

ಹಾವೇರಿ: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಿದ್ದಂತೆ ಕಾಂಗ್ರೆಸ್ ನ ಒಂದು ಗುಂಪಿನಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ನಡುವೆ ಮನಸ್ತಾಪ ಉಂಟಾಗಿರುವ ಬಗ್ಗೆ ವರದಿಯಾಗಿತ್ತು. ಈ ಕುರಿತಂತೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ ಅವರು, ಹೌದು... ಸಿದ್ಧರಾಮಯ್ಯ ಜೊತೆ ನನಗೆ ಭಿನ್ನಾಭಿಪ್ರಾಯ ಇದೆ. ಆದರೆ ಇದು ರಾಜ್ಯದ ಸಮಸ್ಯೆಯಲ್ಲ, ನಮ್ಮ ನಮ್ಮ ಸಮಸ್ಯೆ ಎಂದು ಹೇಳಿದ್ದಾರೆ.