

ಬೆಂಗಳೂರು: ನಮ್ಮದು ಸಣ್ಣ ಪಕ್ಷ. ಮ್ಯಾನ್ ಪವರ್, ಮಸಲ್ ಪವರ್, ಮನಿ ಪವರ್ ಇರುವವರ ಎದುರು ನಾವು ಫೈಟ್ ಮಾಡಲು ಆಗುತ್ತಾ’ ನಾವೇನು ಆಪರೇಷನ್ ಮಾಡೋಕಾಗುತ್ತಾ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೈಯಲ್ಲಿ ಏನಾಗುತ್ತೆ? ಸರ್ಕಾರ ಅವರ ಕೈಯಲ್ಲಿದೆ. ನಮ್ಮ ಕೈಯಲ್ಲಿ ಏನಿದೆ? ನಾವು ನಮ್ಮ ಪಕ್ಷದ ಮತಗಳು ಚೆಲ್ಲಾಪಿಲ್ಲಿ ಆಗದೆ ಒಟ್ಟಾಗಿರಬೇಕು ಎಂಬ ಉದ್ದೇಶದಿಂದ ಅಭ್ಯರ್ಥಿ ಹಾಕಿದ್ದೇವೆ.
ಕುತಂತ್ರ ಮಾಡಿ ಗೆಲ್ಲಬೇಕು ಎಂಬ ಪ್ರಶ್ನೆ ಇಲ್ಲ ಎಂದು ಮಾರ್ಮಿಕವಾಗಿ ನುಡಿದರು. ನಮ್ಮ ಅಭ್ಯರ್ಥಿ ಅರ್ಜಿ ಹಾಕುವಾಗ ಆತ್ಮಸಾಕ್ಷಿಗೆ ಅನುಗುಣವಾಗಿ ನನಗೆ ಮತ ಕೊಡಿ ಎಂದು ಕೇಳಿದ್ದಾರೆ ಎಂದರು.
ನಮ್ಮ ಮತಗಳ ಜೊತೆಗೆ ಹೆಚ್ಚುವರಿ ಮತ ನಮಗೆ ಕೊಡುವಂತೆ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇವೆ. ನಮ್ಮ ಮತ ಭದ್ರವಾಗಿಸಲು ನಾವು ಅಭ್ಯರ್ಥಿ ಹಾಕಿದ್ದೇವೆ ಎಂದು ಹೇಳಿದರು.
Advertisement