

ಬೆಂಗಳೂರು: ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅಧಿಕಾರಾವಧಿ 'ಗುತ್ತಿಗೆಗೆ' ನೀಡಲಾಗಿತ್ತು, ಈಗ ಪೂರ್ಣಾವಧಿಗೆ ವಿಸ್ತರಣೆಗಾಗಿ ಮುಖ್ಯಮಂತ್ರಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಚೌಕಾಸಿ ಮಾಡುತ್ತಿದ್ದಾರೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಕರ್ನಾಟಕದ ಅತಿ ದೀರ್ಘ ಕಾಲ ಮುಖ್ಯಮಂತ್ರಿಯಾಗಿದ್ದ ಡಿ ದೇವರಾಜ ಅರಸು ಅವರ ದಾಖಲೆಯನ್ನು ಮುರಿದು ಸಂಭ್ರಮಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಅಧಿಕಾರ ಗುತ್ತಿಗೆಗೆ ನೀಡಲಾಗಿದೆ. ದೇವರಾಜ ಅರಸು ಅವರು ಆಡಳಿತದಲ್ಲಿ ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರಿಗೇ ಸವಾಲು ಹಾಕಿದ್ದರು. ಆದರೆ ಸಿದ್ದರಾಮಯ್ಯ ಅವರು ಇಂದು ಹೈಕಮಾಂಡ್ ಮುಂದೆ ತಮ್ಮ ಪೂರ್ಣ ಅಧಿಕಾರ ಅವಧಿ ಮುಗಿಸಲು ಚೌಕಾಸಿ ಮಾಡುತ್ತಿದ್ದಾರೆ ಎಂದು ಹೇಳಿದರು.
ಹಿಂದೂಸ್ತಾನ್ ಮೆಷಿನ್ ಟೂಲ್ಸ್ (HMT) ಮುಚ್ಚುವ ಸುದ್ದಿ ಬಗ್ಗೆ ಕೇಳಿದಾಗ, ಕುಮಾರಸ್ವಾಮಿ, ಅದನ್ನು ಮುಚ್ಚಿಲ್ಲ, ಗಡಿಯಾರಗಳ ಉತ್ಪಾದನೆ ಇನ್ನೂ ನಡೆಯುತ್ತಿದೆ, ಅದು ಸಣ್ಣ ಪ್ರಮಾಣದಲ್ಲಿ ಮಾತ್ರ. ಹೆಚ್ ಎಂಟಿಯ ಹೂಡಿಕೆ ಹಿಂತೆಗೆತವನ್ನು 2016 ರ ಹಿಂದೆಯೇ ಘೋಷಿಸಲಾಗಿತ್ತು. ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಹೆಚ್ ಎಂಟಿಯನ್ನು ಪುನರುಜ್ಜೀವನಗೊಳಿಸುವ ಸಾಧ್ಯತೆಯ ಬಗ್ಗೆ ನಾನು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚಿಸುತ್ತಿದ್ದೇನೆ ಎಂದರು.
Advertisement