ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ಟಿ.ಬಿ. ಜಯಚಂದ್ರ ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿಯಾಗಿ ನೇಮಕ

ಜಯಚಂದ್ರ ಅವರಿಗೆ ಸಂಪುಟ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಅನ್ವಯವಾಗುವ ಎಲ್ಲ ಸೌಲಭ್ಯಗಳನ್ನು ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ -2 ಬಾಣದರಂಗಯ್ಯ ಎನ್.ಆರ್. ಮಂಗಳವಾರ ಆದೇಶ ಹೊರಡಿಸಿದ್ದಾರೆ.
T B Jayachandra
ಟಿ ಬಿ ಜಯಚಂದ್ರ
Updated on

ಬೆಂಗಳೂರು: ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯದ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ನೇಮಿಸಲಾಗಿದೆ. ಅವರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು.

ಜಯಚಂದ್ರ ಅವರಿಗೆ ಸಂಪುಟ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಅನ್ವಯವಾಗುವ ಎಲ್ಲ ಸೌಲಭ್ಯಗಳನ್ನು ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ -2 ಬಾಣದರಂಗಯ್ಯ ಎನ್.ಆರ್. ಮಂಗಳವಾರ ಆದೇಶ ಹೊರಡಿಸಿದ್ದಾರೆ.

T B Jayachandra
12 ವರ್ಷ ಪ್ರತಿಯೊಂದು ಘೋಷಣೆಯನ್ನು ವಂಚನೆಯಾಗಿ ಪರಿವರ್ತಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು: ಕುಟುಕಿದ ಪ್ರಿಯಾಂಕ್ ಖರ್ಗೆ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯದ ವಿಶೇಷ ಪ್ರತಿನಿಧಿ-2 ಆಗಿ ನೇಮಿಸಿದ್ದು , ಸಂಪುಟ ದರ್ಜೆ ಸಚಿವರಿಗೆ ಅನ್ವಯವಾಗುವ ಎಲ್ಲ ಸೌಲಭ್ಯಗಳನ್ನು ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com