ಕರ್ನಾಟಕದಲ್ಲಿ ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ, ಅವರಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ: ಪ್ರಧಾನಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್

ರಾಯಚೂರಿನ ಲಿಂಗಸಗೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.
Narendra Modi- DK Shivakumar
ನರೇಂದ್ರ ಮೋದಿ- ಡಿಕೆ ಶಿವಕುಮಾರ್ online desk
Updated on

ಲಿಂಗಸಗೂರು: "ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿಯವರ ಕಣ್ಣಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು‌.

ರಾಯಚೂರಿನ ಲಿಂಗಸಗೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಕರ್ನಾಟಕದಲ್ಲಿ ಸಿಎಂ ಕುರ್ಚಿ ಅಲುಗಾಡುತ್ತಿದೆ. ಕೇರಳ, ಪಂಜಾಬ್ ನಲ್ಲೂ ಇದೇ ರೀತಿ ಆಗಿದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಈ ರೀತಿ ಉತ್ತರಿಸಿದರು.

Narendra Modi- DK Shivakumar
ಜನರಿಗೆ ದ್ರೋಹ ಮಾಡುವುದೇ ಕಾಂಗ್ರೆಸ್ ಕೆಲಸ, ಜನರ ಸಮಸ್ಯೆಗಿಂತ ಅಧಿಕಾರದ ಜಗಳವೇ ಮುಖ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಸಚಿವ ಸುಧಾಕರ್ ಅವರು ಇರಬೇಕಿತ್ತು

ಡಿ ಸುಧಾಕರ್ ಅವರ ನಿಧನದ ಬಗ್ಗೆ ಕೇಳಿದಾಗ, "ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಅವರು ನಮ್ಮೊಡನೆ ಇರಬೇಕಿತ್ತು. ಅವರ ಅನಾರೋಗ್ಯದ ಕಾರಣಕ್ಕೆ ಇದು ಸಾಧ್ಯವಾಗಲಿಲ್ಲ. ನನ್ನನ್ನ,‌ ಮುಖ್ಯಮಂತ್ರಿ ಅವರನ್ನ ಭೇಟಿ ಮಾಡಿದಾಗಲೆಲ್ಲ ಸದಾ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತಾಗಿ ಮನವಿ ಮಾಡುತ್ತಲೇ ಇದ್ದರು. ಜೈನ ಸಮುದಾಯಕ್ಕೆ ಸೇರಿದವರು. ಕಡಿಮೆ ಜನಸಂಖ್ಯೆ ಇದ್ದರು ಸಹ ಎಲ್ಲಾ ಸಮುದಾಯದ ಜನರನ್ನ ಪ್ರೀತಿಯಿಂದ ಕಾಣುತ್ತಿದ್ದರು. ಹೃದಯ ಶ್ರೀಮಂತಿಕೆ ಇದ್ದಂತಹ ಮನುಷ್ಯ. ಇವರ ಸಾವಿನಿಂದ ನಮ್ಮ ಸರ್ಕಾರಕ್ಕೆ, ಕ್ಷೇತ್ರಕ್ಕೆ ನಷ್ಟ ಉಂಟಾಗಿದೆ. ನನಗೆ ವೈಯಕ್ತಿಕವಾಗಿ ಬಹಳ ಆಘಾತ ಉಂಟಾಗಿದೆ" ಎಂದರು.

ಸಮಸ್ಯೆ ಪರಿಹಾರಕ್ಕೆ ಕ್ರಮ

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸದನದಲ್ಲಿ ಚರ್ಚೆಯಾಗಿರುವ ಕುರಿತು ಕೇಳಿದಾಗ, "ನನಗೆ ಇದರ ಬಗ್ಗೆ ಗೊತ್ತಿಲ್ಲ. ನನ್ನ ಇಲಾಖೆಯಿಂದ ಕುಡಿಯುವ ನೀರು ನೀಡಲು ಆದ್ಯತೆಯಿದೆ. ಈ ಬಗ್ಗೆ ನಮ್ಮ ಅಧಿಕಾರಿಗಳ ಬಳಿ ಮಾತನಾಡಿ ಏನು ಪರಿಹಾರ ಮಾಡಬೇಕೋ ಮಾಡುತ್ತೇನೆ" ಎಂದು ಹೇಳಿದರು‌.

X

Advertisement

X
Kannada Prabha
www.kannadaprabha.com