ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ವಿರುದ್ಧ ಮುಸ್ಲಿಂರ ಆಕ್ರೋಶ ಸ್ಫೋಟ; ಸಾಮೂಹಿಕ ನಾಮಪತ್ರ ಸಲ್ಲಿಕೆಗೆ ನಿರ್ಧಾರ

ಅಖ್ತರ್ ರಜಾ ಸರ್ಕಲ್ ನಲ್ಲಿ ಜಮಾಯಿಸಿದ್ದ ಮುಸ್ಲಿಂ ಸಮುದಾಯದ ಯುವಕರು, ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
Muslim leader Protest
ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಮುಸ್ಲಿಂರ ಆಕ್ರೋಶ ಸ್ಫೋಟ
Updated on

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಮುಸ್ಲಿಂರ ಆಕ್ರೋಶ ಸ್ಫೋಟಗೊಂಡಿದ್ದು, ಪ್ರತಿಭಟನೆ ನಡೆಸಿದ್ದಾರೆ.

ನಗರದ ಅಖ್ತರ್ ರಜಾ ಸರ್ಕಲ್ ನಲ್ಲಿ ಜಮಾಯಿಸಿದ್ದ ಮುಸ್ಲಿಂ ಸಮುದಾಯದ ಯುವಕರು, ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ದ್ರೋಹ ಬಗೆದಿದೆ ಎಂದು ಘೋಷಣೆ ಕೂಗಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಸಾಕಷ್ಟು ಮನವಿ ಮಾಡಿದ್ರು ನಮ್ಮ ಮನವಿ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಕೇವಲ ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡಿದೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿರುವ ಮುಖಂಡರು, ಸಾಮೂಹಿಕವಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ.

Muslim leader Protest
ದಾವಣಗೆರೆ ದಕ್ಷಿಣ: ಸಮರ್ಥ್ ಆಸ್ತಿ ವಿವರ ಘೋಷಣೆ; ಕೋಟಿಗಳ ಒಡೆಯ ಶಾಮನೂರು ಮೊಮ್ಮಗ!

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲು ಮುಖಂಡ ಸಾದಿಕ್ ಪೈಲ್ವಾನ್ ಸಜ್ಜಾಗಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಸಮರ್ಥ ಶಾಮನೂರು ಕಾಂಗ್ರೆಸ್ ಅಭ್ಯರ್ಥಿ ಎಂದು ಪಕ್ಷ ಘೋಷಿಸಿದ ನಂತರ ಬೆಂಬಲಿಗರೊಂದಿಗೆ ಸಭೆ ನಡೆಸಿ ಈ ನಿರ್ಧಾರ ಘೋಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com