'ಆ ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್ ಇರಬೇಕು': ಪ್ರದೀಪ್ ಈಶ್ವರ್ ಶಾಕಿಂಗ್ ಹೇಳಿಕೆ

ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ದ್ವೇಷ ಭಾಷಣದ ಪಿತಾಮಹರು ಎಂದು ತಿರುಗೇಟು ನೀಡಿದರು.
Hate speech row: Congress MLA Pradeep Eshwar slams Basanagouda Patil Yatnal and calls him a monkey breed
ಪ್ರದೀಪ್ ಈಶ್ವರ್ - ಬಸನಗೌಡ ಪಾಟೀಲ್ ಯತ್ನಾಳ್
Updated on

ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರುದ್ಧ ಶಾಕಿಂಗ್ ಹೇಳಿಕೆ ನೀಡಿದ್ದು, ‘ಆ ಯತ್ನಾಳ್ ನೋಡಿದ್ರೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾನೆ. ಅದು ಯಾವುದೋ ಒಂದು ಕೋತಿಯ ಬ್ರೀಡ್’ ಇರಬೇಕು ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ಅಲ್ಲದೆ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮನ್ನು ದೇಶದ್ರೋಹಿ ಎಂದಿರುವುದರ ಜತೆಗೆ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಪತ್ರ ಬರೆದು ದೂರು ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ದ್ವೇಷ ಭಾಷಣದ ಆರೋಪವನ್ನು ತಳ್ಳಿಹಾಕಿದ್ದಾರೆ. ಅಲ್ಲದೆ, ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ದ್ವೇಷ ಭಾಷಣದ ಪಿತಾಮಹರು ಎಂದು ತಿರುಗೇಟು ನೀಡಿದರು.

Hate speech row: Congress MLA Pradeep Eshwar slams Basanagouda Patil Yatnal and calls him a monkey breed
ಹಿಜಾಬ್ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನಿಸಿದ ಯತ್ನಾಳ್, ಬೆಂಬಲಿಗರು ಪೊಲೀಸ್ ವಶಕ್ಕೆ

ಛಲವಾದಿ ನಾರಾಯಣಸ್ವಾಮಿ ಅವರನ್ನು ಬುದ್ಧಿವಂತರು ಮತ್ತು ಪ್ರಜ್ಞಾವಂತರು ಎಂದು ಭಾವಿಸಿದ್ದೆ. ಆದರೆ, ಅವರು ನೀಡಿದ ದೂರು ನೋಡಿದ ನಂತರ ಅವರಿಗೆ ಜ್ಞಾನವಿಲ್ಲ ಎಂದು ಅನಿಸುತ್ತಿದೆ. ಭಾಷಣದ ವಿಡಿಯೋವನ್ನು ನೋಡದೆ ಹೋಮ್ ಮಿನಿಸ್ಟರ್ ಮತ್ತು ಸಿಎಂ ಅವರಿಗೆ ಪತ್ರ ಬರೆಯುವುದು ಸರಿಯಲ್ಲ. ವಿಡಿಯೋದಲ್ಲಿ, ‘‘ಅಂಧಭಕ್ತರು ಮತ್ತು ದೇಶದ್ರೋಹಿಗಳು ಈ ದೇಶಕ್ಕೆ ಮಾರಕ’’ ಎಂದು ಹೇಳಿದ್ದೇನೆಯೇ ಹೊರತು, ನಿರ್ದಿಷ್ಟವಾಗಿ ಯಾರನ್ನೂ ದೇಶದ್ರೋಹಿಗಳು ಎಂದು ಕರೆದಿಲ್ಲ. ಛಲವಾದಿ ನಾರಾಯಣಸ್ವಾಮಿ ಅವರ ಮನಸ್ಸಿನಲ್ಲಿರುವುದನ್ನೇ ಹೊರಹಾಕುತ್ತಿದ್ದಾರೆ ಎಂದು ಪ್ರದೀಪ್ ಈಶ್ವರ್ ಆರೋಪಿಸಿದರು.

ದ್ವೇಷ ಭಾಷಣದ ಮೊದಲ ಪಿತಾಮಹರೇ ಛಲವಾದಿ ನಾರಾಯಣಸ್ವಾಮಿ ಮತ್ತು ಎರಡನೇ ಪಿತಾಮಹ ಬಸನಗೌಡ ಪಾಟೀಲ್ ಯತ್ನಾಳ್ ಎಂದು ಕಟುವಾಗಿ ಟೀಕಿಸಿದರು. ಅಲ್ಲದೆ, ‘ಆ ಯತ್ನಾಳ್ ನೋಡಿದ್ರೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾನೆ. ಅದು ಯಾವುದೋ ಒಂದು ಕೋತಿಯ ಬ್ರೀಡ್’ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com