ಹಳೇ ಮೈಸೂರು ಭಾಗದವರನ್ನೇ ಒಕ್ಕಲಿಗರು ಅನ್ನೋದು, 'ಮಂಗಳೂರು ಕಡೆಯವರು ದೊಡ್ಡ ಗೌಡರಲ್ಲ': ಸದಾನಂದ ಗೌಡ ವಿರುದ್ಧ ಶಾಸಕ ಎಸ್. ಆರ್. ವಿಶ್ವನಾಥ್ ವಾಗ್ದಾಳಿ

ಸದಾನಂದ ಗೌಡರದ್ದು ವಕ್ರ ಬುದ್ಧಿ, ಅವರು ಕೇಂದ್ರ ಸಚಿವರಾಗಿ, ಮುಖ್ಯಮಂತ್ರಿಗಳಾಗಿದ್ದಾಗ ನಾವು ಅವರಿಗಾಗಿ ಗಂಟೆಗಟ್ಟಲೆ ಬಾಗಿಲು ಕಾಯ್ದು ನಿಲ್ಲುತ್ತಿದ್ದೆವು. ಆದರೆ ಇಂದು ಅವರ ವರ್ತನೆ ಪಕ್ಷಕ್ಕೆ ಶೋಭೆ ತರುವಂತದ್ದಲ್ಲ.
ಹಳೇ ಮೈಸೂರು ಭಾಗದವರನ್ನೇ ಒಕ್ಕಲಿಗರು ಅನ್ನೋದು, 'ಮಂಗಳೂರು ಕಡೆಯವರು ದೊಡ್ಡ ಗೌಡರಲ್ಲ': ಸದಾನಂದ ಗೌಡ ವಿರುದ್ಧ ಶಾಸಕ ಎಸ್. ಆರ್. ವಿಶ್ವನಾಥ್ ವಾಗ್ದಾಳಿ
Updated on

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಮತ್ತೊಮ್ಮೆ ಸ್ಫೋಟಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಹಾಗೂ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ನಡುವಿನ ವಾಕ್ಸಮರ ತಾರಕಕ್ಕೇರಿದೆ.

ಕ್ರಾಸ್ ವೋಟಿಂಗ್ (ಅಡ್ಡ ಮತದಾನ) ಹಾಗೂ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಶಾಸಕ ಎಸ್. ಆರ್. ವಿಶ್ವನಾಥ್ ಅವರು ಸದಾನಂದ ಗೌಡರ ವಿರುದ್ಧ "ಅವರದ್ದು ವಕ್ರ ಬುದ್ಧಿ" ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದಾನಂದ ಗೌಡರ ನಡೆ ಹಾಗೂ ಹೇಳಿಕೆಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ನೀವು ಒಬ್ಬ ಹಿರಿಯ ಬಿಜೆಪಿ ನಾಯಕರಾಗಿದ್ದುಕೊಂಡು ಕಾಂಗ್ರೆಸ್‌ನವರು ಆಯೋಜಿಸಿದ್ದ ಸಭೆ ಅಥವಾ ಕಾರ್ಯಕ್ರಮಕ್ಕೆ ಹೇಗೆ ಹೋಗುತ್ತೀರಿ? ನಾವು ಹೋಗಬೇಡಿ ಎಂದು ಮನವಿ ಮಾಡಿದರೂ ಕೇಳಲಿಲ್ಲ.

ಹಳೇ ಮೈಸೂರು ಭಾಗದವರನ್ನೇ ಒಕ್ಕಲಿಗರು ಅನ್ನೋದು, 'ಮಂಗಳೂರು ಕಡೆಯವರು ದೊಡ್ಡ ಗೌಡರಲ್ಲ': ಸದಾನಂದ ಗೌಡ ವಿರುದ್ಧ ಶಾಸಕ ಎಸ್. ಆರ್. ವಿಶ್ವನಾಥ್ ವಾಗ್ದಾಳಿ
'ಪುತ್ತೂರು ಬಿಜೆಪಿಯ ಶುದ್ಧೀಕರಣ ಕೆಲಸ ನನ್ನ ಲೆವೆಲಿದ್ದು ಅಲ್ಲ': ನನ್ನ ಮಾತನ್ನು ಅಪಾರ್ಥ ಮಾಡಲಾಗಿದೆ ಎಂದ ಮಾಜಿ ಸಿಎಂ ಸದಾನಂದ ಗೌಡ

"ಅವರ ಬುದ್ಧಿಯೇ ವಕ್ರ ಬುದ್ಧಿ. ಅವರು ಕೇಂದ್ರ ಸಚಿವರಾಗಿ, ಮುಖ್ಯಮಂತ್ರಿಗಳಾಗಿದ್ದಾಗ ನಾವು ಅವರಿಗಾಗಿ ಗಂಟೆಗಟ್ಟಲೆ ಬಾಗಿಲು ಕಾಯ್ದು ನಿಲ್ಲುತ್ತಿದ್ದೆವು. ಆದರೆ, ಇಂದು ಅವರ ವರ್ತನೆ ಪಕ್ಷಕ್ಕೆ ಶೋಭೆ ತರುವಂತದ್ದಲ್ಲ" ಎಂದು ಆಕ್ರೋಶ ಹೊರಹಾಕಿದ್ದಾರೆ.

ಇವತ್ತು ಅವರಿಗೆ ದಿಢೀರನೆ ಜಾತಿ ಅಭಿಮಾನ ಬಂದುಬಿಟ್ಟಿದೆ. ಸದಾನಂದ ಗೌಡರು ಮಂಗಳೂರು ಕಡೆಯವರಾಗಿದ್ದು, ಸಾಮಾನ್ಯವಾಗಿ ಹಳೇ ಮೈಸೂರು ಭಾಗದವರನ್ನು ಮಾತ್ರ ಒಕ್ಕಲಿಗರು ಎನ್ನಲಾಗುತ್ತದೆ, ಅವರೇನೂ ದೊಡ್ಡ ಗೌಡರಲ್ಲ" ಎಂದು ಲೇವಡಿ ಮಾಡಿದ್ದಾರೆ.

ಕೆಂಪೇಗೌಡ ಜಯಂತಿಗೆ ಸಂಬಂಧಿಸಿದಂತೆ ತಾವು ಆಹ್ವಾನ ನೀಡಿದ ತಕ್ಷಣ ಮುಖ್ಯಮಂತ್ರಿಗಳು ಬಂದು ಸನ್ಮಾನ ಸ್ವೀಕರಿಸಿದರು. ಆದರೆ, ಸದಾನಂದ ಗೌಡರು ಮಾತ್ರ ಬೇರೆಯದೇ ರೀತಿ ವರ್ತಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಕೆಲವು ಶಾಸಕರು ಕ್ರಾಸ್ ವೋಟಿಂಗ್ ಮಾಡಿದ್ದರ ಕುರಿತು ನನಗೆ ಮೊದಲೇ ಮಾಹಿತಿ ಇತ್ತು ಮತ್ತು ಈ ಬಗ್ಗೆ ರಾಜ್ಯ ನಾಯಕತ್ವಕ್ಕೆ ಎಚ್ಚರಿಕೆ ನೀಡಿದ್ದೆ ಎಂದು ಸದಾನಂದ ಗೌಡರು ಬಹಿರಂಗ ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಪಕ್ಷದ ಆಂತರಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com