

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರ ಹೆಸರಿನಲ್ಲಿ ಎಂತಹ ರಾಜಕೀಯ ಮಾಡಿದರೂ ಯಾವುದೇ ಪ್ರಯೋಜನವಿಲ್ಲ, ಬಿಜೆಪಿ ಮುಳುಗುತ್ತಿರುವ ಹಡಗು, ಹಡಗಿನ ತುಂಬಾ ತೂತು ಬಿದ್ದಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಯಡಿಯೂರಪ್ಪ ಅಭಿಮಾನೋತ್ಸವದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಯಡಿಯೂರಪ್ಪ ಇದ್ದಾಗಲೇ ಪಕ್ಷ ಬಹುತ ಪಡೆಯಲು ಸಾಧ್ಯವಿಲ್ಲ. ಈಗ ಬಿಜೆಪಿ ಒಡೆದ ಮನೆಯಾಗಿದ್ದು, ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ.. 2028 ರಲ್ಲಿ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ನಮ್ಮದು ಶಿಸ್ತಿನ ಪಕ್ಷ, ಬಿಜೆಪಿಯಲ್ಲಿರುವಷ್ಟು ನಮ್ಮ ಪಕ್ಷದಲ್ಲಿ ಗೊಂದಲ ಇಲ್ಲ, ಹೀಗಿರುವಾಗ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಬಿಜೆಪಿಗೆ ಯಾವ ನೈತಿಕತೆಯಿದೆ ಎಂದು ಶಿವರಾಜ್ ತಂಗಡಗಿ ಪ್ರಶ್ನಿಸಿದ್ದಾರೆ.
ಇನ್ನೂ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ಹಲವು ಕಾಂಗ್ರೆಸ್ ಶಾಸಕರು ಮೂರು ಬಾರಿ ಗೆಲುವು ಕಂಡಿದ್ದಾರೆ, ಹೀಗಿರುವಾಗ ಸಚಿವ ಸ್ಥಾನ ಬಯಸುವುದು ಸಹಜ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಯಾರಿಗೆ ಏನೇನು ಕೊಡಬೇಕೋ ಅದರಂತೆ ಎಲ್ಲವನ್ನು ಕೊಡುತ್ತದೆ ಎಂದರು.
Advertisement