'ಮೊದಲ ಹಂತದ್ದು ಫೈಟಿಂಗ್ ಕೋಟಾ; ಈಗ ನಡೆಯುತ್ತಿರುವುದು ಪೇಮೆಂಟ್ ಕೋಟಾ; ಸಚಿವ ಸ್ಥಾನಕ್ಕೆ 150 ಕೋಟಿ ರೂ ಬೇಡಿಕೆ': ಅಶೋಕ್ ಆರೋಪ

ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸರ್ಕಸ್ ಸಂಬಂಧ ಲೇವಡಿ ಮಾಡಿದ್ದಾರೆ, ಒಂದು ಸಚಿವ ಸ್ಥಾನಕ್ಕೆ 100 ರಿಂದ 150 ಕೋಟಿ ರೂ. ಬೇಡಿಕೆ ಇಡಲಾಗಿದೆ ಎಂದು ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.
R Ashok
ಆರ್ ಅಶೋಕ್
Updated on

ಬೆಂಗಳೂರು: ಕಾಂಗ್ರೆಸ್‌ನಲ್ಲಿನ ಈ ಸಂಪುಟ ವಿಸ್ತರಣೆಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತೀವ್ರವಾಗಿ ಲೇವಡಿ ಮಾಡಿದ್ದಾರೆ. ಮೊದಲ ಹಂತದಲ್ಲಿ ಅಸಮಾಧಾನಗೊಂಡವರಿಗೆ ಫೈಟಿಂಗ್ ಕೋಟಾ ಅಡಿ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಈಗ ನಡೆಯುತ್ತಿರುವುದು ಪೇಮೆಂಟ್ ಕೋಟಾ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ, ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದರಾಮಯ್ಯ ಎಲ್ಲಿ ಹೋದರು? ಸಿದ್ದರಾಮಯ್ಯ ಬದಲಾಗ್ತಾರೆ ಅಂತಾ ನಾನು ಹೇಳಿದ್ದು ನಿಜ ಆಗಿದೆ. ಸಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸರ್ಕಸ್ ಸಂಬಂಧ ಲೇವಡಿ ಮಾಡಿದ್ದಾರೆ, ಒಂದು ಸಚಿವ ಸ್ಥಾನಕ್ಕೆ 100 ರಿಂದ 150 ಕೋಟಿ ರೂ. ಬೇಡಿಕೆ ಇಡಲಾಗಿದೆ ಎಂದು ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.

ಬಳ್ಳಾರಿಯಿಂದ ಭರತ್ ರೆಡ್ಡಿ ಯುವ ಕೋಟಾದಡಿ ಲಾಬಿ ನಡೆಸುತ್ತಿದ್ದರೆ, ನಾಗೇಂದ್ರ ಅವರು ಸಿದ್ದರಾಮಯ್ಯ ಮೂಲಕ ಹಾಗೂ ಜೆ.ಎನ್. ಗಣೇಶ್ ರೇಸ್‌ನಲ್ಲಿದ್ದಾರೆ. ಸಂಸದ ತುಕಾರಾಂ ತಮ್ಮ ಪತ್ನಿಗೆ ಸಚಿವ ಸ್ಥಾನ ಕೊಡಿಸಲು ಮುಂದಾಗಿದ್ದಾರೆ. ಇತ್ತ ಬೆಳಗಾವಿ ಭಾಗದಿಂದ ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ್ ಸವದಿ, ಅಶೋಕ ಪಟ್ಟಣ ಸೇರಿದಂತೆ ಆರು ಶಾಸಕರು ನೇರವಾಗಿ ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್‌ಗೆ ಸಂಪುಟ ವಿಸ್ತರಣೆ ‘ರಾಕೆಟ್ ಸೈನ್ಸ್’ ಆಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

R Ashok
ರಾಹುಲ್ ವಾಪಸ್ಸಾಗುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು; CM ಸೇರಿ ರಾಜ್ಯ ನಾಯಕರಿಗೆ ದೆಹಲಿ ಬುಲಾವ್ ಸಾಧ್ಯತೆ; 2 ದಿನಗಳಲ್ಲಿ ಸ್ಪಷ್ಟ ಚಿತ್ರಣ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com