ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಆ ಬಗ್ಗೆ ಚರ್ಚೆ ಅಪ್ರಸ್ತುತ: ಪ್ರಿಯಾಂಕ್ ಖರ್ಗೆ

ತಮ್ಮ ತಂದೆ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಆದ್ದರಿಂದ ಯಾವುದೇ ಬದಲಾವಣೆ ಕುರಿತ ಚರ್ಚೆ ಅಪ್ರಸ್ತುತವಾಗಿದೆ ಎಂದು ಪ್ರಿಯಾಂಕ್ ಗಾಂಧಿ ನಿನ್ನೆ ಸುದ್ದಿಗಾರರಿಗೆ ತಿಳಿಸಿದರು.
Minister Priyank Kharge
ಸಚಿವ ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಲ್ಲಿ ಯಾವುದೇ ಬದಲಾವಣೆ ಸಾಧ್ಯತೆ ಇಲ್ಲ, ಆ ಹುದ್ದೆ ಖಾಲಿ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ತಮ್ಮ ತಂದೆ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಆದ್ದರಿಂದ ಯಾವುದೇ ಬದಲಾವಣೆ ಕುರಿತ ಚರ್ಚೆ ಅಪ್ರಸ್ತುತವಾಗಿದೆ ಎಂದು ಪ್ರಿಯಾಂಕ್ ಗಾಂಧಿ ನಿನ್ನೆ ಸುದ್ದಿಗಾರರಿಗೆ ತಿಳಿಸಿದರು.

Minister Priyank Kharge
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಲ್ಲ, ಅದು ಚುನಾವಣಾ ಆಯೋಗದ ಜಯ: ಪ್ರಿಯಾಂಕ್ ಖರ್ಗೆ; Video

ಜೂನ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆ ಅವರ ಈ ಹೇಳಿಕೆ ಮಹತ್ವ ಪಡೆದಿದೆ. ಕರ್ನಾಟಕ ಕಾಂಗ್ರೆಸ್ ವಲಯದಲ್ಲಿ ನಾಯಕತ್ವ ಹಾಗೂ ಸರ್ಕಾರದಲ್ಲಿ ಸಂಭವನೀಯ ಬದಲಾವಣೆಗಳ ಬಗ್ಗೆ ನಡೆಯುತ್ತಿರುವ ರಾಜಕೀಯ ಚರ್ಚೆಗಳ ನಡುವೆಯೇ ಈ ಪ್ರತಿಕ್ರಿಯೆ ಬಂದಿದೆ. ಪ್ರಸ್ತುತ ನಾಯಕತ್ವ ವ್ಯವಸ್ಥೆಯ ಕುರಿತು ಹೈಕಮಾಂಡ್‌ನ ನಿಲುವನ್ನು ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಮತ್ತೊಮ್ಮೆ ಬಲಪಡಿಸಿದೆ.

ಅಕ್ಟೋಬರ್ ಕ್ರಾಂತಿ ಅಥವಾ ನವೆಂಬರ್ ಕ್ರಾಂತಿ ಎಂಬ ಊಹಾಪೋಹಗಳ ನಡುವೆ ಮುಖ್ಯಮಂತ್ರಿ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಗಳು ಅಕ್ಟೋಬರ್‌ನಿಂದಲೇ ಕೇಳಿಬರುತ್ತಿದ್ದವು. ಮುಖ್ಯಮಂತ್ರಿ ಬದಲಾವಣೆ ಕುರಿತು ಕಾಂಗ್ರೆಸ್ ಅಧಿಕೃತವಾಗಿ ಇನ್ನೂ ಯಾವುದೇ ಘೋಷಣೆ ಮಾಡಿಲ್ಲ, ಆದರೆ ಕೆಲವರು ಜೂನ್‌ನಲ್ಲಿ ಬದಲಾವಣೆ ಸಂಭವಿಸಬಹುದು ಎಂದು ಹೇಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com