ಖಾತೆ ಹಂಚಿಕೆಯಲ್ಲಿ ಕೆ.ಹೆಚ್ ಮುನಿಯಪ್ಪಗೂ ಅಸಮಾಧಾನ: ಹಿರಿತನ ಪರಿಗಣಿಸುತ್ತಿಲ್ಲ ಎಂದ ಸಚಿವ! Video

ನಾನು ಈಗಾಗಲೇ 8 ಬಾರಿ ಗೆದ್ದಿರುವ ಹಿರಿಯ ರಾಜಕಾರಣಿ. ಆದರೆ ಖಾತೆ ಹಂಚಿಕೆಯಲ್ಲಿ ನಮ್ಮ ಸೀನಿಯಾರಿಟಿಯನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
K H Muniyappa
ಕೆ ಹೆಚ್ ಮುನಿಯಪ್ಪ
Updated on

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ವಿಷಯದಲ್ಲಿ ಮತ್ತಷ್ಟು ಅಸಮಾಧಾನ ಭುಗಿಲೇಳುವ ಲಕ್ಷಣ ಕಾಣುತ್ತಿದೆ. ಇಂದು ಬೆಳಗ್ಗೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನದ ರಾಜೀನಾಮೆ ನೀಡಿದ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ಮುಖಂಡ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ ಹೆಚ್ ಮುನಿಯಪ್ಪ ಕೂಡ ತಮಗೆ ನೀಡಿರುವ ಖಾತೆ ಬಗ್ಗೆ ಬಹಿರಂಗವಾಗಿ ಮಾಧ್ಯಮಗಳ ಮುಂದೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಖಾತೆ ಹಂಚಿಕೆಯಲ್ಲಿ ಹಿರಿತನವನ್ನು ಪರಿಗಣಿಸುತ್ತಿಲ್ಲ ಎಂದು ಹೈಕಮಾಂಡ್ ವಿರುದ್ಧವೇ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಈಗಾಗಲೇ 8 ಬಾರಿ ಗೆದ್ದಿರುವ ಹಿರಿಯ ರಾಜಕಾರಣಿ. ಆದರೆ ಖಾತೆ ಹಂಚಿಕೆಯಲ್ಲಿ ನಮ್ಮ ಸೀನಿಯಾರಿಟಿಯನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ.

ಪಕ್ಷದಲ್ಲಿ ಎಲ್ಲರನ್ನೂ ಸಮತೋಲನವಾಗಿ ನೋಡಬೇಕಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲ ನಾಯಕರನ್ನೂ ಒಂದೇ ಕಣ್ಣಿನಿಂದ ನೋಡಬೇಕು’ ಎಂದು ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ. ಈ ರೀತಿಯ ಗೊಂದಲಗಳು ಪಕ್ಷಕ್ಕೆ ಒಳ್ಳೆಯದಲ್ಲ, ಇಲಾಖೆಗಳ ಹಂಚಿಕೆ ಸರಿಯಾಗಿಲ್ಲದಿದ್ದರೆ ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವ ಆತಂಕವಿದೆ ಎಂದು ಅವರು ಎಚ್ಚರಿಸಿದ್ದಾರೆ.

ಖಾತೆ ಬದಲಾವಣೆಗೆ ಹೈಕಮಾಂಡ್‌ಗೆ ಮನವಿ

ತಾವು ಈಗಾಗಲೇ ಮೂರು ವರ್ಷಗಳ ಕಾಲ ಆಹಾರ ಇಲಾಖೆಯನ್ನು ನಿಭಾಯಿಸಿರುವ ಅನುಭವ ಹೊಂದಿದ್ದು, ಈ ಬಾರಿ ತಮಗೆ ಜನರ ನೇರ ಸೇವೆಗೆ ಮುಕ್ತ ಅವಕಾಶವಿರುವ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾಗಿ ಮುನಿಯಪ್ಪ ತಿಳಿಸಿದ್ದಾರೆ.

K H Muniyappa
'ಡಿ.ಕೆ ಶಿವಕುಮಾರ್ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ, ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ': ರಾಮಲಿಂಗಾ ರೆಡ್ಡಿ; Video

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com