ಕರ್ನಾಟಕ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಧಿಕೃತ ಘೋಷಣೆ, ನಾಳೆ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಮಲ್ಲಿಕಾರ್ಜುನ್ ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ.
Umesh Meti and Samarth Mallikarjun
ಉಮೇಶ್ ಮೇಟಿ ಮತ್ತು ಸಮರ್ಥ್ ಮಲ್ಲಿಕಾರ್ಜುನ್
Updated on

ಬೆಂಗಳೂರು: ಕೊನೆಗೂ ಕಾಂಗ್ರೆಸ್ ನಲ್ಲಿ ಕರ್ನಾಟಕ ಉಪಚುನಾವಣೆಗೆ ಟಿಕೆಟ್ ಹಂಚಿಕೆ ಕಗ್ಗಂಟು ಬಗೆಹರಿದಿದೆ. ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಭಾನುವಾರ ಅಧಿಕೃತವಾಗಿ ಘೋಷಿಸಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಮಲ್ಲಿಕಾರ್ಜುನ್ ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ.

ಶಾಮನೂರು ಕುಟುಂಬದ ಮೂರನೇ ತಲೆಮಾರಿಗೆ ಟಿಕೆಟ್

ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಧೀಮಂತ ನಾಯಕ, ದಿವಂಗತ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಅವರನ್ನು ಕಣಕ್ಕಿಳಿಸಲಾಗಿದೆ. ಸಮರ್ಥ್ ಅವರು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಪುತ್ರರಾಗಿದ್ದಾರೆ.

ಈ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ನೇತೃತ್ವದ ಮುಸ್ಲಿಂ ನಾಯಕರು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದರು. ಸಿಎಂ ಸಿದ್ದರಾಮಯ್ಯ ಮುಸ್ಲಿಂ ಅಭ್ಯರ್ಥಿ ಪರವಾಗಿದ್ದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಮರ್ಥ್ ಅವರ ಪರವಾಗಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ಅಂತಿಮವಾಗಿ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನಿನ್ನೆ ಬೆಂಗಳೂರಿನಲ್ಲಿ ನಡೆಸಿದ ಸಂಧಾನ ಸಭೆಯಲ್ಲಿ ಎಲ್ಲರೂ ಒಮ್ಮತಕ್ಕೆ ಬಂದು ಸಮರ್ಥ್ ಅವರನ್ನು ಕಣಕ್ಕಿಳಿಸಲು ಒಪ್ಪಿಕೊಂಡರು ಎಂದು ತಿಳಿದುಬಂದಿದೆ.

Umesh Meti and Samarth Mallikarjun
Karnataka bypolls: ಕ್ಲೈಮ್ಯಾಕ್ಸ್ ತಲುಪಿದ ಕಾಂಗ್ರೆಸ್ ಟಿಕೆಟ್ ಹಂಚಿಕೆ; ಅಂತಿಮ ಘೋಷಣೆಯೊಂದೇ ಬಾಕಿ, ಒಗ್ಗಟ್ಟಿನ ಮಂತ್ರ ಜಪಿಸಿದ ನಾಯಕರು

ಮೇಟಿ ಪುತ್ರನಿಗೆ ಟಿಕೆಟ್

ಇನ್ನು ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ದಿವಂಗತ ಎಚ್.ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಮೇಟಿ ಅವರ ನಿಧನದಿಂದ ಕುಟುಂಬದ ಸದಸ್ಯರ ನಡುವೆಯೇ ಟಿಕೆಟ್‌ಗೆ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿ ಒಮ್ಮತದ ನಿರ್ಧಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್ ನ ಈ ಇಬ್ಬರೂ ಅಭ್ಯರ್ಥಿಗಳು ನಾಳೆ ಮಾರ್ಚ್ 23ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

Umesh Meti and Samarth Mallikarjun
ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com