2028 ರಾಜ್ಯ ವಿಧಾನಸಭಾ ಚುನಾವಣೆ: 150 ಕ್ಷೇತ್ರಗಳಲ್ಲಿ NDA ಗೆಲುವು ಎಂದ ನಿಖಿಲ್ ಕುಮಾರಸ್ವಾಮಿ; ಕ್ಯಾಂಪಸ್ ಚುನಾವಣೆ ಚಿಂತನೆಗೆ ಬೆಂಬಲ

ನಾನು ರಾಜಕಾರಣ ಮಾಡೋದಕ್ಕೆ ಬಂದಿರೋದು. ವಿಧಾನಸೌಧಕ್ಕೆ ಹೋಗೋದಕ್ಕೆ ನಾನು ರಾಜಕಾರಣಕ್ಕೆ ಬಂದಿದ್ದೇನೆ ಎಂಬುದನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ.
Nikhil Kumaraswamy
ನಿಖಿಲ್ ಕುಮಾರಸ್ವಾಮಿ
Updated on

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ‘ಮಾಧ್ಯಮ ಸಂವಾದ’ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಜೆಡಿಎಸ್ ವಿಲೀನವಾದರೆ ಒಳ್ಳೆಯದು’ ಎಂದು ಹೇಳಿದ್ದ ಡಿಸಿಎಂ ಹೇಳಿಕೆಗೆ ತಿರುಗೇಟು ನೀಡಿದರು.

ನಮ್ಮ ಪಕ್ಷದ ಕಥೆ ಇರಲಿ. ಬಿಹಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿಗೆ ಬಂದು ನಿಂತಿದೆ? ಎಷ್ಟು ಡಿಜಿಟ್'ಗೆ ನಿಂತಿದೆ. ಬಿಹಾರ ಅಷ್ಟೇ ಅಲ್ಲ, ಇನ್ನೂ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗಳಿಸಿದೆ? ಮತ ಗಳಿಕೆಯಷ್ಟು? ಅಲ್ಲಿ ಡಿಕೆಶಿ ತಮ್ಮ ಪಕ್ಷವನ್ನು ಯಾವ ಪಕ್ಷದಲ್ಲಿ ವಿಲೀನ ಮಾಡಿದ್ದಾರೆ ಎನ್ನುವುದನ್ನು ಹೇಳಲಿ ಎಂದು ಸವಾಲು ಹಾಕಿದರು.

Nikhil Kumaraswamy
2028 ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು ನೀಡಿದ ಸೋಮಣ್ಣ..!

ಕರ್ನಾಟಕದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ JDS 19 ಸ್ಥಾನಗಳನ್ನು ಗೆದ್ದಿದೆ. ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್ ಶೇ.37ರಷ್ಟು ಮತಪಾಲು ಹೊಂದಿದೆ. ಕಲ್ಯಾಣ ಕರ್ನಾಟಕದಲ್ಲಿಯೂ ಬಲಿಷ್ಟವಾಗಿದೆ. ಕಿತ್ತೂರು ಕರ್ನಾಟಕ, ಕರಾವಳಿ ಭಾಗದಲ್ಲಿಯೂ ನಮ್ಮ ಪಕ್ಷವಿದೆ. ರಾಜ್ಯದಲ್ಲಿ ಜೆಡಿಎಸ್, ಬಿಜೆಪಿ ನಡುವೆ ಸಹಜ ಮೈತ್ರಿ ಏರ್ಪಟ್ಟಿದೆ. ಲೋಕಸಭೆ ಚುನಾವಣೆಯಲ್ಲಿ ನಮ್ಮ ಒಗ್ಗಟ್ಟಿನ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿಯ ಬಲ ತಿಳಿಯಲಿದೆ. ನಮ್ಮ ಹಾಗೂ ಬಿಜೆಪಿಯ ಮೈತ್ರಿ ಸ್ವಾಭಾವಿಕ. ಕಾರ್ಯಕರ್ತರ ಪ್ರೀತಿ ವಿಶ್ವಾಸದಿಂದ ಆಗಿರುವ ಮೈತ್ರಿ ಇದು ಎಂದು ಹೇಳಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿ, ನಾನು ರಾಜಕಾರಣ ಮಾಡೋದಕ್ಕೆ ಬಂದಿರೋದು. ವಿಧಾನಸೌಧಕ್ಕೆ ಹೋಗೋದಕ್ಕೆ ನಾನು ರಾಜಕಾರಣಕ್ಕೆ ಬಂದಿದ್ದೇನೆ ಎಂಬುದನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ ಎಂದು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದರು.

