ಪ್ರಧಾನಿ ಮೋದಿಯನ್ನು ಟೀಕಿಸುವ ಮುನ್ನ ಸಿದ್ದರಾಮಯ್ಯ ಎರಡು ಬಾರಿ ಯೋಚಿಸಬೇಕು: H D ದೇವೇಗೌಡ

ಪ್ರಧಾನಿ ಮೋದಿ ಅವರ ಹೇಳಿಕೆಗಳನ್ನು ಸಿದ್ದರಾಮಯ್ಯ ಲಘುವಾಗಿ ತೆಗೆದುಕೊಳ್ಳಬಾರದು ಎಂದು ದೇವೇಗೌಡರು ಹೇಳಿದರು.
Former PM and JDS supremo HD Deve Gowda addresses media at Mosalehosahalli village in Hassan district
ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ H. D. ದೇವೇಗೌಡ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದರು.
Updated on

ಹಾಸನ ಜಿಲ್ಲೆ ಮೊಸಳೆಹೊಸಹಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಿತವ್ಯಯ ಕ್ರಮಗಳನ್ನು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ಸಂಕಷ್ಟದಿಂದ ಜಾಗತಿಕ ಆರ್ಥಿಕ ವ್ಯವಸ್ಥೆ ಕುಸಿತದ ಅಂಚಿನಲ್ಲಿರುವ ಈ ಸೂಕ್ಷ್ಮ ಪರಿಸ್ಥಿತಿಯನ್ನು ಪ್ರಧಾನಿ ಮೋದಿ ರಾಜತಾಂತ್ರಿಕವಾಗಿ ನಿಭಾಯಿಸುತ್ತಿರುವ ಸಂದರ್ಭದಲ್ಲಿ, ಅವರನ್ನು ಟೀಕಿಸುವ ಮೊದಲು ಸಿದ್ದರಾಮಯ್ಯ ಎರಡು ಬಾರಿ ಯೋಚಿಸಬೇಕು ಎಂದು ಹೇಳಿದರು.

ಮೋದಿ ಅವರ ಹೇಳಿಕೆಗಳನ್ನು ಸಿದ್ದರಾಮಯ್ಯ ಲಘುವಾಗಿ ತೆಗೆದುಕೊಳ್ಳಬಾರದು ಎಂದು ದೇವೇಗೌಡರು ಹೇಳಿದರು.

Former PM and JDS supremo HD Deve Gowda addresses media at Mosalehosahalli village in Hassan district
KPSC ಹಾಳಾಗೋಕೆ ಕಾರಣ ಕಾಂಗ್ರೆಸ್: ಎಲ್ಲವನ್ನೂ ತೊಳೀತೀನಿ ಅಂತಾ ಹೇಳಿದ ಸಿಎಂ ಏನು ಮಾಡಿದ್ರು?

1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆಡಳಿತಾವಧಿಯನ್ನು ಸಿದ್ದರಾಮಯ್ಯ ನೆನಪಿಸಿಕೊಳ್ಳಬೇಕು ಎಂದ ಅವರು, ಆಗ ಇಂದಿರಾ ಗಾಂಧಿ ಜನರಿಗೆ ಒಂದು ದಿನ ಚಹಾ ಸೇವನೆ ಬಿಡಲು, ಊಟವನ್ನು ಕಡಿಮೆ ಮಾಡಲು ಅಥವಾ ದಿನಕ್ಕೆ ಎರಡು ಬಾರಿ ಕುಡಿಯುತ್ತಿದ್ದ ಚಹಾವನ್ನು ಒಂದೇ ಬಾರಿಗೆ ಇಳಿಸಲು ಮನವಿ ಮಾಡಿದ್ದರು ಎಂದು ಹೇಳಿದರು.

ಪ್ರಧಾನಿ ಮೋದಿ ಅವರ ಮಿತವ್ಯಯ ಕ್ರಮಗಳನ್ನು ಸಮರ್ಥಿಸಿಕೊಂಡ ದೇವೇಗೌಡ, ಜವಾಬ್ದಾರಿಯುತ ರಾಜಕಾರಣಿಯಾಗಿ ಸಿದ್ದರಾಮಯ್ಯ ಅವರು ಜಾಗತಿಕ ನಾಯಕನಾಗಿರುವ ಪ್ರಧಾನಿಯನ್ನು ಟೀಕಿಸುವ ಮೊದಲು ಎರಡು ಬಾರಿ ಯೋಚಿಸಬೇಕು. ದಾಖಲೆ 17 ಬಜೆಟ್‌ಗಳನ್ನು ಮಂಡಿಸಿರುವ ಸಿದ್ದರಾಮಯ್ಯ ಅವರು ಪ್ರಧಾನಿ ವಿರುದ್ಧ ಟೀಕೆ ಮಾಡುವ ಮುನ್ನ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

Former PM and JDS supremo HD Deve Gowda addresses media at Mosalehosahalli village in Hassan district
ಸಾಮಾನ್ಯ ಅಸಿಸ್ಟೆಂಟ್ ಡೈರೆಕ್ಟರ್ ಸನ್- ಈಗ ತಮಿಳುನಾಡಿನ ಸುಲ್ತಾನ್: ದಳಪತಿ ವಿಜಯ್ ಹಾಡಿ ಹೊಗಳಿದ ಎಚ್.ಡಿ ದೇವೇಗೌಡ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com