CM ಕುರ್ಚಿ ಉಳಿಸಿಕೊಳ್ಳಲು ಅಕ್ರಮ ವಲಸಿಗರಿಗೆ ಮನೆ ಕೊಟ್ಟ ಸಿದ್ದರಾಮಯ್ಯ: ಬಿ.ವೈ ವಿಜಯೇಂದ್ರ ಟೀಕೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಕುರ್ಚಿ ಕಸಿದುಕೊಳ್ಳಬೇಕೆಂಬ ಕಾರಣಕ್ಕಾಗಿ ಕೆ.ಸಿ.ವೇಣುಗೋಪಾಲ್ ಮೂಲಕ ಸಿಎಂಗೆ ಧಮ್ಕಿ ಹಾಕಿಸಿ ಅವರೂ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿದ್ದಾರೆ.
vijayendra
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Updated on

ಬೆಂಗಳೂರು: ಅಕ್ರಮ ವಲಸಿಗರಿಗೆ ಮನೆಗಳನ್ನು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಚು ರೂಪಿಸುತ್ತಿದ್ದು, ಇದು ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಆಂತರಿಕ ಪೈಪೋಟಿಯ ಭಾಗ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೋಮವಾರ ಆರೋಪಿಸಿದ್ದಾರೆ.

ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ" ಎನ್ನುವ ಘೋಷವಾಕ್ಯದೊಂದಿಗೆ ಇಂದು ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ಬೃಹತ್ ಪ್ರತಿಭಟನೆಯಲ್ಲಿ ವಿಜಯೇಂದ್ರ ಅವರು ಮಾತನಾಡಿದರು.

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಕುರ್ಚಿ ಕಸಿದುಕೊಳ್ಳಬೇಕೆಂಬ ಕಾರಣಕ್ಕಾಗಿ ಕೆ.ಸಿ.ವೇಣುಗೋಪಾಲ್ ಮೂಲಕ ಸಿಎಂಗೆ ಧಮ್ಕಿ ಹಾಕಿಸಿ ಅವರೂ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿದ್ದಾರೆಂದು ಆರೋಪಿಸಿದರು.

ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ಇಂಥ ಗೊಡ್ಡು ಬೆದರಿಕೆಗೆ ಹೆದರುವವರು ಬಿಜೆಪಿ ಕಾರ್ಯಕರ್ತರಲ್ಲ. ಇದನ್ನು ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಅರ್ಥ ಮಾಡಿಕೊಳ್ಳಲಿ. ಕೆ.ಸಿ.ವೇಣುಗೋಪಾಲ್ ಕರ್ನಾಟಕದ ಮುಖ್ಯಮಂತ್ರಿಯೇ? ಅಥವಾ ಸಿದ್ದರಾಮಯ್ಯ ಮುಖ್ಯಮಂತ್ರಿಯೇ ಎಂದು ಕರ್ನಾಟಕದ ಜನರು ಪ್ರಶ್ನಿಸುತ್ತಿದ್ದಾರೆ. ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ರಾಜ್ಯದಲ್ಲಿ 38 ಲಕ್ಷ ಜನರು ಮನೆಗಾಗಿ ಅರ್ಜಿ ಹಾಕಿದ್ದಾರೆ. ಡಾ. ಅಂಬೇಡ್ಕರ್ ಅವರ ಹೆಸರು ಹೇಳುವ ಮುಖ್ಯಮಂತ್ರಿಗಳು ಕಳೆದ ಎರಡೂವರೆ ವರ್ಷದಲ್ಲಿ ಕಾಂಗ್ರೆಸ್ ಸರಕಾರವು ಒಂದೇ ಒಂದು ಮನೆ ಕೊಟ್ಟಿಲ್ಲ ಎಂದು ಆರೋಪಿಸಿದರು.

vijayendra
ಕೋಗಿಲು ಒತ್ತುವರಿ ತೆರವು: ಸೂರು ಕಳೆದುಕೊಂಡವರಿಗೆ ಮನೆ ನೀಡುವುದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ

ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟದ್ದು ಅಕ್ಷಮ್ಯ ಅಪರಾಧ. ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ಇದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದರು. ಕೋಗಿಲು ಅಕ್ರಮವಾಸಿಗಳಿಗೆ ಅಯೋಗ್ಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ನಲ್ಲಿ ನೀರಿನ ಸಂಪರ್ಕ, ವಿದ್ಯುತ್ ಸಂಪರ್ಕ ನೀಡಿದ್ದಾರೆ. ತಿಂಗಳಿಗೆ 2-3 ಲಕ್ಷ ಲಂಚ ವಸೂಲಿ ಮಾಡುತ್ತಿದ್ದರು ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಲಂಚ ಪಡೆದು ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com