ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಘೋಷಣೆ; ಟಿಕೆಟ್ ಗಾಗಿ ನಾರಾಯಣಸ್ವಾಮಿ ಲಾಬಿ; ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ?

ಲಿಂಗಾಯತ ಸಮುದಾಯಕ್ಕೆ ಸೇರಿದ ಶಿಕ್ಷಣ ತಜ್ಞ ಕೆ.ಎಂ. ಸುರೇಶ್ ಅವರನ್ನು ಬಿಜೆಪಿ ಈಗಾಗಲೇ ಅಭ್ಯರ್ಥಿಯಾಗಿ ಘೋಷಿಸಿದ್ದರೂ, ಒಕ್ಕಲಿಗ ಸಮುದಾಯಕ್ಕೆ ಸೇರಿದ ಮಾಜಿ ಎಂಎಲ್‌ಸಿ ವೈ.ಎ. ನಾರಾಯಣಸ್ವಾಮಿ ಟಿಕೆಟ್‌ಗಾಗಿ ಲಾಬಿ ಮುಂದುವರಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಘೋಷಣೆ; ಟಿಕೆಟ್ ಗಾಗಿ ನಾರಾಯಣಸ್ವಾಮಿ ಲಾಬಿ; ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ?
Updated on

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಚರ್ಚಿಸಿ ಮೂರು ಪ್ರಮುಖ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಲಿಂಗಾಯತ ಸಮುದಾಯಕ್ಕೆ ಸೇರಿದ ಶಿಕ್ಷಣ ತಜ್ಞ ಕೆ.ಎಂ. ಸುರೇಶ್ ಅವರನ್ನು ಬಿಜೆಪಿ ಈಗಾಗಲೇ ಅಭ್ಯರ್ಥಿಯಾಗಿ ಘೋಷಿಸಿದ್ದರೂ, ಒಕ್ಕಲಿಗ ಸಮುದಾಯಕ್ಕೆ ಸೇರಿದ ಮಾಜಿ ಎಂಎಲ್‌ಸಿ ವೈ.ಎ. ನಾರಾಯಣಸ್ವಾಮಿ ಟಿಕೆಟ್‌ಗಾಗಿ ಲಾಬಿ ಮುಂದುವರಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಸೇರಿದಂತೆ ಬಿಜೆಪಿ ನಾಯಕತ್ವವನ್ನು ಮನವೊಲಿಸಲು ನಾರಾಯಣಸ್ವಾಮಿ ಶ್ರಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುರೇಶ್ ಮತ್ತು ಚಿದಾನಂದ ಗೌಡ ಪ್ರತಿನಿಧಿಸುವ ಸ್ಥಾನ ಕೈತಪ್ಪಿ ಕಾಂಗ್ರೆಸ್ ಮೊದಲ ಬಾರಿಗೆ ಆ ಸ್ಥಾನವನ್ನು ಗೆಲ್ಲಲು ಅವಕಾಶ ನೀಡಬಹುದು ಎಂದು ಹೇಳಲಾಗುತ್ತಿದೆ.

ಸುರೇಶ್ ಸೇರಿ ಲಿಂಗಾಯತ ಸಮುದಾಯಕ್ಕೆ ಸೇರಿದ ಮೂರು ಅಭ್ಯರ್ಥಿಗಳಿಗೆ ಬಿಜೆಪಿ ಪರಿಷತ್ ಸ್ಥಾನಗಳನ್ನು ನೀಡಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರ ಶಶಿಲ್ ಜಿ. ನಮೋಶಿ ಮತ್ತು ಪಶ್ಚಿಮ ಪದವೀಧರ ಕ್ಷೇತ್ರ ಎಸ್.ವಿ. ಸಂಕನೂರ್‌ಗೆ. ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಬಿಜೆಪಿಯ ಮೈತ್ರಿಕೂಟದ ಪಾಲುದಾರ ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ.

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಘೋಷಣೆ; ಟಿಕೆಟ್ ಗಾಗಿ ನಾರಾಯಣಸ್ವಾಮಿ ಲಾಬಿ; ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ?
ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಜೆಡಿಎಸ್​​ಗೆ 1 ಸೀಟು!

ಆಗ್ನೇಯ ಪದವೀಧರರ ಸ್ಥಾನದಲ್ಲಿ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಯ ಐದು ಜಿಲ್ಲೆಗಳ ಒಟ್ಟು 1.9 ಲಕ್ಷ ಮತದಾರರಲ್ಲಿ 50,000 ಒಕ್ಕಲಿಗರಮತಗಳು ಮತ್ತು ಲಿಂಗಾಯತರು 35,000 ಮತಗಳನ್ನು ಹೊಂದಿದ್ದಾರೆ.

ಕ್ಷೇತ್ರದಲ್ಲಿ 35,000 ಒಬಿಸಿ, 22,000 ಎಸ್‌ಟಿ, 50,000 ಎಸ್‌ಸಿ ಮತ್ತು 7,000 ಇತರರಿದ್ದಾರೆ ಎಂದು ಮೂಲಗಳು ತಿಳಿಸಿವೆ. ತುಮಕೂರಿನ ವೀರಶೈವ-ಲಿಂಗಾಯತ ಶಶಿ ಹುಲಿಕುಂಟೆಮಠ ಅವರನ್ನು ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಘೋಷಿಸಿರುವುದರಿಂದ ಲಿಂಗಾಯತ ಮತಗಳು ಅವರ ನಡುವೆ ಹಂಚಿ ಹೋಗಬಹುದು ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಹಿಂದ ನಾಯಕ ಎಂಬ ನೆರವಿನಿಂದ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೂಲಕ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಕ್ಕಲಿಗ ಸಮುದಾಯಗಳ ಮತಗಳನ್ನು ಸೆಳೆಯಲು ಹುಲಿಕುಂಟೆಮಠ ಅವರು ಪ್ರಯತ್ನಿಸಬಹುದು. ಹುಲ್ಕುಂಟೆಮಠ ಅವರು ದಾವಣಗೆರೆಯ ಸುರೇಶ್ ಅವರಿಗಿಂತ ಹೆಚ್ಚಿನ ಪ್ರಾಬಲ್ಯ ಹೊಂದಿದ್ದಾರೆ.

ಶಿಕ್ಷಕರ ಕ್ಷೇತ್ರದಿಂದ ಎರಡು ಬಾರಿ ಎಂಎಲ್‌ಸಿ ಆಗಿರುವ ನಾರಾಯಣಸ್ವಾಮಿ ಅವರು ಬಿಜೆಪಿ ಅಭ್ಯರ್ಥಿಯನ್ನು ಬದಲಾಯಿಸದಿದ್ದರೆ ಈ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಯೋಜಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ಈ ಹಿಂದೆ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದಾರೆ ಮತ್ತು ಒಂದು ದಶಕಕ್ಕೂ ಹೆಚ್ಚು ಕಾಲ ಮತದಾರರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com