ಸ್ಪೀಕರ್ ಯುಟಿ ಖಾದರ್ ರಿಂದ ಸಿಬ್ಬಂದಿಗೆ ಔತಣಕೂಟ; ಪಕ್ಕಾ ಆಯ್ತಾ ಸಚಿವ ಸ್ಥಾನ?

ಕರ್ನಾಟಕ ವಿಧಾನಸಭೆ ಸಚಿವಾಲಯದ ಎಲ್ಲಾ ಅಧಿಕಾರಿಗಳು ಮತ್ತು ನೌಕರರಿಗೆ ಸ್ಪೀಕರ್ ಖಾದರ್ ಅವರು ಇಂದು, ಸಂಜೆ 6 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭೋಜನಕೂಟವನ್ನು ಆಯೋಜಿಸಿದ್ದರು.
Karnataka Assembly Speaker U T Khader
ಸ್ಪೀಕರ್ ಯುಟಿ ಖಾದರ್ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಕರ್ನಾಟಕ ವಿಧಾನಸಭಾ ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರಿಗೆ ಮಂಗಳವಾರ ಸ್ಪೀಕರ್ ಯು.ಟಿ. ಖಾದರ್ ಅವರು ಔತಣಕೂಟ ಆಯೋಜಿಸಿದ್ದು, ಅವರು ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೂನ್ 3 ರಂದು ಸಂಜೆ 4.05 ಕ್ಕೆ ಲೋಕ ಭವನದ ಆವರಣದಲ್ಲಿ ತಮ್ಮ ಸಚಿವ ಸಂಪುಟದ ಸದಸ್ಯರೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಯುಟಿ ಖಾದರ್ ಅವರು ಸಹ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

"ಕರ್ನಾಟಕ ವಿಧಾನಸಭೆ ಸಚಿವಾಲಯದ ಎಲ್ಲಾ ಅಧಿಕಾರಿಗಳು ಮತ್ತು ನೌಕರರಿಗೆ ಸ್ಪೀಕರ್ ಖಾದರ್ ಅವರು ಇಂದು, ಸಂಜೆ 6 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭೋಜನಕೂಟವನ್ನು ಆಯೋಜಿಸಿದ್ದರು" ಎಂದು ವಿಧಾನಸಭೆ ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Karnataka Assembly Speaker U T Khader
ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಹೀಗಿದೆ ಕಾರ್ಯಕ್ರಮದ ಭದ್ರತೆ

ಆದಾಗ್ಯೂ, ಇದಕ್ಕೂ ಮುನ್ನ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್, ಹೊಸ ಸಂಪುಟದಲ್ಲಿ ತಮ್ಮನ್ನು ಸಚಿವರನ್ನಾಗಿ ನೇಮಿಸಬಹುದೆಂಬ ವರದಿಗಳ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಹೇಳಿದರು.

ಕೆಲವು ವರದಿಗಳು ಅವರು ಉಪ ಮುಖ್ಯಮಂತ್ರಿಯಾಗುವ ಸ್ಪರ್ಧೆಯಲ್ಲಿದ್ದಾರೆ ಎಂದು ಸೂಚಿಸುತ್ತಿವೆ. ಆದರೆ ಈ ಬಗ್ಗೆ ತಮಗೆ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ ಎಂದು ಖಾದರ್ ತಿಳಿಸಿದ್ದಾರೆ.

Karnataka Assembly Speaker U T Khader
ಪಕ್ಷ ಕೊಟ್ಟ ಜವಾಬ್ದಾರಿ ನಿಭಾಯಿಸಿದ್ದೇನೆ, ಮುಂದಿನ ಹೆಜ್ಜೆ ಹೈಕಮಾಂಡ್ ತೀರ್ಮಾನಿಸಲಿ: ಯು.ಟಿ ಖಾದರ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com