ಈಗಲ್‌ಟನ್‌ ರೆಸಾರ್ಟ್'ನಲ್ಲಿ ತಮಿಳುನಾಡು ಶಾಸಕರು ತಂಗಿದ್ದಾರೆ ಎಂಬ ಸುದ್ದಿ ಸುಳ್ಳು: ಡಿಕೆ.ಶಿವಕುಮಾರ್

ಯಾವುದೇ ತಮಿಳುನಾಡು ಕಾಂಗ್ರೆಸ್‌ ಶಾಸಕರು ಈಗಲ್‌ಟನ್ ರಿಸಾರ್ಟ್‌ಗೆ ಬಂದಿಲ್ಲ. ಅವರು ಹೈದರಾಬಾದ್‌ಗೆ ತೆರಳಿದ್ದಾರೆ ಎನ್ನುವುದೂ ಸತ್ಯವಲ್ಲ.
DCM D.K. Shivakumar
ಡಿಕೆ.ಶಿವಕುಮಾರ್
Updated on

ಬೆಂಗಳೂರು: ತಮಿಳುನಾಡು ಕಾಂಗ್ರೆಸ್‌ ಶಾಸಕರನ್ನು ಬೆಂಗಳೂರಿನ ಈಗಲ್‌ಟನ್ ರಿಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ ಎಂಬ ರಾಜಕೀಯ ಊಹಾಪೋಹಗಳಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತ ಎಲ್ಲಾ ವರದಿಗಳನ್ನು ಸಂಪೂರ್ಣ ಸುಳ್ಳು ಎಂದು ತಳ್ಳಿಹಾಕಿದ್ದಾರೆ.

ಬೆಂಗಳೂರುದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, “ಯಾವುದೇ ತಮಿಳುನಾಡು ಕಾಂಗ್ರೆಸ್‌ ಶಾಸಕರು ಈಗಲ್‌ಟನ್ ರಿಸಾರ್ಟ್‌ಗೆ ಬಂದಿಲ್ಲ. ಅವರು ಹೈದರಾಬಾದ್‌ಗೆ ತೆರಳಿದ್ದಾರೆ ಎನ್ನುವುದೂ ಸತ್ಯವಲ್ಲ. ಈ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ತಮಿಳುನಾಡಿನ ಕಾಂಗ್ರೆಸ್‌ ಶಾಸಕರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂಬ ಚರ್ಚೆಗಳು ಕಳೆದ ಕೆಲವು ದಿನಗಳಿಂದ ಜೋರಾಗಿದ್ದು, ವಿಶೇಷವಾಗಿ ಬೆಂಗಳೂರಿನ ಹೊರವಲಯದಲ್ಲಿರುವ ಈಗಲ್‌ಟನ್ ರಿಸಾರ್ಟ್‌ನಲ್ಲಿ ಶಾಸಕರನ್ನು ತಂಗಿಸಲಾಗಿದೆ ಎಂಬ ಮಾತುಗಳು ಹರಿದಾಡುತ್ತಿದ್ದವು. ಆದರೆ, ಈ ಎಲ್ಲ ವರದಿಗಳಿಗೆ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ.

ಪಕ್ಷದ ಹೈಕಮಾಂಡ್‌ ಯಾವುದೇ ಸೂಚನೆ ನೀಡಿದರೆ ಅದು ಬೇರೆ ವಿಷಯ. ಆದರೆ, ಈ ವಿಚಾರವಾಗಿ ಹೈಕಮಾಂಡ್‌ ನನ್ನೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

DCM D.K. Shivakumar
ನೀವೊಬ್ಬರು ಸಚಿವರು...ಹೀಗೆ ಕೇಳಿದ್ರೆ ಹೇಗೆ; ಸಚಿವ ತಿಮ್ಮಾಪುರ ವಿರುದ್ಧ ಡಿಕೆ.ಶಿವಕುಮಾರ್ ಗರಂ

ರಾಜಕೀಯ ಬೆಳವಣಿಗೆಗಳ ಸಂದರ್ಭದಲ್ಲಿ ಶಾಸಕರನ್ನು ರಿಸಾರ್ಟ್‌ಗಳಿಗೆ ಸ್ಥಳಾಂತರಿಸುವ ಘಟನೆಗಳು ದೇಶದ ಹಲವು ರಾಜ್ಯಗಳಲ್ಲಿ ನಡೆದಿರುವ ಹಿನ್ನೆಲೆ, ಈ ಸುದ್ದಿ ಕೂಡ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ವಿಶೇಷವಾಗಿ ಕರ್ನಾಟಕ ರಾಜಕೀಯದಲ್ಲಿ ರಿಸಾರ್ಟ್‌ ರಾಜಕಾರಣದ ಅನುಭವವಿರುವ ಡಿಕೆ ಶಿವಕುಮಾರ್ ಹೆಸರು ಕೇಳಿಬಂದ ಕಾರಣ, ಈ ಊಹಾಪೋಹಗಳು ಮತ್ತಷ್ಟು ತೀವ್ರಗೊಂಡಿದ್ದವು. ಆದರೆ, ಡಿಕೆ ಶಿವಕುಮಾರ್ ನೀಡಿರುವ ಸ್ಪಷ್ಟನೆ ಬಳಿಕ, ತಮಿಳುನಾಡು ಕಾಂಗ್ರೆಸ್‌ ಶಾಸಕರ ಸ್ಥಳಾಂತರದ ಬಗ್ಗೆ ಹರಿದಾಡುತ್ತಿದ್ದ ಸುದ್ದಿಗಳಿಗೆ ತಾತ್ಕಾಲಿಕ ತೆರೆ ಬಿದ್ದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com