ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಕಾರ್ಯ ಮಾಡಲಿಲ್ಲ: ಸಿಎಂ ಸಿದ್ದರಾಮಯ್ಯ-Video

ಆತ್ಮೀಯರೂ-ಪಕ್ಷ ನಿಷ್ಠೆ ಇದ್ದವರಾಗಿದ್ದ ಎಚ್.ವೈ. ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಗೆಲ್ಲಬೇಕು. ನಾನೇ ಚುನಾವಣೆಗೆ ನಿಂತಿದ್ದೀನಿ ಎಂದುಕೊಂಡು ಮತ ಹಾಕಿ ಎಂದು ಮನವಿ ಮಾಡಿದರು.
CM Siddaramaiah in Bagalkote
ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ
Updated on

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಆಲಮಟ್ಟಿ ವಿಚಾರದಲ್ಲಿ ಜನವಿರೋಧಿ ನಿಲುವು ಹೊಂದಿದೆ. ಹದಿಮೂರು ವರ್ಷಗಳಿಂದ ಗೆಜೆಟ್ ನೋಟಿಫಿಕೇಶನ್ ಕೂಡ ಮಾಡಲಿಲ್ಲ. ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗಲೂ ಭೂ ಪರಿಹಾರ ಘೋಷಿಸಿದರೂ ಹಣ ನೀಡಲಿಲ್ಲ ಎಂದು ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಒಂದೇ ಒಂದು ರೂಪಾಯಿ ರೈತರ ಸಾಲ ಮನ್ನಾ ಮಾಡಲಿಲ್ಲ ಅಧಿಕಾರದಲ್ಲಿದ್ದಾಗ ಜನರಿಗೆ ಸ್ಪಂದಿಸದೆ, ಈಗ ನಮ್ಮ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಮತ ಕೇಳುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.

ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಉಮೇಶ್ ಮೇಟಿ ಪರ ಪ್ರಚಾರ ಮಾಡಿದ ಅವರು, ನನ್ನ ಆತ್ಮೀಯರೂ-ಪಕ್ಷ ನಿಷ್ಠೆ ಇದ್ದವರಾಗಿದ್ದ ಎಚ್.ವೈ. ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಗೆಲ್ಲಬೇಕು. ನಾನೇ ಚುನಾವಣೆಗೆ ನಿಂತಿದ್ದೀನಿ ಎಂದುಕೊಂಡು ಮತ ಹಾಕಿ ಎಂದು ಮನವಿ ಮಾಡಿದರು.


ನುಡಿದಂತೆ ನಡೆದು ಕೆಲಸ ಮಾಡುತ್ತಿರುವ ನಮ್ಮ ಸರ್ಕಾರದ ಬಗ್ಗೆ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಆದರೆ, ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ಬಾಕಿ ಉಳಿಸಿದ್ದ 30 ಸಾವಿರ ಕೋಟಿಯಲ್ಲಿ ನಮ್ಮ ಸರ್ಕಾರ 24 ಸಾವಿರ ಕೋಟಿ ರೂಪಾಯಿ ಬಾಕಿ ತೀರಿಸಿದೆ. ಹಣ ಇಲ್ಲದಿದ್ದರೂ ಬಿಜೆಪಿಯವರು ಗುತ್ತಿಗೆ ನೀಡಿ ಹೋದರು ಎಂದರು.

CM Siddaramaiah in Bagalkote
ಬಾಗಲಕೋಟೆ ಉಪಚುನಾವಣೆ: ಸಿದ್ದರಾಮಯ್ಯ, ವಿಜಯೇಂದ್ರಗೆ ಪ್ರತಿಷ್ಠೆಯ ಕಣ; ಭರ್ಜರಿ ಪ್ರಚಾರ!

ಆಲಮಟ್ಟಿ ಅಣೆಕಟ್ಟನ್ನು 524 ಮೀಟರ್ ಗೆ ಎತ್ತರಿಸುವ ಹಾಗೂ ರೈತರಿಗೆ ಪರಿಹಾರ ಕೊಡುವ ಕೆಲಸ ಮಾಡದ ಬಿಜೆಪಿ ಈ ಭಾಗದ ಅಭಿವೃದ್ಧಿಯನ್ನೇ ಮಾಡಲಿಲ್ಲ.ವೀರಣ್ಣ ಚರಂತಿಮಠ್ ಅವರನ್ನು ನೋಡುವುದೇ ಕಷ್ಟ, ಮನೆಗೆ ಯಾರನ್ನೂ ಸೇರಿಸದ ಚರಂತಿಮಠ್ ಅವರು ಶಾಸಕರಾಗಲು ಲಾಯಕ್ಕಾ ಎನ್ನುವುದನ್ನು ಯೋಚಿಸಿ. ಮೇಟಿ ಅವರು ಅತ್ಯಂತ ಸರಳ ಮತ್ತು ಜನಪರ ವ್ಯಕ್ತಿ ಆಗಿದ್ದರು. ಇವರ ಮಗ ಉಮೇಶ್ ಮೇಟಿ ಅವರನ್ನು ಗೆಲ್ಲಿಸಿದರೆ ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದರು.

ಎಲ್ಲರ ಹಿತ ಮತ್ತು ಸರ್ವ ಜನಾಂಗದ ಏಳಿಗೆಯನ್ನು ಬಯಸುವ ಪಕ್ಷ ಕಾಂಗ್ರೆಸ್ ಪಕ್ಷ. ಬಿಜೆಪಿಯವರು ಕೃಷ್ಣಾ ಮೇಲ್ದಂಡೆ ಜಾರಿ ಮಾಡಲಿಲ್ಲ. 13 ವರ್ಷದಿಂದ ಈ ಬಗ್ಗೆ ಗೆಜೆಟ್ ನೋಟಿಫಿಕೇಶನ್ ಮಾಡಲಿಲ್ಲ. ಕೇಂದ್ರದಲ್ಲಿ ಇರುವುದು ಚರಂತಿಮಠ್ ಅವರ ಪಕ್ಷ. ನಾವು ಹಲವು ಬಾರಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ನೀರಾವರಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದರೂ ನಮ್ಮ ಮನವಿಯನ್ನು ಈಡೇರಿಸಲಿಲ್ಲ. ಇವತ್ತು ಬಾಗಲಕೋಟೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಬರುತ್ತಿರುವುದಕ್ಕೆ ಮೇಟಿಯವರ ಶ್ರಮ ಕಾರಣ. ಹೀಗಾಗಿ ಉಮೇಶ್ ಮೇಟಿಯವರನ್ನೂ ಗೆಲ್ಲಿಸಿ ಕಳುಹಿಸಿದರೆ ನನ್ನ ಕೈ ಬಲಪಡಿಸಿದಂತಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com