ಉಪ ಚುನಾವಣೆ 2026: ಸಿದ್ದರಾಮಯ್ಯ ಸಂಧಾನ ಯಶಸ್ವಿ, ಬಾಗಲಕೋಟೆ ಕಾಂಗ್ರೆಸ್ ಕದನಕ್ಕೆ ಕೊನೆಗೂ ತೆರೆ!

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ 'ಕುಟುಂಬ ರಾಜಕಾರಣ'ದ ಬಿಸಿ ತಟ್ಟಿತ್ತು.
CM Siddaramaiah Confirms Congress Ticket To HY Meti Family
ಮೇಟಿ ಕುಟುಂಬಸ್ಥರೊಂದಿಗೆ ಸಿಎಂ ಸಿದ್ದರಾಮಯ್ಯ ಭೇಟಿ
Updated on

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕದ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರಿದ್ದು, ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂಬುದು ಕೊನೆಗೂ ಸ್ಪಷ್ಟವಾಗಿದೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ 'ಕುಟುಂಬ ರಾಜಕಾರಣ'ದ ಬಿಸಿ ತಟ್ಟಿತ್ತು. ಟಿಕೆಟ್ ಗಾಗಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ಕುಟುಂಬದಲ್ಲಿ ಟಿಕೆಟ್‌ಗಾಗಿ ಭಿನ್ನಮತ ಸ್ಪೋಟಗೊಂಡಿತ್ತು.

ಮೇಟಿ ಅವರ ಕಿರಿಯ ಪುತ್ರಿ ಮಹಾದೇವಿ ಮೇಟಿ, ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ ನಡುವೆ ಟಿಕಟ್ ಗಾಗಿ ಪೈಪೋಟಿ ಏರ್ಪಟ್ಟಿತ್ತು. ಮುಖ್ಯವಾಗಿ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವುದಾಗಿ ಮಹಾದೇವಿ ಬಹಿರಂಗ ಎಚ್ಚರಿಕೆ ನೀಡಿದ್ದರು.

ಅಲ್ಲದೇ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದ ಅವರ ಅಭಿಮಾನಿಗಳು ‘ಮಾರ್ಚ್ 20 ರಂದು ಮಹಾದೇವಿ ಮೇಟಿ ಅವರು ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವ ಪೋಸ್ಟ್ ಕಾಂಗ್ರೆಸ್ ಪಕ್ಷದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.

CM Siddaramaiah Confirms Congress Ticket To HY Meti Family
ಕರ್ನಾಟಕ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣ ಏಪ್ರಿಲ್ 9ರಂದು ಮತದಾನ, ಮೇ 4 ಫಲಿತಾಂಶ

ಸಿಎಂ ಸಿದ್ದರಾಮಯ್ಯ ಸಂಧಾನ

ಇನ್ನು ಅತ್ತ ಮೇಟಿ ಕುಟುಂಬದಲ್ಲಿ ಬಂಡಾಯ ಸ್ಫೋಟವಾಗುತ್ತಲೇ ಇತ್ತ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಅವರು ಮೇಟಿ ಕುಟುಂಬಸ್ಥರೊಂದಿಗೆ ಸಂಧಾನ ಸಭೆ ನಡೆಸಿದರು. ಮೇಟಿ ಕುಟುಂಬದ ಸದಸ್ಯರನ್ನು ಬೆಂಗಳೂರಿಗೆ ಕರೆಸಿಕೊಂಡ ಸಿಎಂ ಅವರನ್ನು ಮನವೊಲಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ.

ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ, ಮಹಾದೇವಿ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಇಂದು ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಮೇಟಿ ಕುಟುಂಬಕ್ಕೆ ಟಿಕೆಟ್ ನೀಡುವ ಬಗ್ಗೆ ಫೈನಲ್ ಆಗಿದೆ.

ನಾಲ್ವರಲ್ಲಿ ಒಬ್ಬರಿಗೆ ಮಾತ್ರ ಟಿಕೆಟ್

ಸಂಧಾನ ವೇಳೆ ನಾಲ್ವರಲ್ಲಿ ಒಬ್ಬರಿಗೆ ನೀಡಿದರೆ ಉಳಿದವರು ಪಕ್ಷಕ್ಕೆ ಕೆಲಸ ಮಾಡಬೇಕೆಂದು ಸಿದ್ದರಾಮಯ್ಯ ಸಭೆಯಲ್ಲಿ ಖಡಕ್ ಆಗಿ ಹೇಳಿದ್ದಾರೆ. ಇದಕ್ಕೆ ಮೇಟಿ ಮಕ್ಕಳು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಮೇಟಿ ಕುಟುಂಬಕ್ಕೆ ಎನ್ನುವುದು ಸ್ಪಷ್ಟವಾಗಿದೆ.

ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ಬಾಗಲಕೋಟೆಯಲ್ಲಿ ಮೇಟಿ ಕುಟುಂಬದವರು ಟಿಕೆಟ್ ಕೇಳುತ್ತಿದ್ದಾರೆ. ಮಲ್ಲಿಕಾರ್ಜುನ, ಉಮೇಶ್, ಮಹದೇವಿ ಟಿಕೆಟ್ ಕೇಳುತ್ತಿದ್ದಾರೆ. ಯಾರಿಗೆ ಟಿಕೆಟ್ ಕೊಟ್ರೂ ಒಟ್ಟಿಗೆ ಕೆಲಸ ಮಾಡಬೇಕು ಎಂದಿದ್ದೇನೆ. ಅದಕ್ಕೆ ಮಲ್ಲಿಕಾರ್ಜುನ, ಉಮೇಶ್, ಮಹದೇವಿ ಒಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಅಂದಹಾಗೆ ಏಪ್ರಿಲ್ 9ರಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ.

CM Siddaramaiah Confirms Congress Ticket To HY Meti Family
ಕರ್ನಾಟಕ ಉಪ ಚುನಾವಣೆ: ಟಿಕೆಟ್​​ ಫೈಟ್ ಜೋರು​​; 'ಕೈ-ಕಮಲ' ಕುತೂಹಲ; ಮೇಟಿ, ಶಾಮನೂರು ಕುಟುಂಬಸ್ಥರಿಗೆ ಮಣೆ?

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com