ಆಪರೇಷನ್‌ ಕಮಲದ ಆತಂಕ: ಒಡಿಶಾ ಕಾಂಗ್ರೆಸ್‌ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌; ಅಖಾಡಕ್ಕಿಳಿದ ಡಿ.ಕೆ ಶಿವಕುಮಾರ್; Video

ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ.
Odisha Congress MLAs landed at Kempegowda international airport in Bengaluru on Thursday night.
ಒಡಿಶಾ ಕಾಂಗ್ರೆಸ್ ಶಾಸಕರು ಗುರುವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.
Updated on

ಬೆಂಗಳೂರು: ರಾಜ್ಯ ಚುನಾವಣೆಗೆ ಮೊದಲೇ ಒಡಿಶಾ ಕಾಂಗ್ರೆಸ್‌ನಲ್ಲಿ ಆಪರೇಷನ್‌ ಕಮಲದ ಭೀತಿ ಎದುರಾಗಿದ್ದು 14 ಮಂದಿ ಕಾಂಗ್ರೆಸ್‌ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ.

ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ.

ಗುರುವಾರ ರಾತ್ರಿ ಭುವನೇಶ್ವರದಿಂದ ಇಂಡಿಗೋ ವಿಮಾನದ ಮೂಲಕ ಒಡಿಶಾದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬೆಂಗಳೂರಿಗೆ ಆಗಮಿಸಿದರು. ರಾತ್ರಿ ಸುಮಾರು 11 ಗಂಟೆ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎಬಿ) ಬಂದ ಶಾಸಕರನ್ನು ಡಿಕೆ ಶಿವಕುಮಾರ್ ಆಪ್ತರು ಸ್ವಾಗತಿಸಿದರು.

ವಿಮಾನ ನಿಲ್ದಾಣದಿಂದ ಪೊಲೀಸ್ ಬಂದೋಬಸ್ತ್ ಮತ್ತು ಎಸ್ಕಾರ್ಟ್ ವ್ಯವಸ್ಥೆಯೊಂದಿಗೆ ಶಾಸಕರನ್ನು ನೇರವಾಗಿ ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರಿಗೆ ವಿಶೇಷ ವಸತಿ ವ್ಯವಸ್ಥೆ ಮಾಡಲಾಗಿದೆ.

ಈ ತಂಡದಲ್ಲಿ ಶಾಸಕರಾದ ಮಂಗು ಖಿಲಾ, ಅಪ್ಪಲ ಸ್ವಾಮಿ, ರಾಜನ್ ಎಕ್ಕಾ, ಅಶೋಕ್ ಕುಮಾರ್ ಸೇರಿದಂತೆ ಹಲವು ನಾಯಕರು ಇದ್ದಾರೆ. ಜೊತೆಗೆ ಮಾಜಿ ಸಂಸದ ಭಕ್ತ ಚರಣ್ ದಾಸ್ ಹಾಗೂ ಕಾಂಗ್ರೆಸ್ ವಕ್ತಾರ ದುರ್ಗಾ ಪ್ರಸಾದ್ ಪಾಂಡಾ ಸೇರಿ ಒಟ್ಟು ಸುಮಾರು 14 ಮಂದಿ ಬೆಂಗಳೂರಿಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

ರೆಸಾರ್ಟ್‌ಗೆ ಆಗಮಿಸಿದ ಒಡಿಶಾ ಶಾಸಕರನ್ನು ರಾಜ್ಯ ಕಾಂಗ್ರೆಸ್‌ನ ಸ್ಥಳೀಯ ಮುಖಂಡರು ಸ್ವಾಗತ ಮಾಡಿದರು. ಶಾಸಕರು ತಂಗಿರುವ ರೆಸಾರ್ಟ್‌ ಸುತ್ತಲೂ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ.

ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಬಿಜೆಪಿಯ ‘ಆಪರೇಷನ್ ಕಮಲ’ ಪ್ರಯತ್ನವನ್ನು ತಡೆಯಲು ಈ ತಂತ್ರ ರೂಪಿಸಲಾಗಿದೆ.

Odisha Congress MLAs landed at Kempegowda international airport in Bengaluru on Thursday night.
ಡಿ.ಕೆ ಶಿವಕುಮಾರ್ ಔತಣಕೂಟ: 2028ರ ವಿಧಾನಸಭೆ ಚುನಾವಣೆ ಗೆಲುವಿಗೆ ಸಿಎಂ-ಡಿಸಿಎಂ ಒಗ್ಗಟ್ಟು ಪ್ರದರ್ಶನ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com