ಸಚಿವ ಸಂಪುಟ ವಿಸ್ತರಣೆ: ಹೈಕಮಾಂಡ್ ಇಂದು ಅಂತಿಮ ನಿರ್ಧಾರ

ರಾಜ್ಯ ಕಾಂಗ್ರೆಸ್ ನಾಯಕರು ಇಂದು ರಾತ್ರಿ 8 ಗಂಟೆಗೆ ಹೈಕಮಾಂಡ್ ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
Former chief minister Siddaramaiah and Congress MLAs at Karnataka Bhavan in New Delhi on Monday
ದೆಹಲಿಯ ಕರ್ನಾಟಕ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದರು.
Updated on

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಮಂಗಳವಾರದಿಂದ ಎರಡು ದಿನಗಳ ಕಾಲ ಮಧ್ಯಪ್ರದೇಶ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ, ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿನ 20 ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಕಾಂಗ್ರೆಸ್ ಹೈಕಮಾಂಡ್‌ಗೆ ಇನ್ನಷ್ಟು ಸಮಯ ದೊರೆತಿದೆ.

ರಾಜ್ಯ ಕಾಂಗ್ರೆಸ್ ನಾಯಕರು ಇಂದು ರಾತ್ರಿ 8 ಗಂಟೆಗೆ ಹೈಕಮಾಂಡ್ ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬಿದ್ದರೂ, ರಾಜ್ಯಪಾಲರ ಅನುಪಸ್ಥಿತಿಯಿಂದ ಪ್ರಮಾಣವಚನ ಸಮಾರಂಭ ವಿಳಂಬವಾಗುವ ಸಾಧ್ಯತೆ ಇದೆ. ಅಷ್ಟರವರೆಗೆ ಸಚಿವರಾಗಿ ಆಯ್ಕೆಯಾಗುವ ಶಾಸಕರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಮೂಲಗಳು ತಿಳಿಸಿವೆ.

Former chief minister Siddaramaiah and Congress MLAs at Karnataka Bhavan in New Delhi on Monday
ಸಚಿವ ಸಂಪುಟ ವಿಸ್ತರಣೆ: CM ಸೇರಿದಂತೆ ಕಾಂಗ್ರೆಸ್ ನಾಯಕರು ನಾಳೆ ಸಂಜೆ ದೆಹಲಿಗೆ; ಹೈಕಮಾಂಡ್ ಮಹತ್ವದ ಮಾತುಕತೆ

ಇದೇ ವೇಳೆ, ನಿನ್ನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದವು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ಸಚಿವ ಸ್ಥಾನಾಕಾಂಕ್ಷಿಗಳು ದೆಹಲಿಯಲ್ಲೇ ಬೀಡುಬಿಟ್ಟಿದ್ದು, ಹೈಕಮಾಂಡ್ ಅಂತಿಮ ಪಟ್ಟಿಯನ್ನು ಸಿದ್ಧಪಡಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಕುತೂಹಲದಿಂದ ಕಾದಿದ್ದಾರೆ.

ಸಚಿವ ಸ್ಥಾನಾಕಾಂಕ್ಷಿಗಳು ಹಾಗೂ ಅವರ ಬೆಂಬಲಿಗರು ಸೇರಿ ಸುಮಾರು 60 ಮಂದಿ ಶಾಸಕರು ದೆಹಲಿಯಲ್ಲಿದ್ದರು. ಹಿರಿಯ ಶಾಸಕರಷ್ಟೇ ಅಲ್ಲದೆ, ವಿಧಾನ ಪರಿಷತ್ ಸದಸ್ಯರೂ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ.

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ನೀವು (ಮಾಧ್ಯಮದವರು) ಮಾತ್ರ ಅದಕ್ಕಾಗಿ ಆತುರಪಡುತ್ತಿದ್ದೀರಿ ಎಂದು ಡಿ ಕೆ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯಪಾಲರು ಲಭ್ಯವಿಲ್ಲದ ಕಾರಣ ಪ್ರಮಾಣವಚನ ಸಮಾರಂಭದ ದಿನಾಂಕ ನಿಗದಿಪಡಿಸಲು ಸಾಧ್ಯವಾಗದೇ ಕಾಂಗ್ರೆಸ್ ನಾಯಕರು ಯಾವುದೇ ಆತುರ ತೋರಿಸುತ್ತಿಲ್ಲ. ಡಿ ಕೆ ಶಿವಕುಮಾರ್ ರಾಜ್ಯದಲ್ಲಿ ಬರ ಪರಿಸ್ಥಿತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸರ್ವಪಕ್ಷ ಸಂಸದರ ಸಭೆಯತ್ತ ಗಮನಹರಿಸಿದ್ದರೆ, ಸಿದ್ದರಾಮಯ್ಯ ಕರ್ನಾಟಕ ಭವನದಲ್ಲಿ ಶಾಸಕರೊಂದಿಗೆ ಸಮಯ ಕಳೆದರು.

ಮೂಲಗಳ ಪ್ರಕಾರ, ಬಿ.ಕೆ. ಹರಿಪ್ರಸಾದ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ನಾಳೆ ಬುಧವಾರ ತಡರಾತ್ರಿ ರಾಜ್ಯ ನಾಯಕರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಹಾಕುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವರು ತಮ್ಮ ಪುತ್ರ ರಾಕೇಶ್ ಅವರ ಪುಣ್ಯತಿಥಿಯಲ್ಲಿ ಭಾಗವಹಿಸಲು ವಿಶೇಷ ವಿಮಾನದಲ್ಲಿ ತಮ್ಮ ಹುಟ್ಟೂರು ಮೈಸೂರಿಗೆ ತೆರಳಿ, ಬಳಿಕ ಮತ್ತೆ ದೆಹಲಿಗೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಚಿವ ಸಂಪುಟ ವಿಸ್ತರಣೆ ಹಲವು ಕಾರಣಗಳಿಂದ ಪದೇಪದೇ ಮುಂದೂಡಲ್ಪಟ್ಟಿದ್ದು, ಇತ್ತೀಚೆಗೆ ದೆಹಲಿ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ಮುಂದೂಡಲ್ಪಟ್ಟಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com