಷೇತ್ರ ಕೊರಟಗೆರೆ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿಯಾಗಿರಬಹುದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವ ಬದಲಾವಣೆ, ದಲಿತ ಮುಖ್ಯಮಂತ್ರಿ ವಿಚಾರ, ಹಾಗೂ ಹೈಕಮಾಂಡ್ ನಿರ್ಧಾರ ಕುರಿತ ಊಹಾಪೋಹಗಳ ನಡುವೆ ಈ ಭೇಟಿ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ.

ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಜೊತೆಗಿನ ಭೇಟಿಯು ತಂತ್ರಾತ್ಮಕ ರಾಜಕೀಯ ಸಂದೇಶವೋ ಅಥವಾ ಅಭಿವೃದ್ಧಿ ವಿಚಾರದ ಸಭೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com