VB-G RAM G ಯೋಜನೆಗೆ ಅನುದಾನ ನೀಡಿದ ಸರ್ಕಾರ: ಅರ್ಥವಿಲ್ಲದ ಬಜೆಟ್ ಎಂದು ಪ್ರಹ್ಲಾದ್ ಜೋಶಿ ಟೀಕೆ

ಈ ಬಜೆಟ್‌ನಲ್ಲಿ ಆರ್ಥಿಕ ವೃದ್ಧಿ ಅಥವಾ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಮೂಲಭೂತ ಪ್ರಸ್ತಾವನೆಗಳಿಲ್ಲ. ಗ್ಯಾರಂಟಿ ಯೋಜನೆಗಳ ಮೇಲೆ ಆಧಾರಿತವಾಗಿ ಸಾಲದ ಹೊರೆ ಹೆಚ್ಚಿಸುವ ಬಜೆಟ್ ಇದಾಗಿದೆ.
Siddaramaiah And pralhad Joshi
ಸಿದ್ದರಾಮಯ್ಯ ಮತ್ತು ಪ್ರಹ್ಲಾದ್ ಜೋಶಿ
Updated on

ಬೆಂಗಳೂರು: ಬಜೆಟ್‌ನಲ್ಲಿ VB-G RAM G ಯೋಜನೆಗೆ ಅನುದಾನ ನೀಡದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಜೆಟ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಅಭಿವೃದ್ಧಿಗೆ ಪ್ರಮುಖವಾಗಿದ್ದು, 125 ದಿನಗಳ ಉದ್ಯೋಗ ಒದಗಿಸುವ ಯೋಜನೆಯಾಗಿದೆ. ಸರ್ಕಾರವು ಈ ಯೋಜನೆಗೆ ಅನುದಾನ ಘೋಷಣೆ ಮಾಡದಿರುವುದು ಅಭಿವೃದ್ಧಿ ವಿರೋಧಿ ನೀತಿಗಳನ್ನು ಪ್ರತಿಬಿಂಬಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಈ ಬಜೆಟ್‌ನಲ್ಲಿ ಆರ್ಥಿಕ ವೃದ್ಧಿ ಅಥವಾ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಮೂಲಭೂತ ಪ್ರಸ್ತಾವನೆಗಳಿಲ್ಲ. ಗ್ಯಾರಂಟಿ ಯೋಜನೆಗಳ ಮೇಲೆ ಆಧಾರಿತವಾಗಿ ಸಾಲದ ಹೊರೆ ಹೆಚ್ಚಿಸುವ ಬಜೆಟ್ ಇದಾಗಿದೆ ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ವರ್ಷಕ್ಕಿಂತ ಸುಮಾರು 40 ಸಾವಿರ ಕೋಟಿ ರೂ. ಹೆಚ್ಚಿಸಿ ಬಜೆಟ್ ಗಾತ್ರವನ್ನು ವಿಸ್ತರಿಸಿದ್ದರೂ, ರಾಜ್ಯದ ಒಟ್ಟು ಸಾಲ 8.24 ಲಕ್ಷ ಕೋಟಿ ರೂ. ತಲುಪಿರುವುದು ರಾಜ್ಯದ ಆರ್ಥಿಕ ಇತಿಹಾಸದಲ್ಲಿ ದಾಖಲೆಯಾಗಿದೆ. ಸರ್ಕಾರ ತನ್ನ ಆರ್ಥಿಕ ದುರುಪಯೋಗವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರವನ್ನು ದೂಷಿಸುತ್ತಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಸರ್ಕಾರದ ಗ್ಯಾರಂಟಿ ಯೋಜನೆಯಾದ ಯುವ ನಿಧಿಗೆ ಈ ಬಜೆಟ್‌ನಲ್ಲಿ ಅನುದಾನ ನೀಡದಿರುವುದನ್ನೂ ಅವರು ಪ್ರಶ್ನಿಸಿದ್ದು, ಈ ಮೂಲಕ ಸರ್ಕಾರ ಕ್ರಮೇಣ ಗ್ಯಾರಂಟಿ ಯೋಜನೆಗಳನ್ನು ಕೈಬಿಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

Siddaramaiah And pralhad Joshi
ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ; ಪ್ರಹ್ಲಾದ್ ಜೋಶಿ

ಇನ್ನೊಂದೆಡೆ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಯಾವುದೇ ಮಹತ್ವದ ಆರ್ಥಿಕ ಪ್ರಸ್ತಾವನೆಗಳಿಲ್ಲ ಎಂದು ಟೀಕಿಸಿದ್ದಾರೆ.

ಕೇಂದ್ರ ಸರ್ಕಾರದ ಅನುಮತಿ ಅಗತ್ಯವಿದೆ ಎಂದು ಹೇಳಿ ಸರ್ಕಾರ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಬಜೆಟ್ ಅನ್ನು ‘ದಿಕ್ಕಿಲ್ಲದ, ಶೂನ್ಯ ಪ್ರಗತಿಯ ಬಜೆಟ್’ ಎಂದು ಕರೆದಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಈ ಬಜೆಟ್ ರಾಜ್ಯವನ್ನು ಸಾಲದ ಬಲೆಗೆ ತಳ್ಳುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಸರ್ಕಾರ 1.32 ಲಕ್ಷ ಕೋಟಿ ರೂ. ಸಾಲ ಪಡೆದು, ಸುಮಾರು 25 ಸಾವಿರ ಕೋಟಿ ರೂ. ಹೊಸ ತೆರಿಗೆಗಳನ್ನು ವಿಧಿಸಿ, 32 ಸಾವಿರ ಕೋಟಿ ರೂ. ಕೊರತೆ ಬಜೆಟ್ ಮಂಡಿಸಿದೆ ಎಂದು ಹೇಳಿದರು.

ನೀರಾವರಿ ಕ್ಷೇತ್ರಕ್ಕೆ ಕೇವಲ 22 ಸಾವಿರ ಕೋಟಿ ರೂ. ಮಾತ್ರ ಮೀಸಲಿಡಲಾಗಿದೆ. ವಿಶೇಷವಾಗಿ ಕೃಷ್ಣಾ ಮೇಲ್ದಂಡೆ ಯೋಜನೆಗೆ ಕನಿಷ್ಠ 25 ಸಾವಿರ ಕೋಟಿ ರೂ. ನೀಡಬೇಕಾಗಿದ್ದರೂ ಯಾವುದೇ ಅನುದಾನ ನೀಡಿಲ್ಲ ಎಂದು ಟೀಕಿಸಿದರು.

ಆರೋಗ್ಯ ಮತ್ತು ಗ್ರಾಮೀಣ ಅಭಿವೃದ್ಧಿ ಕ್ಷೇತ್ರಗಳಿಗೆ ನೀಡಿರುವ ಅನುದಾನವೂ ಅತ್ಯಲ್ಪವಾಗಿದೆ, ಸರ್ಕಾರದ ಈ ಬಜೆಟ್ ರಾಜ್ಯದ ಆರ್ಥಿಕ ಬೆಳವಣಿಗೆಗೆ ಸಹಾಯ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com