

ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್‌ನ 7 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. 8 ಅಭ್ಯರ್ಥಿಗಳು ಕಣದಲ್ಲಿದ್ದು, ಕಾಂಗ್ರೆಸ್ 4 ಅಭ್ಯರ್ಥಿಗಳ ಆಯ್ಕೆ ದಾರಿ ಸಲೀಸಾಗಿದೆ.
ಆದರೆ, ಐದನೇ ಅಭ್ಯರ್ಥಿಯ ಗೆಲುವಿನ ರಾಜಕೀಯ ಲೆಕ್ಕಾಚಾರಗಳು ಜೋರಾಗಿವೆ. ಈ ಮಧ್ಯೆ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅವರು ಪಕ್ಷಕ್ಕೆ ಶಾಕ್ ಕೊಟ್ಟಿದ್ದಾರೆ. ಜೆಡಿಎಸ್ನ ಬಹುತೇಕ ಶಾಸಕರು ರೆಸಾರ್ಟ್ಗೆ ಶಿಫ್ಟ್ ಆಗಿದ್ದಾರೆ.
ಮುನಿಸಿಕೊಂಡಿರೋ ಶಾಸಕ ಜಿಟಿ ದೇವೇಗೌಡ್ರು ಮಾತ್ರ ರೆಸಾರ್ಟ್ಗೆ ತೆರಳಿಲ್ಲ. ಬದಲಾಗಿ ಒಂಟಿಯಾಗಿ ಬಂದು ಮತಚಲಾಯಿಸಿದ್ದಾರೆ. ಜೆಡಿಎಸ್ಗೆ ಜಿಟಿ ದೇವೇಗೌಡ ಕೈ ಕೊಟ್ರಾ ಎನ್ನುವ ಪ್ರಶ್ನೆ ಇದೀಗ ಮೂಡಿದೆ.
ಏಜೆಂಟ್‌ಗಳಿಗೆ ಖಾಲಿ ಮತಪೆಟ್ಟಿಗೆ ತೋರಿಸಿ ಪ್ರಕ್ರಿಯೆ ಪೂರ್ಣಗೊಳಿಸುತ್ತಿದ್ದಂತೆ ಶಾಸಕ ಜಿ.ಟಿ ದೇವೇಗೌಡ ಅವರು ಮತ ಚಲಾಯಿಸಿದರು. ಬಳಿಕ ವೇದವ್ಯಾಸ ಕಾಮತ್, ಎಸ್.ಆರ್ ವಿಶ್ವನಾಥ್ ಸೇರಿದಂತೆ ಬಿಜೆಪಿ ಶಾಸಕರು ಮತ ಚಲಾಯಿಸಲು ಶುರು ಮಾಡಿದ್ದಾರೆ.
ಜೆಡಿಎಸ್ ವರಿಷ್ಠ ನಡೆಯಿಂದ ನೊಂದು ಪಕ್ಷದ ಚಟುವಟಿಕೆಯಿಂದಲೇ ದೂರ ಸರಿದಿರುವ ಜಿಟಿ ದೇವೇಗೌಡ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಈ ಬಗ್ಗೆ ಮೂಲಗಳಿಂದ ಮಾಹಿತಿ ಕೂಡ ಬಂದಿದ್ದು, ಜಿಟಿಡಿ ಜೆಡಿಎಸ್ಗೆ ಕೈ ಕೊಟ್ರು ಎನ್ನುವ ಚರ್ಚೆ ಜೋರಾಗಿದೆ. ಹೀಗಾಗಿ ಜೆಡಿಎಸ್ ಪಕ್ಷದಿಂದ ಜಿ.ಟಿ ದೇವೇಗೌಡ ಅವರನ್ನು ಉಚ್ಚಾಟಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
Advertisement