'ಅಧಿಕಾರ ಬೇಕಾದವರು ಡಿ.ಕೆ ಶಿವಕುಮಾರ್ ಜತೆ ಹೋಗಿ, ಪಕ್ಷ ಕಟ್ಟುವವರು ನನ್ನ ಜೊತೆ ಬನ್ನಿ'; Video

ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಕೆಪಿಸಿಸಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ.
B K Hariprasad shared heartful message to Congress high command
ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆ ಮಾಡಿದ ಕಾಂಗ್ರೆಸ್ ಹೈಕಮಾಂಡ್ ಗೆ ಕೃತಜ್ಞತೆ ಸಲ್ಲಿಸಿ ಪೋಸ್ಟ್ ಮಾಡಿರುವ ಬಿ ಕೆ ಹರಿಪ್ರಸಾದ್
Updated on

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ.

ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಕೆಪಿಸಿಸಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ. “ಯಾರಿಗೆ ಅಧಿಕಾರ ಮತ್ತು ಸ್ಥಾನಮಾನ ಬೇಕೋ ಅವರು ಡಿ.ಕೆ. ಶಿವಕುಮಾರ್ ಜೊತೆಗೆ ಹೋಗಿ, ಪಕ್ಷವನ್ನು ಸದೃಢವಾಗಿ ಬೆಳೆಸಬೇಕು ಅನ್ನೋರು ನಮ್ಮ ಜೊತೆಗೆ ಬನ್ನಿ” ಎಂದು ಹೇಳುವ ಮೂಲಕ ಕಾಂಗ್ರೆಸ್​​​​ ನಾಯಕರಿಗೆ ಹಾಗೂ ಸಚಿವ ಆಕ್ಷಾಂಕಿಗಳಿಗೆ ಖಡಕ್​​​​​​ ಮಾತುಗಳನ್ನು ಹೇಳಿದ್ದಾರೆ.

ಸರ್ಕಾರದಲ್ಲಿ ಈಗಾಗಲೇ ಬೇರೆ ಬೇರೆ ಕೆಲಸ ಮಾಡಿದವರು ಈಗ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು. ನಾವೆಲ್ಲರೂ ಸೇರಿ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ. ಸಂಘಟನೆ ಮತ್ತು ಸರ್ಕಾರ ಎರಡನ್ನೂ ಸಮತೋಲನವಾಗಿ ಹಂಚಿಕೊಂಡು ಮುಂದೆ ಹೋಗೋಣ. ನನ್ನ ಪೂರ್ವಜರು ಮಾಡಿದ ಪುಣ್ಯದಿಂದಾಗಿ ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಮಾಡಿರುವ ಕೆಲಸದಿಂದಾಗಿ ಈ ಪವಿತ್ರ ಪಕ್ಷದ ಅಧ್ಯಕ್ಷ ಹುದ್ದೆ ನನಗೆ ಸಿಕ್ಕಿದೆ. ಸಾಮಾನ್ಯ ಕಾರ್ಯಕರ್ತರಿಗೆ ಏನೇ ತೊಂದರೆಯಾದರೂ ನಾನು ಸದಾ ಅವರ ಜೊತೆ ಇರುತ್ತೇನೆ ಎಂದು ಭರವಸೆ ನೀಡಿದರು.

B K Hariprasad shared heartful message to Congress high command
ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರದ ಮೊದಲ ಹಂತದ ಸಂಪುಟ ರಚನೆ: ಸಿದ್ದರಾಮಯ್ಯ ನಿಷ್ಠಾವಂತರಿಗೆ ಮಣೆ

2023ರಲ್ಲಿ ಕರ್ನಾಟಕದಲ್ಲಿ ಅತ್ಯಂತ ಶಾಂತಿ ನೆಲೆಸಿದೆ, ಸರ್ವಜನಾಂಗದ ಶಾಂತಿಯ ತೋಟ ಎಂಬ ಮಾತಿಗೆ ಅನ್ವರ್ಥವಾಗಿದೆ, ನಾನು ಕಾಂಗ್ರೆಸ್ ಪಕ್ಷದ ವ್ಯಕ್ತಿ, ಸರ್ಕಾರದ ವ್ಯಕ್ತಿಯಲ್ಲ, 53 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಎಲ್ಲಾ ಹಂತಗಳಲ್ಲಿ ಕೆಲಸ ಮಾಡುತ್ತಾ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದೇನೆ. ಕಾಂಗ್ರೆಸ್ ವರಿಷ್ಠರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಇರಿಸಿಕೊಂಡು ಇನ್ನಷ್ಟು ಕೆಲಸಗಳನ್ನು ಮಾಡುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com