ದಾವಣಗೆರೆ ಕಾಂಗ್ರೆಸ್ ಬಂಡಾಯಕ್ಕೆ ಬಿಗ್ ಟ್ವಿಸ್ಟ್; ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಾದಿಕ್ ಪೈಲ್ವಾನ್!

ಸಿಎಂ ಸಿದ್ದರಾಮಯ್ಯ ಅವರು ಸಾದಿಕ್ ಪೈಲ್ವಾನ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಲು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Davanagere south by-election: Congress rebel candidate Sadiq Pailwan meets CM Siddaramaiah
ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಾದಿಕ್ ಪೈಲ್ವಾನ್
Updated on

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಬಂಡಾಯಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಮಪತ್ರ ಹಿಂಪಡೆಯದೇ ಕಣದಲ್ಲಿ ಉಳಿದಿದ್ದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಖಾನ್ ಅವರು ಇಂದು ಸಾದಿಕ್ ಪೈಲ್ವಾನ್ ಅವರನ್ನು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಕರೆದುಕೊಂಡು ಬಂದಿದ್ದರು.

ಸಿಎಂ ಸಿದ್ದರಾಮಯ್ಯ ಅವರು ಸಾದಿಕ್ ಪೈಲ್ವಾನ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಲು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಎಸ್‌ಎಸ್ ಮಲ್ಲಿಕಾರ್ಜುನ ಪುತ್ರ ಸಮರ್ಥ್ ಗೆ ಟಿಕೆಟ್ ನೀಡಿದ್ದಕ್ಕಾಗಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಾದಿಕ್ ಪೈಲ್ವಾನ್ ಅವರು ಸಿಎಂ ಸಿದ್ದರಾಮಯ್ಯ ಮಾತಿಗೆ ಸಮ್ಮತಿ ಸೂಚಿಸಿದ್ದು, ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.

Davanagere south by-election: Congress rebel candidate Sadiq Pailwan meets CM Siddaramaiah
ದಾವಣಗೆರೆ ದಕ್ಷಿಣದಲ್ಲಿ 'ಕೈ' ಗೆ ಬಂಡಾಯದ ಬಿಸಿ: ನಾನೊಬ್ಬ ಪೈಲ್ವಾನ್, ಹಿಂದೆ ಸರಿಯುವ ಮಾತೇ ಇಲ್ಲ; ಪಕ್ಷೇತರ ಅಭ್ಯರ್ಥಿಯಾಗಿ ಸಾದಿಕ್ ಸ್ಪರ್ಧೆ?

ಟಿಕೆಟ್ ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡು ನಾಮಪತ್ರ‌ ಸಲ್ಲಿಸಿದ್ದೆ, ನಿಮ್ಮ ಜೊತೆಗಿನ ಮಾತುಕತೆ ಸಮಾಧಾನ ತಂದಿದೆ. ಈಗಿನಿಂದಲೇ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇನೆ. ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬಾರದು, ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆಂದು ಸಾದಿಕ್ ಅವರು ಸಿಎಂಗೆ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಇದೆ.

ಸಿಎಂ ಭೇಟಿ ಬಳಿಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಗೆ ಸಾದಿಕ್ ಪೈಲ್ವಾನ್ ತೆರಳಿದ್ದಾರೆ. ಈ ಮೂಲಕ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಬಂಡಾಯ ಶಮನವಾದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com