

ಬಳ್ಳಾರಿ: ಬಳ್ಳಾರಿಯಲ್ಲಿ ಫೈರಿಂಗ್ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ನಡುವೆ ಆರೋಪ, ಪ್ರತ್ಯಾರೋಪ ಮುಂದುವರೆದಿದೆ.
ಇಂದು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು, ಗಾಂಜಾ ಪೆಡ್ಲರ್ ಜೊತೆಗೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಈ ವೇಳೆ ಗಾಂಜಾ ಪೆಡ್ಲರ್ ಜೊತೆ ಭರತ್ ರೆಡ್ಡಿ ಇರುವ ವಿಡಿಯೋ ಪ್ರದರ್ಶಿಸಿದ ಜನಾರ್ದನ ರೆಡ್ಡಿ, ಭರತ್ ರೆಡ್ಡಿ ಗಾಂಜಾ ಪೆಡ್ಲರ್ ದೌಲಾ ಎಂಬಾತನ ಜೊತೆ ಇದ್ದ ಎಂದು ಆರೋಪಿಸಿದರು.
ವಿಡಿಯೋದಲ್ಲಿ, ಶಾಸಕ ನಾರಾ ಭರತ್ ರೆಡ್ಡಿ ಗಾಂಜಾ ಪೆಡ್ಲರ್ ದೌಲಾ ಜೊತೆಗೆ ಕಾಲ ಮೇಲೆ ಕಾಲು ಹಾಕಿಕೊಂಡು ಕುಳಿತಿರುವ ದೃಶ್ಯಗಳು ಇವೆ. ಇದನ್ನು ಆಧಾರವಾಗಿಟ್ಟುಕೊಂಡು ಜನಾರ್ದನ ರೆಡ್ಡಿ ಕಾಂಗ್ರೆಸ್ ಶಾಸಕನ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ದೌಲಾ ಮೇಲೆ 50 ಕೆಜಿ ಗಾಂಜಾ ಪೆಡ್ಲಿಂಗ್ ಸೇರಿದಂತೆ 18 ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ.
ಬಳ್ಳಾರಿ ಫೈರಿಂಗ್ ವಿಚಾರದಲ್ಲಿ ಮೃತ ಕಾಂಗ್ರೆಸ್ ಕಾರ್ಯಕರ್ತರನಿಗೆ ನ್ಯಾಯ ಸಿಗಬೇಕಾದರೆ ತಪ್ಪಿತಸ್ಥರಾದ ಸತೀಶ್ ರೆಡ್ಡಿ ಮತ್ತು ಅವರ ಅಂಗರಕ್ಷಕರನ್ನು ತಕ್ಷಣ ಬಂಧಿಸಬೇಕು ಎಂದು ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಆಗ್ರಹಿಸಿದ್ದಾರೆ.
Advertisement