ಸಿದ್ದರಾಮಯ್ಯ ಪಟ್ಟಿಗೆ ಮಣಿದ ಹೈಕಮಾಂಡ್: ಏಕೈಕ ಡಿಸಿಎಂ ಆಗಿ ಜಿ ಪರಮೇಶ್ವರ ಆಯ್ಕೆ!

ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಪರಮೇಶ್ವರ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
G Parameshwara
ಜಿ ಪರಮೇಶ್ವರAI-generated representative image created using ChatGPT (OpenAI).
Updated on

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಜಿ ಪರಮೇಶ್ವರ ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಪರಮೇಶ್ವರ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಂಜೆ 4.05ಕ್ಕೆ ಲೋಕ ಭವನದ ಗಾಜಿನ ಮನೆಯಲ್ಲಿ ಶಿವಕುಮಾರ್ ಮತ್ತು ಇತರ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಪರಮೇಶ್ವರ ಅವರು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 2018ರ ಮೇನಿಂದ 2019ರ ಜುಲೈವರೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು.

ಪ್ರಮುಖ ದಲಿತ ನಾಯಕರಾದ ಪರಮೇಶ್ವರ ಅವರು 2010 ರಿಂದ 2018ರವರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷರಾಗಿ ದಾಖಲೆಯ ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದರು.

G Parameshwara
ಡಿಕೆ ಶಿವಕುಮಾರ್ ಪ್ರಮಾಣವಚನ: 13 ಶಾಸಕರಿಗೆ ಮಂತ್ರಿ ಸ್ಥಾನ, ಯಾರಿಗೆಲ್ಲಾ ಸಚಿವಗಿರಿ? ಇಲ್ಲಿದೆ ಪಟ್ಟಿ

ಈ ಮಧ್ಯೆ, ಶಿವಕುಮಾರ್ ಮತ್ತು ಪರಮೇಶ್ವರ ಅವರು ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ನಿರ್ಗಮಿತ ಮುಖ್ಯಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಇಬ್ಬರೂ ನಾಯಕರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದರು ಮತ್ತು ಅವರು ಅವರನ್ನು ಅಭಿನಂದಿಸಿ ಶುಭಾಶಯಗಳನ್ನು ಕೋರಿದರು ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com