ಯಾವುದೇ ಕ್ಷಣದಲ್ಲಿ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ K C ವೇಣುಗೋಪಾಲ್-Video

ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಂಗಳವಾರ ದೆಹಲಿಗೆ ತೆರಳಿದ್ದರು.
briefing session for AICC Observers deputed to Karnataka for the Sangathan Srijan Abhiyan in Bengaluru today
ಬೆಂಗಳೂರಿನಲ್ಲಿ ಕರ್ನಾಟಕಕ್ಕೆ ಸಂಘಟನ ಸೃಜನ್ ಅಭಿಯಾನಕ್ಕಾಗಿ ನಿಯೋಜಿಸಲಾದ ಎಐಸಿಸಿ ವೀಕ್ಷಕರಿಗೆ (AICC Observers) ಮಾರ್ಗದರ್ಶನ ಸಭೆ (Briefing session) ನಡೆಯಿತು.
Updated on

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ಅದು ಯಾವುದೇ ಕ್ಷಣದಲ್ಲಿ ಆಗಬಹುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಂಗಳವಾರ ದೆಹಲಿಗೆ ತೆರಳಿದ್ದರು.

ಆದರೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಕೈಗೊಂಡ ಕ್ರಮವನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದುರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಹಲವು ನಾಯಕರು ಮತ್ತು ಸಂಸದರು ಧರಣಿಯಲ್ಲಿ ಭಾಗವಹಿಸಿದ್ದರಿಂದ ಈ ಕುರಿತು ಚರ್ಚೆ ನಡೆಸಲು ಸಾಧ್ಯವಾಗಿರಲಿಲ್ಲ.

briefing session for AICC Observers deputed to Karnataka for the Sangathan Srijan Abhiyan in Bengaluru today
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಮೋದಿ ಮೊದಲೇ ಮಾತನಾಡಬೇಕಿತ್ತು ಎಂದ ಡಿಕೆಶಿ; NEET ರದ್ದುಪಡಿಸಿ CET ಜಾರಿಗೆ ತನ್ನಿ- ಪರಮೇಶ್ವರ್ ಆಗ್ರಹ

ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯುವುದು ಖಚಿತ. ಅದು ಯಾವುದೇ ಸಮಯದಲ್ಲಿ ನಡೆಯಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ವೇಣುಗೋಪಾಲ್ ಸುದ್ದಿಗಾರರಿಗೆ ತಿಳಿಸಿದರು.

ಸಚಿವ ಸ್ಥಾನಾಕಾಂಕ್ಷಿಗಳು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ತೀವ್ರ ಲಾಬಿ ನಡೆಸುತ್ತಿದ್ದಾರೆ. ಕಳೆದ ವಾರವೂ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಹರಿಪ್ರಸಾದ್ ದೆಹಲಿಗೆ ಭೇಟಿ ನೀಡಿ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಪಕ್ಷದ ಉನ್ನತ ನಾಯಕರೊಂದಿಗೆ ಮೊದಲ ಸುತ್ತಿನ ಮಾತುಕತೆ ನಡೆಸಿದ್ದರು.

ಆ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸದ ಕಾರಣ, ಬಳಿಕ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಈ ಕುರಿತು ಪ್ರತ್ಯೇಕವಾಗಿ ಚರ್ಚಿಸಿದ್ದರು.

briefing session for AICC Observers deputed to Karnataka for the Sangathan Srijan Abhiyan in Bengaluru today
'ಕನಿಷ್ಠಪಕ್ಷ ಈಗಲಾದರೂ ತಮ್ಮ ಅಭಿಪ್ರಾಯ ಹೇಳಿದ್ದಾರೆ': ಮೌನ ಮುರಿದ ಮೋದಿಗೆ CM ಡಿಕೆಶಿ ಧನ್ಯವಾದ; Video

ಮೇ 28ರಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಜೂನ್ 3ರಂದು ಡಿ.ಕೆ. ಶಿವಕುಮಾರ್ ಅವರು 13 ಸಚಿವರೊಂದಿಗೆ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಮುಖ್ಯಮಂತ್ರಿಯನ್ನು ಒಳಗೊಂಡಂತೆ ಕರ್ನಾಟಕ ಸಚಿವ ಸಂಪುಟದ ಗರಿಷ್ಠ ಸದಸ್ಯರ ಸಂಖ್ಯೆ 34 ಆಗಿದ್ದು, ಇನ್ನೂ 20 ಸಚಿವ ಸ್ಥಾನಗಳು ಖಾಲಿ ಇವೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಮುಖ್ಯಮಂತ್ರಿ ಶಿವಕುಮಾರ್ ಅವರ ಮೇಲೆ ಒತ್ತಡ ಹೆಚ್ಚುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com