

ಬೆಂಗಳೂರು: ಎಸ್ ಐಆರ್ ಪ್ರಕ್ರಿಯೆ ವಿಚಾರದಲ್ಲಿ ಬಿಜೆಪಿ- ಜೆಡಿಎಸ್ ನವರು ದೂರು ಕೊಟ್ಟಿದ್ದಾರೆ. ತನಿಖೆಯಾಗಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವರು, ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ. ಈಗಾಗಲೇ ದೂರು ಕೊಟ್ಟದ್ದಾರೆ ತನಿಖೆ ಆಗಲಿ. ನಮ್ಮ ದೃಷ್ಟಿಯಲ್ಲಿ ಎಲ್ಲರನ್ನೂ ಸೇರಿಸುತ್ತಿದ್ದೇವೆ. ಎಲ್ಲರನ್ನೂ ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದೇವೆ. ಎಲ್ಲರೂ ಮತದಾರರ ಪಟ್ಟಿಯಲ್ಲಿ ಇರಬೇಕು ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಹೊಸ ಬದಲಾವಣೆ ಆಗಬೇಕು. ಬಹಳಷ್ಟು ಬದಲಾವಣೆ ಬಗ್ಗೆ ಅಧ್ಯಕ್ಷರು ಸಾಕಷ್ಟು ಚಿಂತನೆ ಮಾಡುತ್ತಿದ್ದಾರೆ ಹೊಸಬರಿಗೆ ಅವಕಾಶ ಕೊಡಬೇಕು ಏನು ಚರ್ಚೆ ಆಗುತ್ತಿದೆ ನೋಡೋಣ ಎಂದು ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಸಭೆ ಬಗ್ಗೆ ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಳಿ ಪ್ರಸ್ತುತ ಸುಮಾರು 20 ಸಚಿವ ಸ್ಥಾನಗಳು ಖಾಲಿ ಇರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ನಡೆಯುವ ನಿರೀಕ್ಷೆಯಿದ್ದು, ಇದಕ್ಕೆ ಸತೀಶ್ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಸಂಪುಟ ವಿಸ್ತರಣೆ ವಿಷಯ ನಮ್ಮ ಕೈಯಲ್ಲಿಲ್ಲ ಹೈಕಮಾಂಡ್ ತೀರ್ಮಾನ ಎಂದರು.
ಮುಂಬರುವ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಖಾಲಿ ಇರುವ ಸುಮಾರು 20 ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಸಚಿವ ಸಂಪುಟವನ್ನು ಶೀಘ್ರ ವಿಸ್ತರಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಕರ್ನಾಟಕದಲ್ಲಿ ಸಚಿವ ಸಂಪುಟದ ಗರಿಷ್ಠ ಸದಸ್ಯರ ಸಂಖ್ಯೆ 34ರವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ.