ನನ್ನ ಹೆಸರಿನಲ್ಲಿರೋದು 32 ಎಕರೆ ಜಮೀನು ಮಾತ್ರ, ಇಲ್ಲಸಲ್ಲದ ಆರೋಪ ಮಾಡಿದರೆ ಕಾನೂನು ಮೂಲಕ ಉತ್ತರ: ಎಂ.ಬಿ.ಪಾಟೀಲ್'ಗೆ ಅನಿತಾ ಕುಮಾರಸ್ವಾಮಿ ಎಚ್ಚರಿಕೆ

ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚಿಸುವ ಕೀಳು ಮಟ್ಟಕ್ಕೆ ಯಾರೂ ಹೋಗಬಾರದು. ಅನಗತ್ಯವಾಗಿ ನನ್ನ ಬಗ್ಗೆ ಹಾಗೂ ನನ್ನ ಕುಟುಂಬದ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡಿದರೆ, ಅಂತಹವರಿಗೆ ಕಾನೂನು ಮೂಲಕ ಉತ್ತರ ನೀಡುತ್ತೇನೆ
Anita Kumaraswamy
ಅನಿತಾ ಕುಮಾರಸ್ವಾಮಿ
Updated on

ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್ ಅವರು ಹೇಳಿರುವಂತೆ 100 ಎಕರೆ ಜಮೀನು ನನ್ನ ಹೆಸರಿನಲ್ಲಿ ಇಲ್ಲ. ನನ್ನ ಹೆಸರಿನಲ್ಲಿರುವುದು 32 ಎಕರೆ ಜಮೀನು ಮಾತ್ರ ಎಂದು ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ತಮ್ಮ ವಿರುದ್ಧ ರಾಜಕೀಯ ದುರುದೇಶದಿಂದ ಸುಳ್ಳು ಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜಕೀಯ ಲಾಭಕ್ಕಾಗಿ ಮನೆಯವರನ್ನು ಎಳೆದು ತಂದು ಆರೋಪ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಇದೇ ವೇಳೆ ವೈಯಕ್ತಿಕ ವಿಚಾರಗಳನ್ನು ರಾಜಕೀಯಕ್ಕೆ ಎಳೆಯಬಾರದು ಎಂದು ಎಚ್ಚರಿಕೆ ನೀಡಿರುವ ಅವರು, “ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚಿಸುವ ಕೀಳು ಮಟ್ಟಕ್ಕೆ ಯಾರೂ ಹೋಗಬಾರದು. ಅನಗತ್ಯವಾಗಿ ನನ್ನ ಬಗ್ಗೆ ಹಾಗೂ ನನ್ನ ಕುಟುಂಬದ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡಿದರೆ, ಅಂತಹವರಿಗೆ ಕಾನೂನು ಮೂಲಕ ಉತ್ತರ ನೀಡುತ್ತೇನೆ ಎಂದು ಎಚ್ಚರಿಸಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ್ದ ಸಚಿವ ಎಂ.ಬಿ.ಪಾಟೀಲ್ ಅವರು, ಬಿಡದಿ ಟೌನ್‌ಶಿಪ್ ನಿರ್ಮಾಣ ವಿಚಾರದಲ್ಲಿ ಹೆಚ್.ಡಿ. ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ. ಈ ಯೋಜನೆಯನ್ನು ಸ್ವತಃ ಕುಮಾರಸ್ವಾಮಿ ಅವರೇ ಪ್ರಾರಂಭಿಸಿದ್ದರು. ಹಾಗಿದ್ದ ಮೇಲೆ ಈಗೇಕೆ ವಿರೋಧ ಮಾಡುತ್ತಿದ್ದಾರೆ? ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರಿಗೆ ಸೇರಿದ ಸುಮಾರು 100 ಎಕರೆ ಜಮೀನು ಸಹ ಈ ಯೋಜನೆಯ ವ್ಯಾಪ್ತಿಯಲ್ಲಿ ಬರುತ್ತದೆ. ಈಗ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ನಾಟಕ ಎಂದು ಟೀಕಿಸಿದರು.

Anita Kumaraswamy
ಬಿಡದಿ ಟೌನ್ ಶಿಪ್ ಗೆ HDK ವಿರೋಧ ಶುದ್ಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿಯದ್ದು 100 ಎಕರೆ ಜಮೀನಿದೆ; ಎಂ.ಬಿ ಪಾಟೀಲ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com