ಕುಮಾರಸ್ವಾಮಿಯನ್ನು CM ಮಾಡುವುದೇ ನನ್ನ ಗುರಿ: JDs ಸೇರ್ಪಡೆಯಾದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿಕೆ

ಭಾನುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀನಿವಾಸಮೂರ್ತಿ ಮತ್ತು ಅವರ ಕುಟುಂಬದವರು ಭಾಗಿಯಾಗಿದ್ದರು. ಶ್ರೀನಿವಾಸಮೂರ್ತಿ ಮತ್ತು ಅವರ ಬೆಂಬಲಿಗರು ಜೆಡಿಎಸ್‌ ಬಾವುಟವನ್ನು ಹಿಡಿದು ಪಕ್ಷ ಸೇರಿದರು.
Akhanda Srinivas Murthy rejoin JDS
ಜೆಡಿಎಸ್ ಸೇರ್ಪಡೆಯಾದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ
Updated on

ಬೆಂಗಳೂರು: ಪುಲಕೇಶಿ ನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾದರು.

ಭಾನುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀನಿವಾಸಮೂರ್ತಿ ಮತ್ತು ಅವರ ಕುಟುಂಬದವರು ಭಾಗಿಯಾಗಿದ್ದರು. ಶ್ರೀನಿವಾಸಮೂರ್ತಿ ಮತ್ತು ಅವರ ಬೆಂಬಲಿಗರು ಜೆಡಿಎಸ್‌ ಬಾವುಟವನ್ನು ಹಿಡಿದು ಪಕ್ಷ ಸೇರಿದರು.

ಪಕ್ಷ ಸೇರ್ಪಡೆಯ ನಂತರ ಮಾತನಾಡಿದ ಶ್ರೀನಿವಾಸಮೂರ್ತಿ, ‘ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ನನ್ನ ಗುರಿ. ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟಿಸುತ್ತೇನೆ’ ಎಂದರು.2013ರಲ್ಲಿ ಜೆಡಿಎಸ್ ಟಿಕೆಟ್‌ನಿಂದ ಪುಲಕೇಶಿ ನಗರದ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ, ವಿಧಾನಸಭೆ ಪ್ರವೇಶಿಸಿದ್ದರು. ನಂತರ 2018ರಲ್ಲಿ

ಕಾಂಗ್ರೆಸ್‌ ಟಿಕೆಟ್‌ನಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿದ್ದರು. 2020ರಲ್ಲಿ ನಡೆದಿದ್ದ ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ಕಾರಣ 2023ರ ಚುನಾವಣೆಯಲ್ಲಿ ಅವರಿಗೆ ಪ್ರಮುಖ ಪಕ್ಷಗಳ ಟಿಕೆಟ್ ಕೈತಪ್ಪಿತು

Akhanda Srinivas Murthy rejoin JDS
Bidadi Township: 7,481 ರಿಂದ 9,600 ಎಕರೆ ಸ್ವಾಧೀನಕ್ಕೆ ಸಂಚು, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com