ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಜೆಡಿಎಸ್​​ಗೆ 1 ಸೀಟು!

ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸುಶೀಲ್ ನಮೋಶಿ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕೆ.ಎಂ.ಸುರೇಶ್ ಅವರಿಗೆ ಟಿಕೆಟ್ ನೀಡಲಾಗಿದೆ.
BJP-JDS (file pic)
ಬಿಜೆಪಿ, ಜೆಡಿಎಸ್ ಸಾಂದರ್ಭಿಕ ಚಿತ್ರonline desk
Updated on

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನವೆಂಬರ್ 2026 ರಲ್ಲಿ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷ ಮಂಗಳವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಒಟ್ಟು ನಾಲ್ಕು ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್​​ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ ಮೂರು ಈಶಾನ್ಯ ಶಿಕ್ಷಕರ ಕ್ಷೇತ್ರ, ಪೂರ್ವ ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪ್ರಕಟಿಸಿದೆ.

ಇನ್ನುಳಿದ 1 ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದೆ. ಇದರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಹಾಗೂ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೂ ತಮ್ಮ ಮೈತ್ರಿಯನ್ನು ಮುಂದುವರೆಸಿದೆ.

BJP-JDS (file pic)
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸುಶೀಲ್ ನಮೋಶಿ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕೆ.ಎಂ.ಸುರೇಶ್ ಅವರಿಗೆ ಟಿಕೆಟ್ ನೀಡಲಾಗಿದೆ.

ಇನ್ನುಳಿದ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದ್ದು, ಜೆಡಿಎಸ್ ಯಾರನ್ನು ಕಣಕ್ಕಿಳಿಸಲಿದೆ ಎನ್ನುವುದೇ ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com