ದಾವಣಗೆರೆ ದಕ್ಷಿಣ ಉಪಚುನಾವಣೆಯ ಆಡಿಯೋ ವೈರಲ್: ಅದು 'ನಕಲಿ' ಎಂದು ಜಾರಿಕೊಂಡ ಜಮೀರ್

ಇತ್ತೀಚಿಗೆ ನಡೆದ ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಕ್ರೋಚ್ ಪಾರ್ಟಿ ಹೆಸರಿನ ಎಕ್ಸ್‌ನಲ್ಲಿ ಆಡಿಯೋ ಒಂದು ರಿಲೀಸ್ ಆಗಿದೆ.
Zameer Ahmed Khan
ಜಮೀರ್ ಅಹ್ಮದ್ ಖಾನ್
Updated on

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಮತ್ತೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಜಮೀರ್ ಅಹ್ಮದ್ ಖಾನ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ.

ಇತ್ತೀಚಿಗೆ ನಡೆದ ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಕ್ರೋಚ್ ಪಾರ್ಟಿ ಹೆಸರಿನ ಎಕ್ಸ್‌ನಲ್ಲಿ ಆಡಿಯೋ ಒಂದು ರಿಲೀಸ್ ಆಗಿದೆ. ದಾವಣಗೆರೆಯ ಕಾಂಗ್ರೆಸ್ ಮುಖಂಡ ಸಿರಾಜ್ ಜೊತೆ ಜಮೀರ್ ಅಹಮ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ಜಮೀರ್ ಅಹಮದ್ ಖಾನ್, ನನ್ನ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಆಡಿಯೋ ನಕಲಿ, ಅದು ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಆಡಿಯೋ ಕ್ಲಿಪ್ ಸೃಷ್ಟಿಸಿ ಪ್ರಸಾರ ಮಾಡಿದವರ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗುವುದು ಮತ್ತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಸಚಿವ ಎಚ್ಚರಿಸಿದ್ದಾರೆ.

Zameer Ahmed Khan
ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ? ಕಾಕ್ರೋಚ್ ಪಾರ್ಟಿ ಹೆಸರಿನಲ್ಲಿ ಆಡಿಯೋ ವೈರಲ್; Audio

ಆಡಿಯೋ ಕ್ಲಿಪ್‌ನಲ್ಲಿ, ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಬಗ್ಗೆ ಇಬ್ಬರೂ ಉರ್ದು ಭಾಷೆಯಲ್ಲಿ ಮಾತನಾಡುತ್ತಿರುವುದು ಕೇಳಿಬರುತ್ತಿದೆ.

ಏಪ್ರಿಲ್ 9 ರಂದು ಮತದಾನದ ದಿನದಂದು ರೆಕಾರ್ಡ್ ಮಾಡಲಾಗಿದೆ ಎಂದು ಹೇಳಲಾದ ಈ ಆಡಿಯೋ ಸಂಭಾಷಣೆಯನ್ನು ಸೋಮವಾರ ಮೊದಲು "kannadacockroacc" ಎಂಬ X ಖಾತೆಯ ಮೂಲಕ ಹಂಚಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ನಾನು ಆ ರೀತಿ ಮಾತನಾಡಿಲ್ಲ. ಗೊಂದಲ ಉಂಟು ಮಾಡಲು ಇದೆಲ್ಲವೂ ಸೃಷ್ಟಿ ಮಾಡಲಾಗಿದೆ. ಇದು ಕಿಡಿಗೇಡಿಗಳ ಕೃತ್ಯ, ಇದನ್ನು ಯಾರೂ ನಂಬಬಾರದು. ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ ಎಂದು ಜಮೀರ್ ಸವಾಲು ಹಾಕಿದ್ದಾರೆ.

ಜಮೀರ್‌ ಅಹ್ಮದ್‌ ಖಾನ್‌ರದ್ದು ಎನ್ನಲಾದ ಆಡಿಯೋದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಬದಲಾಗಿ ಮುಸ್ಲಿಮರೆಲ್ಲಾ ಪಕ್ಷೇತರರಿಗೆ ವೋಟ್‌ ಹಾಕಬೇಕು ಎಂದು ಆಗ್ರಹಿಸುವುದು ತಿಳಿದು ಬಂದಿದೆ. ಒಂದು ವೇಳೆ ಮುಸ್ಲಿಮರು ವೋಟ್‌ ಹಾಕಿಲ್ಲ ಅಂದ್ರೂ ಓಕೆ, ಅವನಿಗೆ ಕಾಂಗ್ರೆಸ್‌ ವೋಟ್‌ಗಳು ಮೈನಸ್‌ ಆಗಬೇಕು ಎಂದು ತಮ್ಮ ಬಂಟನಿಗೆ ಜಮೀರ್ ಸೂಚನೆ ನೀಡಿರುವುದು ಆಡಿಯೋದಲ್ಲಿದೆ.

ಅಷ್ಟೇ ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿಗೆ ಜಾಸ್ತಿ ಓಟ್ ಹಾಕಬೇಡಿ. ಬಂಡಾಯ ನಿಂತು ಕಣದಿಂದ ಹಿಂದೆ ಸರಿದಿದ್ದ ಸಾದಿಕ್ ಪೈಲ್ವಾನ್ ವಾರ್ಡ್ ನಲ್ಲಿ ಕಾಂಗ್ರೆಸ್ ಗೆ ಓಟ್ ಕಡಿಮೆ ಬರುವಂತೆ ನೋಡಿಕೊಳ್ಳಿ. ಜಾಸ್ತಿ ಹಾಕದೇ ಇರುವಂತೆ ನೋಡಿ. ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷೇತರರಿಗೆ ಮತ ಹಾಕಿಸಿ. ಬಲವಂತವಾಗಿ ಮನೆಯಿಂದ ಕರೆದು ಬಂದು ಓಟ್ ಹಾಕಿಸೇಡಿ ಎಂದು ಆಡಿಯೋದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com