ವಿಜಯೇಂದ್ರ 'Baby ಯಡಿಯೂರಪ್ಪ' ಆದ್ರೆ, ರಾಹುಲ್ 'Baby ಗಾಂಧಿ': ಹರಿಪ್ರಸಾದ್‌ಗೆ ಪ್ರಹ್ಲಾದ್ ಜೋಶಿ ತಿರುಗೇಟು

ರಾಹುಲ್ ಗಾಂಧಿ ಕಳೆದ 40 ದಿನಗಳಿಂದ ನಾಪತ್ತೆಯಾಗಿದ್ದಾರೆ" ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ. ಕಾಂಗ್ರೆಸ್ ನಾಯಕರು ಇನ್ನೂ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆಯೇ ಚರ್ಚೆಯಲ್ಲಿ ತೊಡಗಿದ್ದಾರೆ.
Rahul ganghi
ರಾಹುಲ್ ಗಾಂಧಿ
Updated on

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ‘ಬೇಬಿ ಯಡಿಯೂರಪ್ಪ’ ಎಂದು ಲೇವಡಿ ಮಾಡಿದ್ದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು ಬೇಬಿ ಯಡಿಯೂರಪ್ಪ ಆದಲ್ಲಿ, ರಾಹುಲ್ ಗಾಂಧಿ ಅವರು ಬೇಬಿ ಗಾಂಧಿ ಆಗುತ್ತಾರೆ" ಎಂದು ಲೇವಡಿ ಮಾಡಿದರು.

ರಾಹುಲ್ ಗಾಂಧಿ ಕಳೆದ 40 ದಿನಗಳಿಂದ ನಾಪತ್ತೆಯಾಗಿದ್ದಾರೆ" ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ. ಕಾಂಗ್ರೆಸ್ ನಾಯಕರು ಇನ್ನೂ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆಯೇ ಚರ್ಚೆಯಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಇನ್ನೂ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿಲ್ಲ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಸಮರ್ಪಕ ಮಳೆಯಾಗಿಲ್ಲ. ರೈತರು ಸಂಕಷ್ಟದಲ್ಲಿದ್ದಾರೆ. ಆದರೆ, ಪ್ರಕೃತಿ ವಿಕೋಪ ನಿರ್ವಹಣೆಯ ಹೊಣೆ ಹೊತ್ತಿರುವ ಸಚಿವರು ಇನ್ನೂ ಜಿಲ್ಲೆಗೆ ಬಂದಿಲ್ಲ. ಸರ್ಕಾರವೂ ಬರ ಪರಿಸ್ಥಿತಿ ಕುರಿತು ಸಮೀಕ್ಷೆ ನಡೆಸಿಲ್ಲ. ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ದೂರಿದರು.

Rahul ganghi
'ಚೆಕ್ ಮೂಲಕ ಲಂಚ ಪಡೆದು ಜೈಲಿಗೆ ಹೋದ ದೇಶದ‌ ಮೊದಲ ಸಿಎಂ ಪುತ್ರ ಕಾಂಗ್ರೆಸ್ ಗೆ ನೈತಿಕ ಪಾಠ ಮಾಡಲು ಹೊರಟಿದ್ದಾರೆ': ಬಿ.ಕೆ ಹರಿಪ್ರಸಾದ್

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಮಾತನಾಡಿ, ಈ ವಿಚಾರದಲ್ಲಿ ರಾಜ್ಯ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

ಬೂತ್ ಮಟ್ಟದ ಅಧಿಕಾರಿಗಳು (BLO) ಕಷ್ಟಕರ ಪರಿಸ್ಥಿತಿಯಲ್ಲೂ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರಗಳನ್ನು ನೀಡುವ ಕ್ರಮ ಕಾನೂನುಬಾಹಿರ. ಇದರ ಉದ್ದೇಶ ಅಕ್ರಮ ನುಸುಳುಕೋರರಿಗೆ ಮತದಾರರ ಗುರುತಿನ ಚೀಟಿ ಒದಗಿಸುವುದಾಗಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com