ಪರಿಷತ್‌ ಚುನಾವಣೆ: ಕಾಂಗ್ರೆಸ್ ಗೆ ಕ್ರಾಸ್ ವೋಟಿಂಗ್ ಆತಂಕ; ರೆಸಾರ್ಟ್‌ಗೆ ಶಾಸಕರು ಶಿಫ್ಟ್, ಅಲ್ಲೇ ಸಿಎಲ್‌ಪಿ ಸಭೆ

ಕಾಂಗ್ರೆಸ್ ತನ್ನ ಎಲ್ಲಾ ಶಾಸಕರನ್ನು ಮಂಗಳವಾರ ಬಿಡದಿಯ ವಂಡರ್ ಲಾ ರೆಸಾರ್ಟ್ ಗೆ ಶಿಫ್ಟ್ ಮಾಡಿದ್ದು, ಅಲ್ಲಿಯೇ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಿದೆ.
Karnataka MLC polls: Congress shifts MLAs to Bidadi resort to prevent cross-voting
ವಂಡರ್ ಲಾ ರೆಸಾರ್ಟ್‌ನಲ್ಲಿ ಶಾಸಕ ಎಚ್‌.ಸಿ.ಬಾಲಕೃಷ್ಣ
Updated on

ರಾಮನಗರ: ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ ಆರಂಭವಾಗಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಆತಂಕ ಎದುರಿಸುತ್ತಿರುವ ಕಾಂಗ್ರೆಸ್ ತನ್ನ ಮತಗಳ ರಕ್ಷಣೆಗಾಗಿ ರೆಸಾರ್ಟ್ ಮೊರೆಹೋಗಿದೆ.

ಕಾಂಗ್ರೆಸ್ ತನ್ನ ಎಲ್ಲಾ ಶಾಸಕರನ್ನು ಮಂಗಳವಾರ ಬಿಡದಿಯ ವಂಡರ್ ಲಾ ರೆಸಾರ್ಟ್ ಗೆ ಶಿಫ್ಟ್ ಮಾಡಿದ್ದು, ಅಲ್ಲಿಯೇ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಿದೆ.

ಇಂದು ಮತ್ತು ನಾಳೆ ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಲಿರುವ ಕಾಂಗ್ರೆಸ್ ಶಾಸಕರು ಜೂನ್ 18ರಂದು ರೆಸಾರ್ಟ್‌ನಿಂದಲೇ ನೇರವಾಗಿ ವಿಧಾನಸೌದಕ್ಕೆ ತೆರಳಿ ಮತದಾನ ಮಾಡಲಿದ್ದಾರೆ.

Karnataka MLC polls: Congress shifts MLAs to Bidadi resort to prevent cross-voting
ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ನ ಮೂವರು, ಬಿಜೆಪಿಯಿಂದ ಒಬ್ಬರು ಅವಿರೋಧ ಆಯ್ಕೆ

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ 6:15ಕ್ಕೆ ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಸೇರಿ ಕಾಂಗ್ರೆಸ್‌ನ ಎಲ್ಲಾ ಸಚಿವರು, ಶಾಸಕರು ಹಾಗೂ ಪರಿಷತ್ ಸದಸ್ಯರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ವಂಡರ್ ಲಾ ರೆಸಾರ್ಟ್‌ನಲ್ಲಿ ಶಾಸಕ ಎಚ್‌.ಸಿ.ಬಾಲಕೃಷ್ಣ ಅವರು 130 ರೂಂಗಳನ್ನ ಬುಕ್ ಮಾಡಿದ್ದಾರೆ. ನಾಳೆ ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಿ ಜೂ.18ರಂದು ಬೆಳಗ್ಗೆ ಇಲ್ಲಿಂದಲೇ ನೇರವಾಗಿ ವಿಧಾನಸೌದಕ್ಕೆ ತೆರಳಿ ಮತದಾನ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com