ದೇವೇಗೌಡ-ಕುಮಾರಸ್ವಾಮಿ ಅವರಿಗೆ ವಿಶಾಲ ಹೃದಯ ಇರಲಿಲ್ಲ; ಅವರನ್ನು ಪಿಎಂ-ಸಿಎಂ ಮಾಡಿದ್ದು ನಮ್ಮ ಪಕ್ಷ: ಡಿ.ಕೆ‌ ಶಿವಕುಮಾರ್

ದೇವೇಗೌಡರನ್ನು ಪ್ರಧಾನಿ ಮಾಡಿದ್ದು ಹಾಗೂ ಅವರ ಮಗ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್ ಪಕ್ಷ. ನಮ್ಮ ಪಕ್ಷ ಅವರಿಗೆ ಎಲ್ಲಾ ಅವಕಾಶಗಳನ್ನು ನೀಡಿದೆ" ಎಂದರು‌. ಅವರುಗಳು ಕೊಟ್ಟಂತಹ ಸ್ಥಾನವನ್ನು ನಿಭಾಯಿಸುವ ಸಾಮರ್ಥ್ಯ ಮತ್ತು ಧೈರ್ಯ ಎರಡನ್ನೂ ಹೊಂದಿರಲಿಲ್ಲ‌.
DK Shivakumar
ಡಿ.ಕೆ ಶಿವಕುಮಾರ್
Updated on

ನವದೆಹಲಿ: ಕಾಂಗ್ರೆಸ್ ಪಕ್ಷವು ಜಾತ್ಯತೀತ ತತ್ವ ಉಳಿಸಬೇಕು ಎಂಬ ಕಾರಣಕ್ಕೆ ದೇವೇಗೌಡರನ್ನು ಪ್ರಧಾನಿ ಮಾಡಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದೆವು. ನಮ್ಮ ಪಕ್ಷ ಅವರಿಗೆ ಎಲ್ಲಾ ಅವಕಾಶಗಳನ್ನು ನೀಡಿದೆ. ಆದರೆ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ವಿಶಾಲ ಹೃದಯ ಅವರಿಗೆ ಇರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ -ಜೆಡಿಎಸ್‌ ಸಂಬಂಧ ಹೇಳಿಕೆ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಟ್ಟಂತಹ ಸ್ಥಾನವನ್ನು ನಿಭಾಯಿಸುವ ಸಾಮರ್ಥ್ಯ, ಧೈರ್ಯ ಎರಡನ್ನೂ ಅವರಿಬ್ಬರು ಹೊಂದಿರಲಿಲ್ಲ‌. ಮೈತ್ರಿಯನ್ನು ಸಾವಧಾನ, ಸಂತೋಷದಿಂದ ಮುನ್ನಡೆಸುವುದು ಅವರ ಕರ್ತವ್ಯವಾಗಿತ್ತು. ಜೊತೆಯಾಗಿ ಒಯ್ಯದ್ದಕ್ಕೆ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದರು.

ದೇವೇಗೌಡರನ್ನು ಪ್ರಧಾನಿ ಮಾಡಿದ್ದು ಹಾಗೂ ಅವರ ಮಗ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್ ಪಕ್ಷ. ನಮ್ಮ ಪಕ್ಷ ಅವರಿಗೆ ಎಲ್ಲಾ ಅವಕಾಶಗಳನ್ನು ನೀಡಿದೆ" ಎಂದರು‌. ಅವರುಗಳು ಕೊಟ್ಟಂತಹ ಸ್ಥಾನವನ್ನು ನಿಭಾಯಿಸುವ ಸಾಮರ್ಥ್ಯ ಮತ್ತು ಧೈರ್ಯ ಎರಡನ್ನೂ ಹೊಂದಿರಲಿಲ್ಲ‌.

ಮೈತ್ರಿಯನ್ನು ಸಾವಧಾನದಿಂದ ಹಾಗೂ ಸಂತೋಷದಿಂದ ಮುನ್ನಡೆಸಿಕೊಂಡು ಹೋಗುವುದು ಅವರ ಕರ್ತವ್ಯವಾಗಿತ್ತು. ಜೊತೆಯಾಗಿ ತೆಗೆದುಕೊಂಡು ಹೋಗದ ಕಾರಣಕ್ಕೆ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದರು.

DK Shivakumar
ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಅಭ್ಯರ್ಥಿಗಳನ್ನು ಎರಡು-ಮೂರು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ದಾವಣಗೆರೆ ಟಿಕೆಟ್ ವಿಚಾರವಾಗಿ ಗೊಂದಲ ಉಂಟಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಹಾಗೂ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಿದ್ದು, ವರದಿ ಇನ್ನೂ ಬಂದಿಲ್ಲ. ಮುಖ್ಯಮಂತ್ರಿಗಳು ಎಚ್.ವೈ.ಮೇಟಿ ಅವರ ಕುಟುಂಬದವರನ್ನು ಕರೆಸಿ ಚರ್ಚೆ ಮಾಡಿದ್ದಾರೆ.

ದಾವಣಗೆರೆ ಚುನಾವಣಾ ಆಕಾಂಕ್ಷಿಗಳು ನನ್ನನ್ನು ಭೇಟಿ ಮಾಡುತ್ತಿದ್ದಾರೆ. ನಾನು ಮಂಗಳವಾರ ಆ ಭಾಗದ ಸಂಸದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚೆ ಮಾಡಿದ್ದೇನೆ. ನಾನು ಹೈಕಮಾಂಡ್ ನಾಯಕರಿಗೆ ವರದಿ ನೀಡುತ್ತೇನೆ. ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com