ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್ ಹಂತಕ್ಕೆ: ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್? Video

ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಮಹತ್ವದ ಬದಲಾವಣೆಗೆ ಒತ್ತು ನೀಡಿದ್ದು, ಈ ಬಾರಿ ಹೊಸ ಮುಖಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.
Meeting at K C Venugopal house at Delhi
ದೆಹಲಿಯಲ್ಲಿ ಕೆ ಸಿ ವೇಣುಗೋಪಾಲ್ ನಿವಾಸದಲ್ಲಿ ನಿನ್ನೆ ರಾತ್ರಿ ಕಾಂಗ್ರೆಸ್ ನಾಯಕರ ಮಾತುಕತೆ
Updated on

ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್‌ನ ಇತರೆ ನಾಯಕರು ಇಂದು ಮಧ್ಯಾಹ್ನ ಬೆಂಗಳೂರಿಗೆ ಮರಳಲಿದ್ದಾರೆ. ಇಂದು ಬೆಳಗ್ಗೆ ಸಿದ್ದರಾಮಯ್ಯನವರು ತಮ್ಮ ಆಪ್ತರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು.

ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಮಹತ್ವದ ಬದಲಾವಣೆಗೆ ಒತ್ತು ನೀಡಿದ್ದು, ಈ ಬಾರಿ ಹೊಸ ಮುಖಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಖಾಲಿ ಇರುವ 20 ಸಚಿವ ಸ್ಥಾನಗಳಲ್ಲಿ ಸುಮಾರು 60 ಶೇಕಡಾ ಸ್ಥಾನಗಳನ್ನು ಹಿಂದುಳಿದ ವರ್ಗ (OBC), ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ನೀಡುವ ಸಾಧ್ಯತೆ ಇದೆ. ಅಲ್ಲದೆ, ಹೊಸ ಸಚಿವರ ಪೈಕಿ ಸುಮಾರು 70 ಶೇಕಡಾ ಮಂದಿ ಮೊದಲ ಬಾರಿಗೆ ಸಚಿವರಾಗಲಿದ್ದು, ಕನಿಷ್ಠ ಇಬ್ಬರು ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ.

ಮೊದಲ ಸುತ್ತಿನ ಸಭೆಯಲ್ಲಿ ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್, ಈ ಮಾನದಂಡಗಳಿಗೆ ಅನುಗುಣವಾಗಿ ಸಚಿವರ ಪಟ್ಟಿಯನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದರು. ಇದೇ ವೇಳೆ, ಹಳೆ ಹೆಸರನ್ನೇ ತಂದರೆ ಹೊಸತನ ಇರುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಇಂದು ಬೆಳಗ್ಗೆ ಸಿಎಂ-ಮಾಜಿ ಸಿಎಂ ರಂದೀಪ್ ಸಿಂಗ್ ಸುರ್ಜೆವಾಲಾ ಜೊತೆ ಗಂಭೀರ ಚರ್ಚೆ
ದೆಹಲಿಯಲ್ಲಿ ಇಂದು ಬೆಳಗ್ಗೆ ಸಿಎಂ-ಮಾಜಿ ಸಿಎಂ ರಂದೀಪ್ ಸಿಂಗ್ ಸುರ್ಜೆವಾಲಾ ಜೊತೆ ಗಂಭೀರ ಚರ್ಚೆ

ಇದಾದ ಬಳಿಕ ಉಭಯ ನಾಯಕರು ಪರಿಷ್ಕೃತ ಪಟ್ಟಿಯನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಮರಳಿದ ಬಳಿಕ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅಂತಿಮ ಪಟ್ಟಿಗೆ ಅನುಮೋದನೆ ನೀಡಲಿದ್ದಾರೆ.

Meeting at K C Venugopal house at Delhi
ಸಂಪುಟ ವಿಸ್ತರಣೆ ಸರ್ಕಸ್: ಸಚಿವರ ಪಟ್ಟಿ ಬಹುತೇಕ ಫೈನಲ್; 'ಲಕ್ಷ್ಮಿ'ಗೂ ಜಾಕ್‌ಪಾಟ್ ಸಾಧ್ಯತೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com