Nikhil Kumaraswamy
JDS ಜೊತೆಗಿನ ಚುನಾವಣಾ ಮೈತ್ರಿ ತೀರ್ಮಾನ ಹೈಕಮಾಂಡ್‌'ಗೆ ಬಿಟ್ಟದ್ದು: ಬಿ.ವೈ ವಿಜಯೇಂದ್ರ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ಪಕ್ಷದ ಕಾರ್ಯಕರ್ತರನ್ನು ತಳಮಟ್ಟದಲ್ಲಿ ಬಲಪಡಿಸಲು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಎಲ್ಲಾ ಪಕ್ಷಗಳು ತಮ್ಮದೇ ಆದ ವೈಯಕ್ತಿಕ ಮತ್ತು ಸ್ವಂತ ಬಲವನ್ನು ಹೊಂದಿರಬೇಕು. ರಾಷ್ಟ್ರೀಯ ಮತ್ತು ಸ್ಥಳೀಯ ರಾಜಕೀಯದ ನಡುವೆ ವ್ಯತ್ಯಾಸವಿದೆ. ಮೈತ್ರಿಕೂಟದ ಬಗ್ಗೆ ಅಂತಿಮ ನಿರ್ಧಾರವನ್ನು ರಾಷ್ಟ್ರೀಯ ನಾಯಕರು ತೆಗೆದುಕೊಳ್ಳುತ್ತಾರೆಂದು ತಿಳಿಸಿದರು.

ಹಾಸನದಲ್ಲಿ ನಡೆಯಲಿರುವ ಪಕ್ಷದ ಸಮಾವೇಶಕ್ಕೆ ಜೆಡಿಎಸ್ ಹಿರಿಯ ನಾಯಕ ಮತ್ತು ಶಾಸಕ ಜಿ.ಟಿ. ದೇವೇಗೌಡ ಅವರನ್ನು ಆಹ್ವಾನಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಪಕ್ಷದ ಹಿರಿಯ ನಾಯಕತ್ವವು ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಕ್ಯಾಂಪಸ್ ಚುನಾವಣೆಗೆ ಬೆಂಬಲ

ಇದೇ ವೇಳೆ ರಾಜ್ಯದ ಕಾಲೇಜುಗಳಲ್ಲಿ ಮತ್ತೆ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಆರಂಭಿಸಲು ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಬೆಂಬಲ ವ್ಯಕ್ತಪಡಿಸಿದರು.

ಇತ್ತೀಚಿನ ದಿನಗಳಲ್ಲಿ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ಯುವಕರಿಗೆ ಸೂಕ್ತ ಅವಕಾಶಗಳು ಸಿಗುತ್ತಿಲ್ಲ. ಹಿಂದೆ ಕಾಲೇಜು ಚುನಾವಣೆಗಳು ಜಾರಿಯಲ್ಲಿದ್ದಾಗ, ಸಮಾಜದ ಬಗ್ಗೆ ಕಳಕಳಿಯಿರುವ ಯುವಕರು ನಾಯಕರಾಗಿ ಹೊರಹೊಮ್ಮಲು ಸಾಧ್ಯವಾಗುತ್ತಿತ್ತು. ಅದೇ ವಾತಾವರಣ ಮತ್ತೆ ನಿರ್ಮಾಣವಾಗಬೇಕು ಎಂದು ಹೇಳಿದರು.

ರಾಜಕೀಯ ಹಿನ್ನೆಲೆ ಇಲ್ಲದ ಸಾಮಾನ್ಯ ಕುಟುಂಬದ ಯುವಕರಿಗೂ ರಾಜಕೀಯ ಪ್ರವೇಶಿಸಲು ಕಾಲೇಜು ಚುನಾವಣೆಗಳು ಉತ್ತಮ ತರಬೇತಿ ಕೇಂದ್ರಗಳಾಗಲಿವೆ. ಸಮಾಜದ ಬಗ್ಗೆ ಕಾಳಜಿ ಹೊಂದಿರುವ ಯುವ ಸಮೂಹವನ್ನು ಮುಖ್ಯವಾಹಿನಿಗೆ ತರಲು ಇದು ಸರಿಯಾದ ಸಮಯ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com