ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ಅನಿವಾರ್ಯವಾದರೆ ಸಿದ್ದರಾಮಯ್ಯ ಬಣವು ದಲಿತ ನಾಯಕನನ್ನು ಸಿಎಂ ಹುದ್ದೆಗೆ ಅಭ್ಯರ್ಥಿಯನ್ನಾಗಿ ಬಿಂಬಿಸಲು ಪ್ರಯತ್ನಿಸುತ್ತಿದೆ.
Siddaramaiah- DK Shivakumar
ಸಿದ್ದರಾಮಯ್ಯ-ಡಿಕೆ ಶಿವಕುಮಾರ್ online desk
Updated on

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕ್ಲೈಮಾಕ್ಸ್ ಹಂತಕ್ಕೆ ತಲುಪುವ ಸಾಧ್ಯತೆ ದಟ್ಟವಾಗಿ ಕಾಣಿಸುತ್ತಿದೆ. ದೆಹಲಿ ಮಟ್ಟದಲ್ಲೇ ನಾನಾ ಕಸರತ್ತುಗಳು ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣ ಸಕ್ರಿಯಗೊಂಡಿದೆ.

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ಅನಿವಾರ್ಯವಾದರೆ ಸಿದ್ದರಾಮಯ್ಯ ಬಣವು ದಲಿತ ನಾಯಕನನ್ನು ಸಿಎಂ ಹುದ್ದೆಗೆ ಅಭ್ಯರ್ಥಿಯನ್ನಾಗಿ ಬಿಂಬಿಸಲು ಪ್ರಯತ್ನಿಸುತ್ತಿದೆ, ಹೀಗಾಗಿ ಡಿಕೆ ಶಿವಕುಮಾರ್ ಬಣವು ಬಜೆಟ್ ಅಧಿವೇಶನಕ್ಕೂ ಮುನ್ನ ಅಧಿಕಾರ ಹಸ್ತಾಂತರ ವಿಷಯವನ್ನು ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯಿದೆ.

ಜನಪ್ರಿಯತೆಯ ದೃಷ್ಟಿಯಿಂದ ಸಿದ್ದರಾಮಯ್ಯ ನಂತರ ಎರಡನೇ ನಾಯಕನಾಗಿ ಶಿವಕುಮಾರ್ ಅವರನ್ನು ಬಿಂಬಿಸಲು ಡಿಕೆಶಿ ಬೆಂಬಲಿಗರು ಯೋಜಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್‌ನಲ್ಲಿ 18 ಸೆಕೆಂಡುಗಳ ವೀಡಿಯೊವನ್ನು ಪೋಸ್ಟ್ ಮಾಡಿತ್ತು.

ಇದರಲ್ಲಿ ಶಿವಕುಮಾರ್ ಅವರನ್ನು 'ಮನ ಗೆದ್ದ ಜನನಾಯಕ' (ಹೃದಯಗಳನ್ನು ಗೆದ್ದ ಜನಪ್ರಿಯ ನಾಯಕ) ಎಂದು ಚಿತ್ರಿಸಲಾಗಿದೆ. ಕಾಮಿಕ್ ವೀಡಿಯೊವೊಂದರಲ್ಲಿ ವೈದ್ಯರು ಡಿಕೆ ಶಿವಕುಮಾರ್ ಅವರನ್ನು ಹುಡುಕಲು ಜನರ ಹೃದಯಗಳನ್ನು ಪರಿಶೀಲಿಸುವ ವಿಡಿಯೋ ಇತ್ತು.

Siddaramaiah- DK Shivakumar
ಎರಡು ಸಲ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ; ನನ್ನ ಸಾಮರ್ಥ್ಯವನ್ನ ಯಾರೂ ಪ್ರಶ್ನೆ ಮಾಡುವಂತಿಲ್ಲ: ವಿರೋಧಿಗಳಿಗೆ ಪರಮೇಶ್ವರ್ ತಿರುಗೇಟು

ಏತನ್ಮಧ್ಯೆ, ಸಿಎಂ ಹುದ್ದೆಗೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸೇರಿದಂತೆ ಹಲವರ ಹೆಸರುಗಳನ್ನು ತೇಲಿ ಬಿಡಲಾಗಿದೆ. ಮದ್ದೂರು ಶಾಸಕ ಕಡಲೂರು ಉದಯ್ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅನ್ನು ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿದರು. ಆದರೆ ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಹೈಕಮಾಂಡ್ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಮಾಜಿ ಸಹಕಾರ ಸಚಿವ ರಾಜಣ್ಣ, ಹೈಕಮಾಂಡ್ ಮೊದಲು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಹೇಳಿದರು. "ಸಿದ್ದರಾಮಯ್ಯ ಮುಂದುವರಿಯಬೇಕೆಂದು ನಾನು ಬಯಸುತ್ತೇನೆ. ಆದರೆ ಬದಲಾವಣೆಯಾದರೆ, ದಲಿತರೊಬ್ಬರು ಮುಖ್ಯಮಂತ್ರಿಯಾಗಬೇಕು ಎಂದಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಿ ಬಂದರೆ ನಾವು ಸಂತೋಷಪಡುತ್ತೇವೆ, ಇಲ್ಲದಿದ್ದರೆ ಪರಮೇಶ್ವರ ಅವರಿಗೆ ಹುದ್ದೆ ನೀಡಬೇಕು ಎಂದು ರಾಜಣ್ಣ ಪರಮೇಶ್ವರ್ ಅವರನ್ನು ಸಮರ್ಥಿಸಿಕೊಂಡರು. ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿ ಪರಮೇಶ್ವರ್ ಇದರಲ್ಲಿ ಏನಾದರೂ ತಪ್ಪಿದೆಯೇ? ತಪ್ಪಿದ್ದರೆ, ತಿಳಿದುಕೊಳ್ಳೋಣ, ಈ ವಿಷಯದ ಬಗ್ಗೆ ಸಾರ್ವಜನಿಕ ಚರ್ಚೆ ಬೇಡ ಎಂದು ಅವರು ಹೇಳಿದರು.

ಎರಡು ಸಲ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದೇನೆ. ಉಪಮುಖ್ಯಮಂತ್ರಿ ಆಗಿದ್ದೇನೆ. ಸಾಮರ್ಥ್ಯ ಇಲ್ಲದೇ ಡಿಸಿಎಂ ಮಾಡ್ತಾರಾ? ಸಾಮರ್ಥ್ಯದ ಬಗ್ಗೆ ನನ್ನ ವಿಷಯದಲ್ಲಿ ಯಾರು ಪ್ರಶ್ನೆ ಮಾಡುವಂತಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಮ್ಮ ತಾಕತ್ತು ಪ್ರದರ್ಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com