

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆಯಲ್ಲಿ ನಿರತರಾಗಿದ್ದಾರೆ.
ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸರಣಿ ಸಭೆ ನಡೆಯುತ್ತಿದೆ. ಇಂದೇ ಸಚಿವರ ಪಟ್ಟಿ ಅಂತಿಮಗೊಂಡು ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ ಇದೆ.
ನಾಳೆ ಬುಧವಾರ ಮಧ್ಯಾಹ್ನ 2 ಗಂಟೆಗೆ ಪ್ರಮಾಣ ವಚನ ಕಾರ್ಯಕ್ರಮ ನಿಗದಿ ಬಗ್ಗೆ ಚರ್ಚೆ ನಡೆಯುತ್ತಿದ್ದು ರಾಜ್ಯಪಾಲ ಕಚೇರಿಗೆ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ಹೋಗಿದೆ ಎಂದು ತಿಳಿದುಬಂದಿದೆ.