ಡಿಕೆಶಿಗೆ ಅಧಿಕಾರವೇ ಇಲ್ಲ: ಇದು ರಿಮೋಟ್ ಕಂಟ್ರೋಲ್‌ ಸರ್ಕಾರ; ಹೆಚ್ಚು ದಿನ ಉಳಿಯಲ್ಲ- JDS ನಾಯಕ ಶರವಣ ಭವಿಷ್ಯ

ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಡಿಕೆ ಶಿವಕುಮಾರ್ ಮತ್ತು ಅವರ ಸಚಿವ ಸಂಪುಟ ಸಂಕಷ್ಟದಲ್ಲಿ ಸಿಲುಕಿದೆ. ಇದರಿಂದ ಕಾಂಗ್ರೆಸ್‌ಗೆ ಭವಿಷ್ಯವೇ ಇಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ.
JDS MLC TA Sharavana
ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ
Updated on

ಬೆಂಗಳೂರು: ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಚಿವ ಖಾತೆ ಹಂಚಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದು, ಒಳಜಗಳದ ಕಾರಣದಿಂದ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸರ್ಕಾರದೊಳಗಿನ ಭಿನ್ನಮತವನ್ನು ಬಹಿರಂಗಪಡಿಸಿದೆ ಎಂದರು. ಅಲ್ಲದೆ, ಮುನಿಯಪ್ಪ ಕೂಡ ತಮ್ಮ ಖಾತೆ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವುದನ್ನೂ ಅವರು ಉಲ್ಲೇಖಿಸಿದರು.

ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಡಿಕೆ ಶಿವಕುಮಾರ್ ಮತ್ತು ಅವರ ಸಚಿವ ಸಂಪುಟ ಸಂಕಷ್ಟದಲ್ಲಿ ಸಿಲುಕಿದೆ. ಇದರಿಂದ ಕಾಂಗ್ರೆಸ್‌ಗೆ ಭವಿಷ್ಯವೇ ಇಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಸಚಿವ ಖಾತೆ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿಗೆ ಯಾವುದೇ ಸ್ವತಂತ್ರವಿಲ್ಲ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರಿಗೆ ಸಂಪೂರ್ಣ ಅಧಿಕಾರ ನೀಡಿಲ್ಲ ಎಂದು ಟೀಕಿಸಿದರು.

JDS MLC TA Sharavana
MLC ಶರವಣ ಬಹಳ ಬುದ್ಧಿವಂತ ಎಂದು ಭಾವಿಸಿದ್ದೆ; ತುಂಗಭದ್ರಾ ಅಣೆಕಟ್ಟೆಗೆ ಕಳುಹಿಸಿಕೊಡುತ್ತೇನೆ, ಹೋಗಿ ನೋಡಲಿ: ಡಿ.ಕೆ ಶಿವಕುಮಾರ್

ಸರ್ಕಾರದ ಪ್ರತಿಯೊಂದು ಹಂತದಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಒಳಪೈಪೋಟಿ ಗೋಚರಿಸುತ್ತಿದೆ .

ಡಿಕೆ ಶಿವಕುಮಾರ್ ಬೆಂಬಲಿಗರಿಗೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಸರ್ಕಾರ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹೈಕಮಾಂಡ್‌ನ ರಿಮೋಟ್ ಕಂಟ್ರೋಲ್‌ನಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು.

ಸರ್ಕಾರದೊಳಗಿನ ಭಿನ್ನಾಭಿಪ್ರಾಯಗಳು ಮತ್ತು ಸಚಿವ ಖಾತೆ ಹಂಚಿಕೆ ಕುರಿತ ಅಸಮಾಧಾನ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಇದೇ ಕಾರಣದಿಂದ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದೂ ಭವಿಷ್ಯ ನುಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com