ಇದು ದಾಖಲೆಯಲ್ಲ. ಜನರ ಸೇವೆ ಮಾಡಲು ಸಿಕ್ಕ ಅವಕಾಶ; ಸುದೀರ್ಘ ಜನಸೇವೆಯ ಸಾರ್ಥಕ ಕ್ಷಣ

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಇದು ದಾಖಲೆಯಲ್ಲ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ. ಜನಸೇವೆಯ ಸಾರ್ಥಕ ಕ್ಷಣ ಎಂದು ತಿಳಿದುಕೊಂಡಿದ್ದೇನೆ ಎಂದಿದ್ದಾರೆ.
This is not a record, It is a privilege, an opportunity given by the people to serve them: CM Siddaramaiah
ಸಿದ್ದರಾಮಯ್ಯ
Updated on

ಬೆಂಗಳೂರು: ಸುದೀರ್ಘ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸರಿಗಟ್ಟಲಿದ್ದು, ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಇದು ದಾಖಲೆಯಲ್ಲ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ. ಜನಸೇವೆಯ ಸಾರ್ಥಕ ಕ್ಷಣ ಎಂದು ತಿಳಿದುಕೊಂಡಿದ್ದೇನೆ ಎಂದಿದ್ದಾರೆ.

ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡಾ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಎಂದು ಸಿಎಂ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನನ್ನ ರಾಜಕೀಯ ಜೀವನಕ್ಕೆ ಹಲವು ಹಿರಿಯರ ಚಿಂತನೆ ಮತ್ತು ಸಾಧನೆಗಳು ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿವೆ. ಆ ಹಿರಿಯರ ಸಾಲಿನಲ್ಲಿ ದೇವರಾಜ ಅರಸು ಪ್ರಮುಖರು. ನಮ್ಮಿಬ್ಬರ ನಡುವಿನ ಸೈದ್ಧಾಂತಿಕ ಸಹಮತ ಮತ್ತು ನಾನು ಕೂಡಾ ಅವರಂತೆ ಮೈಸೂರಿನ ಮಣ್ಣಿನ ಮಗ ಎನ್ನುವ ಕಾರಣಕ್ಕೆ ನನ್ನ ಹೃದಯದಲ್ಲಿ ಅವರಿಗೆ ವಿಶೇಷವಾದ ಸ್ಥಾನ ಇದೆ.

ಸಾಮಾಜಿಕ ನ್ಯಾಯದ ಬಂಡಿಯ ಪಯಣಕ್ಕೆ ಕರ್ನಾಟಕದಲ್ಲಿ ದೀರ್ಘ ಪರಂಪರೆ ಇದೆ. ಬಸವಣ್ಣನವರಿಂದ ಪ್ರಾರಂಭಗೊಂಡು ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಡಿ.ದೇವರಾಜ ಅರಸು ವರೆಗೆ ಹಲವಾರು ಮಹನೀಯರು ಈ ಬಂಡಿಯನ್ನು ಎಳೆದುಕೊಂಡು ಬಂದಿದ್ದಾರೆ. ಇದನ್ನು ಇನ್ನಷ್ಟು ಮುಂದಕ್ಕೆ ಎಳೆದುಕೊಂಡು ಹೋಗುವ ಅವಕಾಶ ನನಗೆ ಸಿಕ್ಕಿದೆ. ಈ ಅವಕಾಶವನ್ನು ಬದಲಾಗಿರುವ ಸಾಮಾಜಿಕ ಮತ್ತು ರಾಜಕೀಯದ ಸ್ಥಿತ್ಯಂತರಗಳ ಇತಿ-ಮಿತಿಯಲ್ಲಿ ಜವಾಬ್ದಾರಿಯಾಗಿ ನಾನು ಸ್ವೀಕರಿಸಿ, ಮುನ್ನಡೆಯುತ್ತಿದ್ದೇನೆ.

This is not a record, It is a privilege, an opportunity given by the people to serve them: CM Siddaramaiah
ಹಿಂದುಳಿದ ಸಮುದಾಯಗಳ ಹರಿಕಾರ; ಅರಸು ದಾಖಲೆ ಮುರಿದ ವೀರ; ಕಾಂಗ್ರೆಸ್ ಗೆ ಸಮಾಜವಾದಿ ಸ್ಪರ್ಶ ಕೊಟ್ಟ ಸಿದ್ದರಾಮಯ್ಯ!

ಅಧಿಕಾರ, ಸಂಪತ್ತು ಮತ್ತು ಅವಕಾಶಗಳ ಹೆಬ್ಬಾಗಿಲನ್ನು ಸರ್ವರಿಗೂ ತೆರೆದು ಸಮಾನವಾಗಿ ಹಂಚಿಕೆ ಮಾಡದ ಹೊರತು ಸುಸ್ಥಿರವಾದ ಅಭಿವೃದ್ದಿಯನ್ನು ಕಾಣಲು ಸಾಧ್ಯ ಇಲ್ಲ ಎನ್ನುವುದು ಅರಸರ ಅಚಲ ನಂಬಿಕೆಯಾಗಿತ್ತು. ಇದಕ್ಕಾಗಿಯೇ ಅವಕಾಶ ವಂಚಿತ ಸಮುದಾಯಗಳಿಗೆ ಸೇರಿರುವ ನಾಯಕರನ್ನು ಗುರುತಿಸಿ ರಾಜಕೀಯವಾಗಿ ಬೆಳೆಸಿದರು. ಭೂಸುಧಾರಣೆಯ ಮೂಲಕ ಸಂಪತ್ತಿನ ಸಮಾನ‌ ಹಂಚಿಕೆಯ ಪ್ರಕ್ರಿಯೆ ಪ್ರಾರಂಭಿಸಿದರು. ಮೀಸಲಾತಿಯ ಮೂಲಕ ವಂಚಿತ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಕೂಡಾ ಹೆಚ್ಚಿನ ಪ್ರಾತಿನಿಧ್ಯ ಸಿಗುವಂತೆ ಮಾಡಿದರು. ಜನಪ್ರತಿನಿಧಿಗಳೆಲ್ಲರಿಗೂ ಈ ಸಾಧನೆ ಪ್ರೇರಣೆಯಾಗಬೇಕು.

ಇಂದಿನ ದಿನದ ವಿಶೇಷ ಸಂದರ್ಭದಲ್ಲಿ ನಮಗೆಲ್ಲ ಪ್ರೇರಣಾದಾಯಿಗಳು ಮತ್ತು ಪೂಜನೀಯರೂ ಆಗಿರುವ ಡಿ.ದೇವರಾಜ ಅರಸು ಅವರಿಗೆ ನಾನು ಗೌರವದ ನಮನಗಳನ್ನು ಸಲ್ಲಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com